Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 108:13 - ಕನ್ನಡ ಸತ್ಯವೇದವು C.L. Bible (BSI)

13 ನಮ್ಮ ಪರ ದೇವನಿರಲು ಹೆಣಗುವೆವು ಶೂರರಾಗಿ I ವೈರಿಗಳನು ತುಳಿದುಬಿಡುವನು ಆತ ಖರೆಯಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದೇವರಿಂದ ಶೂರಕೃತ್ಯಗಳನ್ನು ನಡೆಸುವೆವು; ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ದೇವರಿಂದ ಶೂರಕೃತ್ಯಗಳನ್ನು ನಡಿಸುವೆವು; ನಮ್ಮ ವೈರಿಗಳನ್ನು ತುಳಿದುಬಿಡುವವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದೇವರು ಮಾತ್ರ ನಮ್ಮನ್ನು ಬಲಪಡಿಸಬಲ್ಲನು. ಆತನು ಮಾತ್ರ ನಮ್ಮ ಶತ್ರುಗಳನ್ನು ಸೋಲಿಸಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ದೇವರಿಂದ ನಾವು ಜಯ ಹೊಂದುವೆವು. ದೇವರೇ ನಮ್ಮ ವೈರಿಗಳನ್ನು ತುಳಿದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 108:13
13 ತಿಳಿವುಗಳ ಹೋಲಿಕೆ  

ನಮ್ಮ ಪರ ದೇವನಿರಲು ಹೆಣಗುವೆವು ಶೂರರಾಗಿ I ವೈರಿಗಳನು ತುಳಿದುಬಿಡುವನಾತ ಖರೆಯಾಗಿ II


ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿ ನಮ್ಮನ್ನು ಸದಾ ವಿಜಯೋತ್ಸವದತ್ತ ನಡೆಸುವ ಹಾಗು ಕ್ರಿಸ್ತಜ್ಞಾನವೆಂಬ ಪರಿಮಳವನ್ನು ಎಲ್ಲೆಡೆಯಲ್ಲೂ ನಮ್ಮ ಮೂಲಕ ಪಸರಿಸುವ ದೇವರಿಗೆ ವಂದನೆಗಳು.


“ದ್ರಾಕ್ಷಿಹಣ್ಣನು ತುಳಿವಂತೆ ತುಳಿದಿದ್ದೇನೆ ರಾಷ್ಟ್ರಗಳನು ಒಬ್ಬಂಟಿಗನಾಗೇ ಯಾರು ಇರಲಿಲ್ಲ ನನಗೆ ಸಹಾಯಕ್ಕೆ. ಅವರನ್ನು ತುಳಿದೆ ಕೋಪದಿಂದ ರೋಷಾವೇಶದಿಂದ ಹೊಸಕಿದೆ ಕಾಲಿನಿಂದ. ಅವರ ರಕ್ತ ನನ್ನ ಬಟ್ಟೆಗಳ ಮೇಲೆ ಸಿಡಿದಿದೆ. ನನ್ನ ಉಡುಪಿಗೆಲ್ಲಾ ಆ ಬಿಸಿರಕ್ತ ಮೆತ್ತಿಕೊಂಡಿದೆ.


ಪುಡಿಪುಡಿ ಮಾಡಿದೆ ನಾನವರನು ಗಾಳಿಗೆ ತೂರುವ ಧೂಳಿನಂತೆ I ಎತ್ತೆಸೆದುಬಿಟ್ಟೆ ನಾನವರನು ಮೋರಿಯ ಕೆಸರಿನಂತೆ II


ನಾನು ಈಗ ಈ ಸ್ಥಿತಿಯಲ್ಲಿ ಇರುವುದು ದೇವರ ಅನುಗ್ರಹದಿಂದಲೇ. ಅವರ ಅನುಗ್ರಹ ನನ್ನಲ್ಲಿ ವ್ಯರ್ಥವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಹೆಚ್ಚು ಶ್ರಮಪಟ್ಟು ಸೇವೆಮಾಡಿದ್ದೇನೆ. ಅದನ್ನು ಮಾಡಿದವನು ನಾನಲ್ಲ, ನನ್ನಲ್ಲಿರುವ ದೇವರ ಅನುಗ್ರಹವೇ.


ಆಗ ಶಾಂತಿದಾತ ದೇವರು ಶೀಘ್ರವಾಗಿ ಸೈತಾನನನ್ನು ನಿಮ್ಮ ಪಾದದಡಿಯಲ್ಲಿ ನಸುಕಿಬಿಡುವರು. ನಮ್ಮ ಪ್ರಭು ಯೇಸುಕ್ರಿಸ್ತರ ಅನುಗ್ರಹವು ನಿಮ್ಮೊಡನೆ ಇರಲಿ!


ಸರ್ವೇಶ್ವರ ಸ್ವಾಮಿಯ ಅಭಯ ಹಸ್ತವು ಈ ಪರ್ವತದ ಮೇಲೆ ಶಾಶ್ವತವಾಗಿ ನೆಲಸುವುದು. ಮೋವಾಬಾದರೋ ತಿಪ್ಪೆಗುಂಡಿಯ ರೊಚ್ಚಿನಲ್ಲಿ ಒಣಹುಲ್ಲು ತುಳಿತಕ್ಕೆ ಈಡಾಗುವಂತೆ ತಾನಿದ್ದಲ್ಲೇ ತುಳಿತಕ್ಕೀಡಾಗುವುದು.


ಸ್ತುತಿಸ್ತೋತ್ರ ಪ್ರಭುವಿಗೆ, ನನ್ನ ಆಶ್ರಯದುರ್ಗಕ್ಕೆ I ಕಲಿಸಿಹನು ಕದನ ಕೈಗೆ, ಕಾಳಗ ನನ್ನ ಬೆರಳಿಗೆ II


ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿರೋ? ನಮ್ಮ ಮೇಲೆ ಬಂದಿರುವ ಈ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂದೂ ತಿಳಿಯದು; ನಮ್ಮ ಕಣ್ಣುಗಳು ನಿಮ್ಮನ್ನೇ ನೋಡುತ್ತಿವೆ,” ಎಂದು ಪ್ರಾರ್ಥಿಸಿದನು.


ಅವರ ತೊಡೆ ಸೊಂಟಗಳನ್ನು ಮುರಿದು, ಅವರನ್ನು ಸಂಹರಿಸಿಬಿಟ್ಟನು. ಅನಂತರ ಹೋಗಿ ಏಟಾಮ್ ಗಿರಿಯ ಗುಹೆಯಲ್ಲಿ ವಾಸಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು