Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:27 - ಕನ್ನಡ ಸತ್ಯವೇದವು C.L. Bible (BSI)

27 ಅಡ್ಡಾಡಿದರು, ಹೊಯ್ದಾಡಿದರು ಕುಡುಕರಂತೆ I ದಿಕ್ಕುತೋರದವರಾದರು ದಕ್ಷತೆ ಸಾಲದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅವರು ದಿಕ್ಕುತೋರದವರಾಗಿ ಸುತ್ತುತ್ತಾ, ಕುಡುಕರಂತೆ ಹೊಯ್ದಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಅವರು ದಿಕ್ಕುತೋರದವರಾಗಿ ಸುತ್ತುತ್ತಾ ಕುಡಿಕರಂತೆ ಹೊಯ್ದಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಅವರು ಅಮಲೇರಿದವರಂತೆ ಎಡವಿಬೀಳತೊಡಗಿದರು; ನಾವಿಕರಾಗಿದ್ದ ಅವರ ಕೌಶಲ್ಯವು ನಿಷ್ಪ್ರಯೋಜಕವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವರು ಅತ್ತಿತ್ತ ತೂಗಾಡಿ ಕುಡುಕರಂತೆ ಓಲಾಡುತ್ತಿದ್ದರು. ಅವರ ಜ್ಞಾನವೆಲ್ಲಾ ಮುಗಿದು ಹೋಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:27
7 ತಿಳಿವುಗಳ ಹೋಲಿಕೆ  

ಅಂಥವರು ಕತ್ತಲೊಳು ತಡಕಾಡುವರು ಬೆಳಕಿಲ್ಲದೆ ತಡವರಿಸುವರು ಕುಡಿದು ಅಮಲೇರಿದವರಂತೆ.”


ನಿಮ್ಮನ್ನು ನೀವೇ ಬೆರಗುಮಾಡಿಕೊಂಡು ನಿಬ್ಬೆರಗಾಗಿರಿ. ಕುರುಡು ಮಾಡಿಕೊಂಡು ಕಡುಕುರುಡರಾಗಿರಿ. ಮದ್ಯಪಾನ ಮಾಡದೆಯೇ ಮತ್ತರಾಗಿರಿ, ಕುಡಿಯದೆಯೇ ಓಲಾಡಿರಿ.


ಸರ್ವೇಶ್ವರ ಅವರ ಮನಸ್ಸಿನಲ್ಲಿ ಚಂಚಲಭಾವವನ್ನು ಮೂಡಿಸಿದ್ದಾರೆ. ಅಮಲೇರಿದವನು ಕಕ್ಕುತ್ತಾ ಅತ್ತಿತ್ತ ಓಲಾಡುವ ಪ್ರಕಾರ ಈಜಿಪ್ಟಿನವರು ತಮ್ಮ ಒಂದೊಂದು ಕೆಲಸಕಾರ್ಯದಲ್ಲೂ ಅಸ್ಥಿರರಾಗಿರುವಂತೆ ಮಾಡಿದ್ದಾರೆ.


ಈಜಿಪ್ಟಿನವರ ಚೈತನ್ಯ ಉಡುಗಿಹೋಗುವುದು. ಅವರ ಯೋಜನೆಗಳು ಭಂಗವಾಗುವುವು. ಜನರು ವಿಗ್ರಹಗಳನ್ನು, ಮಂತ್ರಗಾರರನ್ನು, ಪ್ರೇತವಿಚಾರಕರನ್ನು, ಕಣಿಹೇಳುವವರನ್ನು ಆಶ್ರಯಿಸುವರು.”


ಓಲಾಡುವುದು ಭೂಮಿ ಅಮಲೇರಿದವನಂತೆ, ತೂಗಾಡುವುದು ಬಿರುಗಾಳಿಗೆ ಸಿಕ್ಕಿದ ಗುಡಿಸಲಂತೆ, ಕುಸಿದು ಬೀಳುವುದು ದ್ರೋಹದ ಭಾರಕೆ, ಮರಳಿ ಏಳದಂತೆ.


ನಾನು ಮಾತಾಡಬೇಕೆಂದು ದೇವರಿಗೆ ಹೇಳಿಕಳಿಸಲಾದೀತೆ? ಹಾಗೆ ಮಾಡುವವನು ತನ್ನನ್ನೆ ನಿರ್ಮೂಲ ಮಾಡಿಕೊಂಡಂತೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು