Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:32 - ಕನ್ನಡ ಸತ್ಯವೇದವು C.L. Bible (BSI)

32 ಕೀರ್ತಿಸಲಿ ಆತನನು ನೆರೆದ ಸಭೆಯಲಿ I ಹಾಡಿಹೊಗಳಲಿ ಹಿರಿಯರಾ ಕೂಟದಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನೆರೆದ ಸಭೆಯಲ್ಲಿ ಆತನನ್ನು ಕೀರ್ತಿಸಲಿ; ಹಿರಿಯರ ಸಮೂಹದಲ್ಲಿ ಕೊಂಡಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನೆರೆದ ಸಭೆಯಲ್ಲಿ ಆತನನ್ನು ಕೀರ್ತಿಸಲಿ; ಹಿರಿಯರ ಕೂಟದಲ್ಲಿ ಕೊಂಡಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆತನನ್ನು ಮಹಾಸಭೆಯಲ್ಲಿ ಸ್ತುತಿಸಿರಿ. ಹಿರಿಯರ ಸಭೆಯಲ್ಲಿ ಆತನನ್ನು ಕೊಂಡಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಜನರ ಸಭೆಯಲ್ಲಿ ದೇವರನ್ನು ಕೊಂಡಾಡಲಿ, ಹಿರಿಯರ ಸಭೆಯಲ್ಲಿ ದೇವರನ್ನು ಸ್ತುತಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:32
16 ತಿಳಿವುಗಳ ಹೋಲಿಕೆ  

ಪ್ರಭು, ನೀನೆ ಸ್ಪೂರ್ತಿ, ತುಂಬುಸಭೆಯಲಿ ನಾ ಮಾಳ್ಪ ಸ್ತುತಿಗೆ I ಭಕ್ತಜನರ ಮುಂದೆ ನಾ ಸಲ್ಲಿಸುವೆ, ನಿನಗೆ ಹೊತ್ತ ಹರಕೆ II


ಸೋದರರಿಗೆ, ಸಾರುವೆ ನಿನ್ನ ನಾಮ ಮಹಿಮೆಯನ್ನು I ತುಂಬಿದ ಸಭೆಯಲಿ ಮಾಡುವೆ, ನಿನ್ನ ಸ್ತುತಿಯನ್ನು II


ಪರಮ ಪಾವನನು ನಮ್ಮೀ ಸ್ವಾಮಿ ದೇವನು I ಹೊಗಳಿರಿ, ಆತನ ಪಾದಪೀಠಕೆ ಅಡ್ಡಬೀಳಿರಿ ನೀವೆಲ್ಲರು II


‘ಶಾಂತರಾಗಿರಿ, ತಿಳಿಯಿರಿ ನಾನು ದೇವನೆಂದು I ಜನಕ್ಕೂ ಜನಾಂಗಕ್ಕೂ ನಾನಧಿಪತಿಯೆಂದು’ II


ಸರ್ವೇಶ್ವರಾ, ನೀನೆನ್ನ ದೇವನು, ಏಕೆನೆ ನೀನು ಸತ್ಯಸ್ವರೂಪನು, ನಿಷ್ಟಾವಂತನು, ಆದಿ ಯೋಜನೆಗಳನು ಪೂರೈಸುವವನು, ಅದ್ಭುತಕಾರ್ಯಗಳನು ಎಸಗಿದಂತವನು. ಘನಪಡಿಸುವೆ ನಾ ನಿನ್ನನು, ಸ್ತುತಿಸುವೆನು ನಿನ್ನ ನಾಮ ಮಹಿಮೆಯನು.


ಮಾತಾಡುವೆನು ನಿನ್ನ ಆಜ್ಞೆಗಳ ವಿಷಯವಾಗಿ I ಅರಸುಗಳ ಮುಂದೆಯು ನಿಸ್ಸಂಕೋಚವಾಗಿ II


ಹೇಳುವಿರಿ ನೀವು ಆ ದಿನದಂದು ಈ ಪರಿ - “ಸಲ್ಲಿಸಿರಿ ಸರ್ವೇಶ್ವರನಿಗೆ ಕೃತಜ್ಞತೆಯನು ಸ್ಮರಿಸಿರಿ ಆತನ ಶ್ರೀನಾಮವನು ಸಾರಿರಿ ಜನತೆಗೆ ಆತನ ಕಾರ್ಯಗಳನು ಘೋಷಿಸಿರಿ ಆತನ ನಾಮಘನತೆಯನು.


ಅಲ್ಲೆಲೂಯI ಸಜ್ಜನರ ಸಂಘದೊಳು, ಸಭಾಸದಸ್ಯರೊಳು ಕೂಡಿ I ಹೊಗಳುವೆ ಪ್ರಭುವನು ಮನಃಪೂರ್ವಕವಾಗಿ ಹಾಡಿ II


ಘನಪಡಿಸಿರೆಮ್ಮ ಸ್ವಾಮಿ ದೇವನನು I ಶ್ರೀಪರ್ವತದಲಿ ವಂದಿಸಿ ಆತನನು I ಪರಮಪವಿತ್ರನು ಆ ನಮ್ಮ ದೇವನು II


ಬಂದು ಕೇಳಿರಿ ದೇವನಲಿ ಭಯಭಕ್ತಿಯುಳ್ಳವರೆ I ದೇವನೆನಗೆ ಮಾಡಿದ ಕಾರ್ಯಗಳ ತಿಳಿಸುವೆ ನಿಮಗೆ II


ಮಹಾಸಭೆಯಲ್ಲಾಗ ನಿನ್ನನು ಕೊಂಡಾಡುವೆ I ಬಹುಜನರ ಮುಂದೆ ನಿನ್ನ ಗುಣಗಾನ ಮಾಡುವೆ II


ಸರ್ವೇಶ್ವರನು ಚೈತನ್ಯಸ್ವರೂಪನು I ನನ್ನುದ್ಧಾರಕನಾದವಗೆ ಸ್ತುತಿಸ್ತೋತ್ರವು I ನನ್ನ ರಕ್ಷಿಸುವ ದೇವರಿಗೆ ಜಯಕಾರವು II


ಸರ್ವೇಶ್ವರನೇ ನನ್ನ ಶಕ್ತಿ, ನನ್ನ ಗೀತೆ! ಆತನಿಂದಲೇ ನನಗೆ ದೊರಕಿತು ರಕ್ಷಣೆ. ಆತನನ್ನು ವರ್ಣಿಸುವೆನು, ಆತನೆನ್ನ ದೇವನು ಆತನನ್ನು ಸ್ತುತಿಸುವೆನು, ಆತನೆನ್ನ ಪಿತೃಗಳ ದೇವನು.


ಸಮತಳದಲಿ ನಿಂತಿವೆ ನನ್ನ ಪಾದಗಳು I ಸ್ತುತಿಸುವೆ ನಾ ಪ್ರಭುವನು ಭಕ್ತರ ಸಭೆಯೊಳು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು