Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:34 - ಕನ್ನಡ ಸತ್ಯವೇದವು C.L. Bible (BSI)

34 ಒಣನೆಲವಾಗಿಸಿದನಾತ ಬುಗ್ಗೆಗಳನು I ಉಪ್ಪುನೆಲವಾಗಿಸಿದ ಫಲಭೂಮಿಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನೀರಿನ ಬುಗ್ಗೆಗಳನ್ನು ಒಣನೆಲವಾಗುವಂತೆಯೂ, ಫಲಭೂಮಿಯನ್ನು ಉಪ್ಪು ನೆಲವಾಗುವಂತೆಯೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಬುಗ್ಗೆಗಳನ್ನು ಒಣನೆಲವಾಗುವಂತೆಯೂ ಫಲಭೂವಿುಯನ್ನು ಉಪ್ಪುನೆಲವಾಗುವಂತೆಯೂ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಆತನು ಫಲವತ್ತಾದ ಭೂಮಿಯನ್ನು ಉಪಯೋಗವಿಲ್ಲದ ಉಪ್ಪುಭೂಮಿಯನ್ನಾಗಿ ಪರಿವರ್ತಿಸಿದನು, ಯಾಕೆಂದರೆ ಅಲ್ಲಿ ಕೆಟ್ಟಜನರು ನೆಲೆಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ದೇವರು ಫಲವುಳ್ಳ ಭೂಮಿಯನ್ನು ಬಂಜರಾಗುವಂತೆ ಮಾಡಿದರು. ಇದಕ್ಕೆಲ್ಲ ಕಾರಣ ಅದರ ನಿವಾಸಿಗಳ ಕೆಟ್ಟತನವೇ ಆಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:34
12 ತಿಳಿವುಗಳ ಹೋಲಿಕೆ  

ಲೋಟನು ಕಣ್ಣೆತ್ತಿ ನೋಡಿದನು. ಜೋರ್ಡನ್ ನದಿಯ ಸುತ್ತಲಿನ ಪ್ರದೇಶ ಚೋಗರೂರಿನವರೆಗೂ ಎಲ್ಲೆಲ್ಲೂ ನೀರಾವರಿ ಆಗಿರುವುದು ಕಾಣಿಸಿತು. ಸರ್ವೇಶ್ವರ, ಸೋದೋಮ್ - ಗೊಮೋರ ಪಟ್ಟಣಗಳನ್ನು ವಿನಾಶ ಮಾಡುವುದಕ್ಕೆ ಮುಂಚೆ ಈ ಪ್ರಾಂತ್ಯವು ಸರ್ವೇಶ್ವರನ ಉದ್ಯಾನ ವನದಂತೆ, ಈಜಿಪ್ಟಿನ ದೇಶದಂತೆ, ನೀರಿನ ಸೌಕರ್ಯಪಡೆದಿತ್ತು.


ಆದರೆ ಅದರ ಸುತ್ತಣ ಜವುಗುನೆಲವೂ ಸವುಳುಹೊಂಡಗಳೂ ಸಿಹಿಯಾಗುವುದಿಲ್ಲ, ಅವು ಉಪ್ಪಿನ ಗಣಿಯಾಗುವುವು.


ಸೋದೋಮಿನ ಪಟ್ಟಣದವರು ಬಹಳ ದುಷ್ಟರು; ಪ್ರಭುವಿನ ದೃಷ್ಟಿಯಲ್ಲಿ ಕಡುಪಾಪಿಗಳು.


ಇದನ್ನು ನೀನು ವ್ಯವಸಾಯ ಮಾಡಿದರೂ ಇನ್ನು ಮುಂದೆ ಇದು ಫಲಕೊಡುವುದಿಲ್ಲ. ನೆಲೆಯಿಲ್ಲದೆ ನೀನು ಲೋಕದಲ್ಲಿ ಅಲೆಮಾರಿಯಾಗಿರಬೇಕು,” ಎಂದರು.


ದೇವಾ, ಪ್ರಜೆಗೆ ಮುಂದಾಳಾಗಿ ನೀ ಹೊರಟಾಗ I ಅರಣ್ಯ ಮಾರ್ಗವಾಗಿ ನೀ ಪ್ರಯಾಣಮಾಡಿದಾಗ II


ನಿಮ್ಮ ಅಪರಾಧಗಳು ಈ ಪ್ರಯೋಜನಗಳನ್ನು ತಡೆಗಟ್ಟಿವೆ. ನಿಮ್ಮ ಪಾಪಗಳು, ಈ ಒಳಿತು ನಿಮಗೆ ಸಿಗದಂತೆ ತಪ್ಪಿಸಿವೆ.


ಇನ್ನೆಷ್ಟರವರೆಗೆ ನಾಡು ದುಃಖಿಸುತ್ತಿರಬೇಕು? ಅದರ ಎಲ್ಲೆಎಲ್ಲೆಗಳಲ್ಲಿ ಹುಲ್ಲು ಸೊಪ್ಪು ಒಣಗಿರಬೇಕು? ನಾಡಜನರ ನೀಚತನದ ನಿಮಿತ್ತ ಮಾಯವಾಗಿವೆ ಪ್ರಾಣಪಕ್ಷಿಗಳು ಕೂಡ. ‘ನಮ್ಮ ನಡತೆಯನ್ನು ಗಮನಿಸರು ದೇವರು’ ಎಂದುಕೊಳ್ಳುತ್ತಿರುವರು ಆ ಜನರು.


ಸರ್ವೇಶ್ವರನಾದ ದೇವರು ಇಸ್ರಯೇಲ್ ನಾಡಿನ ಜೆರುಸಲೇಮ್ ನಿವಾಸಿಗಳನ್ನೂ ಕುರಿತು ಇಂತೆನ್ನುತ್ತಾರೆ: ‘ಅವರು ಅನ್ನವನ್ನು ಅಂಜಿಕೆಯಿಂದ ತಿಂದು ನೀರನ್ನು ನಡುಕದಿಂದ ಕುಡಿಯುವರು: ಏಕೆಂದರೆ ಆ ನಾಡಿನಲ್ಲಿರುವವರು ಹಿಂಸಾಚಾರಿಗಳು; ಈ ಕಾರಣ, ಅಲ್ಲಿನ ಸೊತ್ತೆಲ್ಲಾ ಸೂರೆಯಾಗಿ, ನಾಡು ಬರಿದಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು