Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:25 - ಕನ್ನಡ ಸತ್ಯವೇದವು C.L. Bible (BSI)

25 ಬಿರುಗಾಳಿಯೆದ್ದಿತು ಆತನಾಜ್ಞೆಯೊಂದಕ್ಕೆ I ತರಂಗಗಳು ಭೊರ್ಗರೆದವು ಅದರೊಂದಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆತನು ಅಪ್ಪಣೆಕೊಡಲು ಬಿರುಗಾಳಿಯುಂಟಾಗಿ, ಅದರಲ್ಲಿ ತೆರೆಗಳನ್ನು ಎಬ್ಬಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆತನು ಅಪ್ಪಣೆಕೊಡಲು ಬಿರುಗಾಳಿಯುಂಟಾಗಿ ಅದರಲ್ಲಿ ತೆರೆಗಳನ್ನು ಎಬ್ಬಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆತನು ಆಜ್ಞಾಪಿಸಲು ಬಲವಾದ ಗಾಳಿ ಬೀಸತೊಡಗಿತು; ಅಲೆಗಳು ದೊಡ್ಡದಾಗತೊಡಗಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ದೇವರು ಆಜ್ಞಾಪಿಸಿ ಬಿರುಗಾಳಿಯನ್ನು ಎಬ್ಬಿಸಿದರು; ಅದು ಅದರ ತೆರೆಗಳನ್ನು ಎಬ್ಬಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:25
9 ತಿಳಿವುಗಳ ಹೋಲಿಕೆ  

ಆದರೆ ಸರ್ವೇಶ್ವರ ಸಮುದ್ರದಲ್ಲಿ ಬಿರುಗಾಳಿಯೊಂದನ್ನು ಬರಮಾಡಿದರು. ಅಲೆಗಳ ಹೊಡೆತಕ್ಕೆ ಹಡಗು ನುಚ್ಚುನೂರಾಗಿ ಒಡೆದುಹೋಗುವುದರಲ್ಲಿತ್ತು. ದಿಗ್ಭ್ರಾಂತರಾದ ನಾವಿಕರು ಪ್ರಾಣರಕ್ಷಣೆಗಾಗಿ ತಮ್ಮ ದೇವದೇವತೆಗಳ ಮೊರೆ ಹೊಕ್ಕರು. ಪ್ರಾಣಾಪಾಯದಿಂದ ಪಾರಾಗಲು ತಮ್ಮಲ್ಲಿದ್ದ ಸರಕುಸಾಮಗ್ರಿಗಳನ್ನು ಸಮುದ್ರಕ್ಕೆ ಎಸೆದರು.


ಇದ್ದಕ್ಕಿದ್ದ ಹಾಗೆ ಸರೋವರದಲ್ಲಿ ರಭಸವಾದ ಬಿರುಗಾಳಿ ಎದ್ದಿತು. ದೋಣಿ ಅಲೆಗಳಿಂದ ಮುಳುಗಿಹೋಗುವುದರಲ್ಲಿತ್ತು. ಯೇಸುವಾದರೋ ನಿದ್ರಾವಶರಾಗಿದ್ದರು.


ಕಿಚ್ಚು, ಕಲ್ಮಳೆ, ಹಿಮ, ಹಬೆ ಇವುಗಳೆಲ್ಲವೂ I ಆತ ಹೇಳಿದಂತೆ ಕೇಳುವ ಬಿರುಗಾಳಿಯೂ, II


ಆತ ನುಡಿದದ್ದೇ, ಬಂದವು ಮಿಡತೆಗಳು I ಅಗಣಿತವಾದ ಸಂಖ್ಯೆಯಲಿ ಚಿಟ್ಟೆಹುಳುಗಳು II


ಸಮುದ್ರಗಳು ಪ್ರಭು, ಮೊರೆಯುತಿಹವು I ಗರ್ಜನೆಗೈದು ಭೋರ್ಗರೆಯುತಿಹವು II


ಅಷ್ಟರಲ್ಲಿ ರಭಸವಾದ ಗಾಳಿ ಬೀಸತೊಡಗಿತು. ಸರೋವರವು ಅಲ್ಲೋಲಕಲ್ಲೋಲವಾಯಿತು.


ಏಳಮಾಡುವನು ದಿಗಂತದೊಳು ಮೋಡವನು I ಹೊಳೆಯಮಾಡುವನು ಮಳೆಗೋಸ್ಕರ ಮಿಂಚನು I ಬೀಸಮಾಡುವನು ಉಗ್ರಾಣದಿಂದ ಗಾಳಿಯನು II


ಕಾಣಿಸಿಕೊಂಡವು ಆತನಾಜ್ಞಾಪಿಸಲು I ಹುಳುಹುಪ್ಪಟೆಗಳು ಪ್ರಾಂತ್ಯದೆಲ್ಲೆಡೆಯೊಳು II


ಇಷ್ಟರೊಳಗೆ ಯೋನನು ಹಡಗಿನ ತಳಭಾಗಕ್ಕೆ ಇಳಿದುಹೋಗಿ ಹಾಯಾಗಿ ಮಲಗಿದ್ದನು. ಅವನಿಗೆ ಗಾಢನಿದ್ರೆ ಹತ್ತಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು