Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:41 - ಕನ್ನಡ ಸತ್ಯವೇದವು C.L. Bible (BSI)

41 ದೀನರನ್ನೇರಿಸಿದನು ಅವನತಿಯಿಂದ ಉನ್ನತಿಗೆ I ಹೆಚ್ಚಿಸಿದನವರ ಸಂತತಿಯನು ಕುರಿಮಂದೆ ಹಾಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಕಷ್ಟದಲ್ಲಿದ್ದ ದೀನರನ್ನು ಉನ್ನತಸ್ಥಿತಿಗೆ ಏರಿಸಿ, ಅವರ ಕುಟುಂಬಗಳನ್ನು ಕುರಿಹಿಂಡಿನಂತೆ ಹೆಚ್ಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

41 ಕಷ್ಟದಲ್ಲಿದ್ದ ದೀನರನ್ನು ಉನ್ನತಸ್ಥಿತಿಗೇರಿಸಿ ಕುರಿಹಿಂಡಿನಂತೆ ಹೆಚ್ಚಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಬಳಿಕ ಆತನು ದೀನರನ್ನು ಅವರ ಸಂಕಟದಿಂದ ಬಿಡಿಸಿದನು. ಈಗ ಅವರ ಕುಟುಂಬಗಳು ಕುರಿಮಂದೆಗಳಂತೆ ದೊಡ್ಡದಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಆದರೂ ದೇವರು ಬಡವನನ್ನು ಸಂಕಟದಿಂದ ಉನ್ನತಕ್ಕೇರಿಸಿ, ಅವನ ಕುಟುಂಬಗಳನ್ನು ಮಂದೆಯ ಹಾಗೆ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:41
21 ತಿಳಿವುಗಳ ಹೋಲಿಕೆ  

ಎತ್ತುವನಾತ ದೀನರನು ಧೂಳಿಂದ, ದರಿದ್ರರನು ತಿಪ್ಪೆಯಿಂದ. ಕುಳ್ಳರಿಸುವನವರನು ಅಧಿಪತಿಗಳ ಸಮೇತ ಅನುಗ್ರಹಿಸುವನು ಹಕ್ಕಾಗಿ ಆ ಮಹಿಮಾಸನ. ಕಾರಣ-ಭೂಮಿಯ ಆಧಾರಸ್ತಂಭಗಳು ಸರ್ವೇಶ್ವರನವೇ ಭೂಮಂಡಲವನು ಅವುಗಳ ಮೇಲೆ ಸ್ಥಾಪಿಸಿದವನು ಆತನೇ.


ಅವರ ಮಕ್ಕಳು ಮುನ್ನಡೆಯುತ್ತಾರೆ ಮಂದೆಯಂತೆ ಅವರ ಬಾಲಬಾಲೆಯರು ಕುಣಿದಾಡುತ್ತಾರೆ ಜಿಂಕೆಯಂತೆ.


ತನ್ನ ಜನರನ್ನೋ ಹೊರತಂದನು ಕುರಿಮಂದೆಯಂತೆ I ಅಡವಿಯೊಳು ಪರಿಪಾಲಿಸಿದನು ಕುರಿಗಾಹಿಯಂತೆ II


ಉನ್ನತಿಗೇರಿಸುತ್ತಾನೆ ದೀನದಲಿತರನು ಸುರಕ್ಷತೆಗೊಯ್ಯುತ್ತಾನೆ ದುಃಖಿತರನು.


ತಾಳಿದವನು ಬಾಳಿಯಾನು ಎಂದು ಹೇಳುತ್ತೇವಲ್ಲವೇ? ಯೋಬನ ತಾಳ್ಮೆಯನ್ನು ಕುರಿತು ನೀವು ಕೇಳಿದ್ದೀರಿ. ಅಂತ್ಯದಲ್ಲಿ ಆತನಿಗೆ ಸರ್ವೇಶ್ವರ ದಯಪಾಲಿಸಿದ್ದನ್ನು ಬಲ್ಲಿರಿ. ದೇವರ ದಯೆ ಅನಂತ, ಅವರ ಅನುಕಂಪ ಅಪಾರ.


ಮಕ್ಕಳ ಮಕ್ಕಳು ಮುದುಕರ ಮುಕುಟ; ಮಕ್ಕಳಿಗೆ ಹೆತ್ತವರೇ ಭೂಷಣ.


ತರುವಾಯ ಯೋಬನು ನೂರನಾಲ್ವತ್ತು ವರ್ಷ ಬಾಳಿದನು. ನಾಲ್ಕು ತಲೆಮಾರು ತನಕ ಮಕ್ಕಳನ್ನೂ ಮೊಮ್ಮಕ್ಕಳನ್ನೂ ಕಂಡನು.


ಆಗ ನಿನ್ನ ಭವಿಷ್ಯ ಎಷ್ಟು ಉಜ್ವಲವಾಗಿರುತ್ತದೆಂದರೆ ನಿನ್ನ ಮೊದಲಿನ ಸ್ಥಿತಿ ಕೂಡ ಅತ್ಯಲ್ಪವಾಗಿ ಕಾಣುವುದು ನಿನಗೆ.


ಸರ್ವೇಶ್ವರನ ಅನುಗ್ರಹ ಹನ್ನಳಿಗೆ ಲಭಿಸಿತು. ಆಕೆಗೆ ಮೂರು ಗಂಡು, ಇಬ್ಬರು ಹೆಣ್ಣು ಮಕ್ಕಳಾದುವು. ಬಾಲಕ ಸಮುವೇಲನು ಸರ್ವೇಶ್ವರನ ಸನ್ನಿಧಿಯಲ್ಲಿ ಬೆಳೆದು ದೊಡ್ಡವನಾದನು.


ಅನಂತರ ಜೋಸೆಫನಿಗೆ, “ನಿನ್ನ ಮುಖವನ್ನು ಮತ್ತೆ ನೋಡುವೆನೆಂದು ನಾನು ನೆನಸಿರಲಿಲ್ಲ. ಈಗ ನಿನ್ನನ್ನು ಮಾತ್ರವಲ್ಲ, ನಿನ್ನ ಮಕ್ಕಳನ್ನೂ ನೋಡುವಂತೆ ದೇವರು ಅನುಗ್ರಹಿಸಿದ್ದಾರೆ!” ಎಂದನು.


ಮಕ್ಕಳ ಮಕ್ಕಳನು ನೀನು ಕಾಣುವಂತಾಗಲಿ I ಇಸ್ರಯೇಲಿನ ಮಕ್ಕಳಿಗೆ ಸುಖಶಾಂತಿ ಲಭಿಸಲಿ II


ಬಾಧೆಪಡುವವರನ್ನು ಅವರ ಬಾಧೆಗಳ ಮೂಲಕವೇ ರಕ್ಷಿಸುವನು ಕಷ್ಟಾನುಭವಗಳ ಮೂಲಕವೆ ದೇವರು ಅವರ ಕಿವಿಯನ್ನು ತೆರೆಯುವನು.


“ಸರ್ವೇಶ್ವರನಾದ ನಾನು ನಿಮಗೆ ಹೇಳುವುದೇನೆಂದರೆ: ಇಗೋ, ಇಸ್ರಯೇಲ್ ಮತ್ತು ಜುದೇಯ ಕ್ಷೇತ್ರಗಳಲ್ಲಿ ನಾನು ಮನುಷ್ಯರನ್ನೂ ಪ್ರಾಣಿಗಳನ್ನೂ ಬಿತ್ತಿ ಭರ್ತಿಮಾಡುವ ದಿನಗಳು ಬರುವುವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು