Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:38 - ಕನ್ನಡ ಸತ್ಯವೇದವು C.L. Bible (BSI)

38 ಅಭಿವೃದ್ಧಿಯಾದರು ಆತನಾಶೀರ್ವಾದದಿಂದಲೆ I ಅವರಿಗಿರಲಿಲ್ಲ ದನಕರುಗಳಾವುದರ ಕೊರತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆತನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚಿದರು. ಅವರಿಗೆ ದನಕರುಗಳೇನೂ ಕಡಿಮೆ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಆತನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚಿದರು. ಅವರಿಗೆ ದನಕರುಗಳೇನೂ ಕಡಿಮೆ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಆತನ ಆಶೀರ್ವಾದದಿಂದ ಅವರ ಕುಟುಂಬಗಳು ವೃದ್ಧಿಯಾದವು. ಅವರ ಪಶುಗಳು ಅಸಂಖ್ಯಾತಗೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ದೇವರು ಅವರನ್ನು ಆಶೀರ್ವದಿಸಿದ್ದರಿಂದ, ಅವರು ಬಹಳವಾಗಿ ಹೆಚ್ಚಿದರು; ದೇವರು ದನಗಳು ಕಡಿಮೆಯಾಗುವಂತೆ ಮಾಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:38
22 ತಿಳಿವುಗಳ ಹೋಲಿಕೆ  

ಆದರೂ ಇಸ್ರಯೇಲನ ವಂಶವು ಅಭಿವೃದ್ಧಿಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಬೆಳೆಯಿತು. ಅವರು ಶಕ್ತಿಶಾಲಿಗಳಾದರು. ಆ ದೇಶದಲ್ಲೆಲ್ಲಾ ತುಂಬಿಕೊಂಡರು.


ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ. ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತತಿಯನ್ನು ಕೊಡುತ್ತೇನೆ. ಅವನು ಹನ್ನೆರಡು ಮಂದಿ ಅಧಿಪತಿಗಳಿಗೆ ಮೂಲಪಿತನಾಗುವನು. ಅವನ ಸಂತತಿಯನ್ನು ದೊಡ್ಡ ರಾಷ್ಟ್ರವನ್ನಾಗಿ ಮಾಡುತ್ತೇನೆ.


ನಾನು ನಿನ್ನನ್ನು ದೊಡ್ಡ ಜನಾಂಗವಾಗಿ ಮಾಡುತ್ತೇನೆ. ನಿನ್ನನ್ನು ಆಶೀರ್ವದಿಸಿ ನಿನ್ನ ಹೆಸರಿಗೆ ಘನತೆಗೌರವವನ್ನು ತರುತ್ತೇನೆ. ನೀನೇ ಆದರ್ಶದ ಆಶೀರ್ವಾದವಾಗಿ ಬೆಳಗುವೆ.


ಮತ್ತು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಸಂತಾನ, ಪಶು ಹಾಗು ವ್ಯವಸಾಯಗಳನ್ನು ಹೆಚ್ಚಿಸಿ ನಿಮ್ಮ ಎಲ್ಲಾ ಪ್ರಯತ್ನಗಳನ್ನು ಸಫಲಪಡಿಸಿ, ನಿಮಗೆ ಒಳಿತನ್ನುಂಟುಮಾಡುವರು. ನೀವು ನಿಮ್ಮ ದೇವರಾದ ಸರ್ವೇಶ್ವರನ ನುಡಿಗೆ ವಿಧೇಯರಾಗಿ ಈ ಧರ್ಮಶಾಸ್ತ್ರದ ಆಜ್ಞಾವಿಧಿಗಳನ್ನು ಅನುಸರಿಸಿ ಪೂರ್ಣಹೃದಯದಿಂದಲೂ ಮನಸ್ಸಿನಿಂದಲೂ ಅವರ ಕಡೆಗೆ ತಿರುಗಿಕೊಳ್ಳುವಿರಿ. ಅವರು ನಿಮ್ಮ ಪಿತೃಗಳ ವಿಷಯದಲ್ಲಿ ಸಂತೋಷಪಟ್ಟ ಹಾಗೆಯೇ ನಿಮ್ಮ ವಿಷಯದಲ್ಲೂ ಮತ್ತೆ ಸಂತೋಷಪಟ್ಟು ನಿಮಗೆ ಒಳಿತನ್ನುಂಟುಮಾಡುವರು.


ನೀವು ಎಲ್ಲ ಜನಗಳಿಗಿಂತ ಹೆಚ್ಚಾಗುವಿರಿ, ದೇವರ ಅನುಗ್ರಹವನ್ನು ಹೊಂದುವಿರಿ. ನಿಮ್ಮಲ್ಲಿ ಸ್ತ್ರೀಪುರುಷರಲ್ಲಾಗಲಿ, ಹೆಣ್ಣುಗಂಡು ಪಶುಪ್ರಾಣಿಗಳಲ್ಲಾಗಲಿ, ಬಂಜೆತನ ಎಂಬುದು ಇರುವುದಿಲ್ಲ.


“ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಮೇರೆಗೆ, ನಿಮಗೆ ಕೊಡುವ ನಾಡಿನಲ್ಲಿ ಅವರು ನಿಮಗೆ ಸಂತಾನ, ಪಶು, ವ್ಯವಸಾಯಗಳ ಸಮೃದ್ಧಿಯನ್ನುಂಟುಮಾಡುವರು.


ನಾನು ಆಕೆಯನ್ನು ಆಶೀರ್ವದಿಸಿದ್ದೇನೆ. ಆಕೆ ನಿನಗೊಬ್ಬ ಮಗನನ್ನು ಹೆರುವಳು. ನನ್ನ ಆಶೀರ್ವಾದ ಪಡೆದ ಆಕೆ ರಾಷ್ಟ್ರಗಳಿಗೆ ಮಾತೆಯಾಗುವಳು; ಆಕೆಯಿಂದ ರಾಷ್ಟ್ರಗಳೂ, ರಾಜರುಗಳೂ ಉತ್ಪತ್ತಿಯಾಗುವರು.”


ಅವುಗಳಿಂದ ಸ್ತುತಿಸ್ತೋತ್ರ ಕೇಳಿಬರುವುದು ಅಲ್ಲಿಂದ ನಲಿವುನಾದ ಕೇಳಿಸುವುದು. ಆ ಜನರನ್ನು ಹೆಚ್ಚಿಸುವೆನು, ಅವರು ಕೊಂಚವಾಗಿರರು. ಅವರನ್ನು ಘನಪಡಿಸುವೆನು, ಅವರು ಹೀನರಾಗಿರರು.


ಸರ್ವೇಶ್ವರನ ಆಶೀರ್ವಾದ ಭಾಗ್ಯದಾಯಕ; ಅದಕ್ಕೆ ಬಾಹಿರವಾದುದು ಕಷ್ಟದುಃಖ.


ನಿಮ್ಮ ಸಂತಾನಕ್ಕೂ ವ್ಯವಸಾಯಗಳಿಗೂ ದನಕುರಿ ಮುಂತಾದ ಪಶುಗಳಿಗೂ ಶುಭವುಂಟಾಗುವುದು.


ಈ ಪ್ರಕಾರ ಯಕೋಬನು ಬಹಳ ಸಂಪತ್ತುಳ್ಳವನಾದನು; ಅವನಿಗೆ ದೊಡ್ಡ ಹಿಂಡುಗಳು ಮಾತ್ರವಲ್ಲ ದಾಸದಾಸಿಯರೂ ಒಂಟೆ ಕತ್ತೆಗಳೂ ಹೇರಳವಾಗಿದ್ದವು.


ದೇವರು ನೋಹನನ್ನೂ ಅವನ ಮಕ್ಕಳನ್ನೂ ಆಶೀರ್ವದಿಸಿ ಹೀಗೆಂದರು - “ನೀವು ಅಭಿವೃದ್ಧಿಯಾಗಿ ಹೆಚ್ಚು ಮಕ್ಕಳನ್ನು ಪಡೆಯಿರಿ’; ಭೂಲೋಕದಲ್ಲೆಲ್ಲ ಹರಡಿಕೊಳ್ಳಿ.


ಅವರನ್ನು ದೇವರು ಆಶೀರ್ವದಿಸಿ, “ನೀವು ಅಭಿವೃದ್ಧಿಯಾಗಿ, ಅನೇಕ ಮಕ್ಕಳನ್ನು ಪಡೆಯಿರಿ; ಭೂಮಿಯಲ್ಲಿ ಹರಡಿಕೊಂಡು ಅದನ್ನು ವಶಪಡಿಸಿಕೊಳ್ಳಿರಿ; ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲ ಪ್ರಾಣಿಗಳ ಮೇಲೆಯೂ ದೊರೆತನ ಮಾಡಿರಿ.


ನಾನು ಅವರೊಂದಿಗೆ ಶಾಂತಿಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.


ಅವರೊಂದಿಗೆ ಬಹುಮಂದಿ ಅನ್ಯದೇಶೀಯರೂ ಹೊರಟು ಬಂದಿದ್ದರು. ಕುರಿ, ದನ ಮುಂತಾದ ಪಶುಪ್ರಾಣಿಗಳು ಬಹಳವಿದ್ದವು.


ಹೀಗೆ ದೇವರು ನಿಮ್ಮ ತಂದೆಯ ಆಡುಕುರಿಗಳನ್ನು ತೆಗೆದು ನನಗೆ ಕೊಟ್ಟರು.


ಈಜಿಪ್ಟರು ಅವರಿಗೆ ಎಷ್ಟು ಕಿರುಕುಳ ಕೊಡುತ್ತಿದ್ದರೋ ಅಷ್ಟೂ ಹೆಚ್ಚಿ ಹರಡಿಕೊಳ್ಳುತ್ತಿದ್ದರು.


ನಿಮ್ಮನ್ನು ಅಚಲವಾಗಿ ಪ್ರೀತಿಸಿ, ಅಭಿವೃದ್ಧಿಗೊಳಿಸುವರು; ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ನಾಡಿನಲ್ಲಿ ನಿಮ್ಮ ಸಂತಾನವನ್ನು, ವ್ಯವಸಾಯವನ್ನು, ದವಸಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಹಾಗು ದನಕುರಿಗಳ ಮಂದೆಯನ್ನು ವೃದ್ಧಿಗೊಳಿಸುವರು.


ರಾಷ್ಟ್ರಗಳನ್ನು ಬೆಳೆಸುತ್ತಾನೆ, ಅಳಿಸುತ್ತಾನೆ ಅವುಗಳನ್ನು ಹರಡುತ್ತಾನೆ, ಹೊರದೂಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು