Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:2 - ಕನ್ನಡ ಸತ್ಯವೇದವು C.L. Bible (BSI)

2 ಸ್ತುತಿಸಲಿ ಆತನನು ವಿಮುಕ್ತಿ ಪಡೆದವರೆಲ್ಲರು I ಶತ್ರುಗಳಿಂದ ಬಿಡುಗಡೆ ಹೊಂದಿದವರೆಲ್ಲರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನ ವಿಮುಕ್ತರು ಅಂದರೆ ಆತನು ಶತ್ರುಗಳಿಂದ ಬಿಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನ ವಿಮುಕ್ತರು ಅಂದರೆ ಆತನು ಶತ್ರುಗಳಿಂದ ಬಿಡಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನಿಂದ ರಕ್ಷಿಸಲ್ಪಟ್ಟ ಪ್ರತಿಯೊಬ್ಬರೂ ಆತನಿಗೆ ಕೃತಜ್ಞತಾಸ್ತುತಿ ಮಾಡಲಿ. ಯೆಹೋವನು ಅವರನ್ನು ವೈರಿಗಳಿಂದ ಬಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರು ವಿಮೋಚಿಸಿದವರು ಹಾಗೆ ಹೇಳಲಿ; ವೈರಿಯ ಕೈಯಿಂದ ಬಿಡುಗಡೆಯಾದವರು ಆ ಕಥೆಯನ್ನು ಹೇಳಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:2
20 ತಿಳಿವುಗಳ ಹೋಲಿಕೆ  

ನಮಗಿತ್ತಿರುವರು ಶತ್ರುಗಳಿಂದ ರಕ್ಷಿಸುವನೆಂಬ ಅಭಯ II


ಮರಕ್ಕೆ ತೂಗುಹಾಕಲಾದ ಪ್ರತಿ ಒಬ್ಬನೂ ಶಾಪಗ್ರಸ್ತನು,” ಎಂದು ಬರೆದಿರುವಂತೆ, ನಮಗೋಸ್ಕರ ಕ್ರಿಸ್ತಯೇಸು ಶಾಪಸ್ವರೂಪಿಯಾಗಿ ಧರ್ಮಶಾಸ್ತ್ರದಲ್ಲಿ ಹೇಳಲಾಗಿರುವ ಶಾಪದಿಂದ ನಮ್ಮನ್ನು ಪಾರುಮಾಡಿದರು.


ತಪ್ಪಿಸಿದನವರನು ವೈರಿಗಳ ಕೈಯಿಂದ I ರಕ್ಷಿಸಿದನು ಆ ಶತ್ರುಗಳ ಹಿಡಿತದಿಂದ II


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ನನಗಾಧಾರ ನೀನಲ್ಲವೆ? ನನ್ನಾತ್ಮವನು ನಿನಗೊಪ್ಪಿಸಿರುವೆ I ನಂಬಿಕಸ್ತನಾದ ದೇವನೆ, ನೀಯೆನ್ನ ಮುಕ್ತಗೊಳಿಸಿರುವೆ II


ಸ್ತುತಿಸ್ತೋತ್ರ ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ I ತಾನಾಗಿ ಬಂದು ತನ್ನ ಪ್ರಜೆಯನ್ನು ಬಿಡುಗಡೆ ಮಾಡಿದಾತನಿಗೆ II


ಪರಿಹರಿಸಿದೆ ನಿನ್ನ ದ್ರೋಹಗಳನ್ನು ಮಂಜಿನಂತೆ ಚದರಿಸಿದ್ದೇನೆ ನಿನ್ನ ಪಾಪಗಳನು ಮೋಡದಂತೆ ವಿಮೋಚಿಸಿದ್ದೇನೆ ನೀ ನನಗೆ ಅಭಿಮುಖನಾಗಬೇಕೆಂದೆ.”


ಅಲ್ಲಿರದು ಸಿಂಹ ಸಿಂಹಿಣಿ, ಅಲ್ಲಿ ಸೇರದು ಕ್ರೂರ ಪ್ರಾಣಿ. ಕಾಣಸಿಗದಲ್ಲಿ ಇದಾವ ಹಾನಿ, ಪಾಪವಿಮುಕ್ತರೇ ನಡೆವರಲ್ಲಿ.


ಈಗಲಾದರೋ ಯಕೋಬ ವಂಶವೇ, ಇಸ್ರಯೇಲ್ ಸಂತಾನವೇ ಕೇಳು : ನಿನ್ನನ್ನು ಸೃಷ್ಟಿಸಿದ, ರೂಪಿಸಿದ ಸರ್ವೇಶ್ವರನ ನುಡಿಯನ್ನು ಕೇಳು; “ಭಯಪಡಬೇಡ, ನಿನ್ನನ್ನು ರಕ್ಷಿಸಿದಾತ ನಾನಲ್ಲವೆ? ನಿನ್ನನ್ನು ಹೆಸರು ಹಿಡಿದು ಕರೆದಾತ ನಾನಲ್ಲವೆ? ನೀನು ನನ್ನವನೇ ಅಲ್ಲವೆ?


ಇದು ಸರ್ವೇಶ್ವರನಾದ ನನ್ನ ಮಾತು. ನಿನ್ನನ್ನು ದುಷ್ಟರ ಕೈಯಿಂದ ಉದ್ಧರಿಸುವೆನು, ಕ್ರೂರಿಗಳ ಕೈಯಿಂದ ರಕ್ಷಿಸುವೆನು.”


‘ಪವಿತ್ರ ಪ್ರಜೆ’ ಎನಿಸಿಕೊಳ್ಳುವುದು ನಿಮ್ಮ ಜನತೆ ‘ಸರ್ವೇಶ್ವರ ಸ್ವಾಮಿಯೇ ಉದ್ಧರಿಸಿದ ಜನತೆ’. ನಿನ್ನ ಹೆಸರೋ, ‘ಪ್ರಾಪ್ತ ನಗರಿ’ ಪತಿ ವರಿಸಿ ಕೈ ಬಿಡದ ಪುರಿ.


ಆದರೂ ಸರ್ವೇಶ್ವರ ನಿಮ್ಮನ್ನು ಪ್ರೀತಿಸಿ, ತಾವು ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು, ಈಜಿಪ್ಟಿನ ರಾಜ ಫರೋಹನ ಕೈಕೆಳಗೆ ಗುಲಾಮರಾಗಿದ್ದ ನಿಮ್ಮನ್ನು ಬಿಡುಗಡೆಮಾಡಿ, ತಮ್ಮ ಭುಜಬಲ ಪ್ರಯೋಗಿಸಿ, ಆ ದೇಶದಿಂದ ಬರಮಾಡಿದ್ದಾರೆ.


ಸರ್ವೇಶ್ವರ ಯಕೋಬರ ವಿಮೋಚಕ ಅವರನ್ನು ಅವರಿಗಿಂತ ಬಲಿಷ್ಠರ ಕೈಯಿಂದ ಬಿಡಿಸಿದಾತ.


ಈಜಿಪ್ಟ್ ದೇಶದಲ್ಲಿ ನೀವೇ ಗುಲಾಮರಾಗಿದ್ದಿರಿ; ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಬಿಡುಗಡೆ ಮಾಡಿದರೆಂಬುದನ್ನು ಜ್ಞಾಪಕಮಾಡಿಕೊಳ್ಳಿ. ಇದಕ್ಕಾಗಿಯೇ, ನಾನೀಗ ಈ ಆಜ್ಞೆಯನ್ನು ನಿಮಗೆ ಕೊಟ್ಟಿದ್ದೇನೆ.


ಭಯಭೀತಿ ಅವರನ್ನು ಆವರಿಸಿದೆ ನಿನ್ನ ಭುಜಬಲ ನೋಡಿ ಸ್ತಬ್ದರಾಗಿಹರವರು ಕಲ್ಲಿನಂತೆ.


ಇಸ್ರಯೇಲನ್ನು ಬಿಡುಗಡೆಮಾಡುವ ಉದ್ಧಾರಕ ಅವರೇ ಎಂದು ನಾವು ನಂಬಿಕೊಂಡಿದ್ದೆವು. ಇಷ್ಟುಮಾತ್ರವಲ್ಲ, ಇದೆಲ್ಲಾ ಸಂಭವಿಸಿ ಇಂದಿಗೆ ಮೂರು ದಿನಗಳು ಆಗಿವೆ.


ಏಕೆಂದರೆ, ನನ್ನ ಜನರನು ಉದ್ಧರಿಸುವ ವರುಷವು ಬಂದಿತ್ತು ಮುಯ್ಯಿತೀರಿಸುವ ದಿನವು ನನ್ನ ಮನದಲ್ಲಿ ನಿಶ್ಚಿತವಾಗಿತ್ತು.


ಇಸ್ರಯೇಲನು ಉದ್ಧರಿಸುವನಾತ I ಅದು ಗೈದ ಸಕಲ ದೋಷಗಳಿಂದ II


ಸಿಯೋನ್ ಕುವರಿಯೇ, ಪ್ರಸವವೇದನೆಯಿಂದ ನರಳಾಡು; ಪಟ್ಟಣವನ್ನು ಬಿಟ್ಟು, ಬಯಲಿನಲ್ಲಿ ವಾಸಮಾಡು. ಬಾಬಿಲೋನಿಗೆ ತೆರಳು. ಅಲ್ಲೇ ನಿನಗೆ ಉದ್ಧಾರವಾಗುವುದು. ಅಲ್ಲೇ ನಿನ್ನ ಶತ್ರುಗಳಿಂದ ಸರ್ವೇಶ್ವರ ಬಿಡುಗಡೆ ಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು