Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 107:43 - ಕನ್ನಡ ಸತ್ಯವೇದವು C.L. Bible (BSI)

43 ಪರ್ಯಾಲೋಚಿಸಲಿವುಗಳನು ಬುದ್ಧಿವಂತರು I ಗ್ರಹಿಸಲಿ ಪ್ರಭುವಿನಚಲ ಪ್ರೀತಿಯನಾ ಜನರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಜ್ಞಾನಿಗಳು ಈ ಸಂಗತಿಗಳನ್ನು ಗಮನಿಸಿ, ಯೆಹೋವನ ಕೃಪಾಕಾರ್ಯಗಳನ್ನು ಗ್ರಹಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಜ್ಞಾನಿಗಳು ಈ ಸಂಗತಿಗಳನ್ನು ಗಮನಿಸಿ ಯೆಹೋವನ ಕೃಪಾಕಾರ್ಯಗಳನ್ನು ಗ್ರಹಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಜ್ಞಾನಿಯು ಇವುಗಳನ್ನು ನೆನಪು ಮಾಡಿಕೊಂಡು ದೇವರ ನಿಜಪ್ರೀತಿಯನ್ನು ಅರ್ಥಮಾಡಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಜ್ಞಾನಿಗಳು ಇವುಗಳನ್ನು ಗಮನಿಸಲಿ, ಯೆಹೋವ ದೇವರ ಪ್ರೀತಿಕೃತ್ಯಗಳನ್ನು ಗ್ರಹಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 107:43
12 ತಿಳಿವುಗಳ ಹೋಲಿಕೆ  

ಬುದ್ಧಿವಂತನು ಈ ಮಾತುಗಳನ್ನು ಗ್ರಹಿಸಿಕೊಳ್ಳಲಿ. ವಿವೇಕಿಯು ಈ ನುಡಿಗಳನ್ನು ಅರ್ಥಮಾಡಿಕೊಳ್ಳಲಿ. ಸರ್ವೇಶ್ವರಸ್ವಾಮಿಯ ಮಾರ್ಗಗಳು ನೇರವಾದವುಗಳು. ಸನ್ಮಾರ್ಗಿಗಳು ಅವುಗಳನ್ನು ಕೈಗೊಂಡು ನಡೆಯುವರು. ದುರ್ಮಾರ್ಗಿಗಳು ಅವುಗಳನ್ನು ಕೈಬಿಟ್ಟು ಮುಗ್ಗರಿಸಿ ಬೀಳುವರು.


ನಾನು : “ಈ ನಾಡು ಯಾರೂ ಹಾದುಹೋಗದಷ್ಟು ಹಾಳಾಗಿ ಕಾಡಿನಂತೆ ಸುಟ್ಟುಹೋದದ್ದು ಏಕೆ? ಈ ವಿಷಯವನ್ನು ಗ್ರಹಿಸತಕ್ಕ ಜ್ಞಾನಿ ಯಾರು? ಅದನ್ನು ಸರ್ವೇಶ್ವರನ ಬಾಯಿಂದಲೆ ಕೇಳಿ ತಿಳಿಸಬಲ್ಲವನಾರು?”


ಜನರೆಲ್ಲರಾಗ ತಲ್ಲಣಗೊಳ್ಳುವರು I ದೇವಕಾರ್ಯವಿದು ಎಂದು ಧ್ಯಾನಿಪರು I ಆತನ ಸತ್ಕಾರ್ಯಗಳನು ಸಾರುವರು II


ಆಮೇಲೆ ಅವನು ನನಗೆ, “ದಾನಿಯೇಲನೇ, ಭಯಪಡಬೇಡ! ಏಕೆಂದರೆ ನೀನು ನಿನ್ನ ದೇವರ ಮುಂದೆ ವಿನಮ್ರಪೂರ್ವಕವಾಗಿ (ದೈವಸಂಕಲ್ಪವನ್ನು) ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದ ಮೊದಲನೆಯ ದಿನದಲ್ಲೇ ನಿನ್ನ ಪ್ರಾರ್ಥನೆ ದೇವರಿಗೆ ಮುಟ್ಟಿತು. ಆ ಪ್ರಾರ್ಥನೆಯ ನಿಮಿತ್ತವೇ ನಾನು ಬಂದಿದ್ದೇನೆ.


ಹೆಚ್ಚಳಪಡುವವನು ನನ್ನನ್ನು ತಾನು ತಿಳಿದುಕೊಂಡದ್ದಕ್ಕಾಗಿ ಹೆಚ್ಚಳಪಡಲಿ; ಜಗದಲ್ಲಿ ಅಚಲ ಪ್ರೀತಿಯನ್ನೂ ನ್ಯಾಯನೀತಿಯನ್ನೂ ತೋರ್ಪಡಿಸುವ ಸರ್ವೇಶ್ವರ ನಾನೇ; ನನಗೆ ಪ್ರಿಯವಾದುವು ಪ್ರೀತಿ, ನೀತಿ, ನ್ಯಾಯಗಳೇ. ಇದನ್ನು ಗ್ರಹಿಸಿಕೊಂಡದ್ದಕ್ಕಾಗಿ ಹೆಚ್ಚಳಪಡಲಿ. ಇದು ಸರ್ವೇಶ್ವರನಾದ ನನ್ನ ನುಡಿ.”


ಧನ್ಯವಾದದ ಬಲಿಯನರ್ಪಿಸುವವನೇ ನನಗೆ ಸನ್ಮಾನಿತನು I ಸನ್ಮಾರ್ಗ ಹಿಡಿದವನಿಗೆ ತೋರುವೆ ಪರಮ ಜೀವೋದ್ಧಾರವನು II


ಕಿನ್ನರಿ, ವೀಣೆ, ತಬಲ, ಕೊಳಲು, ಮದ್ಯಪಾನ ಇವೇ ಅವರ ದುಂದೌತಣದ ಸೊಬಗು. ಸ್ವಾಮಿಯ ಕಾರ್ಯಗಳನ್ನು ಅವರು ಲಕ್ಷಿಸರು. ಸ್ವಾಮಿಯ ಕೃತಿಗಳನ್ನವರು ಧ್ಯಾನಿಸರು.


ಅರಿಯರವರು ಪ್ರಭುವಿನ ಕಾರ್ಯಗಳನು, ಆತನ ಕೈಕೆಲಸಗಳನು I ಈ ಕಾರಣ ಕೆಡವಿಬಿಡುವನು ಪ್ರಭು, ಮರಳಿ ಏಳಬಿಡನವರನು II


ನೀವು ಗಮನಿಸುವುದಿಲ್ಲ ಹಲವಿಷಯಗಳನ್ನು ಕಂಡಿದ್ದರೂ ನೀವು ಕೇಳುವುದಿಲ್ಲ ನಿಮ್ಮ ಕಿವಿಗಳು ತೆರೆದಿದ್ದರೂ.


ಸರ್ವೇಶ್ವರ : “ಹಾಳು ದಿಬ್ಬಗಳನ್ನಾಗಿಸುವೆನು ಜೆರುಸಲೇಮನ್ನು ನರಿಗಳ ಹಕ್ಕೆಯನ್ನಾಗಿಸುವೆನು ಜುದೇಯ ಪಟ್ಟಣಗಳನ್ನು ಜನರಿಲ್ಲದ ಬೀಳುಭೂಮಿಯನ್ನಾಗಿಸುವೆನು ಅವುಗಳನ್ನು.”


ಅನೇಕರು ತಮ್ಮನ್ನು ಶುದ್ಧೀಕರಿಸಿ, ಶುಭ್ರಮಾಡಿಕೊಂಡು ಶೋಧಿತರಾಗುವರು. ದುಷ್ಟರು ದುಷ್ಟರಾಗಿಯೇ ನಡೆಯುವರು. ಅವರಲ್ಲಿ ಯಾರಿಗೂ ವಿವೇಕವಿರದು. ಬುದ್ಧಿವಂತರಿಗೆ ವಿವೇಕವಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು