Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 108:4 - ಕನ್ನಡ ಸತ್ಯವೇದವು C.L. Bible (BSI)

4 ಮೀರಿದೆ ನಿನ್ನಚಲಪ್ರೀತಿ ಗಗನ ಮಂಡಲವನು I ಮುಚ್ಚಿದೆ ನಿನ್ನ ಸತ್ಯಸಂಧತೆ ಮೇಘರಾಶಿಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಏಕೆಂದರೆ ನಿನ್ನ ಕೃಪೆಯು ಆಕಾಶಕ್ಕಿಂತಲೂ ದೊಡ್ಡದಾಗಿದೆ, ನಿನ್ನ ಸತ್ಯತೆಯು ಮುಗಿಲನ್ನು ನಿಲುಕುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯಾಕಂದರೆ ನಿನ್ನ ಕೃಪೆಯು ಆಕಾಶಕ್ಕಿಂತ ದೊಡ್ಡದಾಗಿದೆ. ನಿನ್ನ ಸತ್ಯತೆಯು ಮುಗಿಲನ್ನು ನಿಲುಕುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯಾಕೆಂದರೆ ನಿನ್ನ ಪ್ರೀತಿಯು ಆಕಾಶಕ್ಕಿಂತಲೂ ಉನ್ನತವಾಗಿದೆ; ನಿನ್ನ ನಂಬಿಗಸ್ತಿಕೆಯು ಮೋಡಗಳಿಗಿಂತಲೂ ಎತ್ತರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಕಾಶಕ್ಕಿಂತ ನಿಮ್ಮ ಪ್ರೀತಿ ದೊಡ್ಡದು. ಮೇಘವನ್ನು ನಿಲುಕುವಷ್ಟು ನಿಮ್ಮ ಸತ್ಯವು ಉನ್ನತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 108:4
10 ತಿಳಿವುಗಳ ಹೋಲಿಕೆ  

ನಿನ್ನ ಪ್ರೀತಿ ಪ್ರಭು, ಚುಂಬಿಸುತಿಹುದು ಗಗನವನು I ನಿನ್ನ ಸತ್ಯವು ಮುಟ್ಟುತಿಹುದು ಮೇಘಮಂಡಲವನು II


ಆಕಾಶಮಂಡಲವು ಭೂಮಿಯಿಂದೆಷ್ಟೋ ಉನ್ನತ I ದೈವಭಯವುಳ್ಳವರಿಗೆ ಆತನ ಕೃಪೆ ಅಷ್ಟೇ ಸನ್ನುತ II


ನಿನ್ನಚಲ ಪ್ರೀತಿ ಪ್ರಭು, ನನಗೆ ಶಾಶ್ವತ ಸಿದ್ಧ I ನಿನ್ನ ಸತ್ಯತೆ ಆಗಸದಂತೆ ಸ್ಥಿರ ಸ್ಥಾಪಿತ II


“ಎಷ್ಟೋ ಉನ್ನತ ಆಕಾಶವು ಭೂಮಿಯಿಂದ ಅಷ್ಟೂ ಉನ್ನತ ನನ್ನ ಮಾರ್ಗ ನಿಮ್ಮ ಮಾರ್ಗಗಳಿಗಿಂತ, ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಿಗಿಂತ.


ಸಕಲ ಜಾತಿಜನಾಂಗಗಳಲಿ ಪ್ರಭು ಶ್ರೇಷ್ಠ I ಆತನ ಮಹಿಮೆ ಗಗನಕ್ಕಿಂತಲೂ ಉತ್ಕೃಷ್ಟ II


ಪ್ರಸಿದ್ಧಪಡಿಸುವುದು ಪ್ರಭು, ಗಗನವು ನಿನ್ನ ಮಹತ್ತನು I ಸಂಕೀರ್ತಿಸುವುದು ಸ್ವರ್ಗೀಯ ಸಭೆ, ನಿನ್ನ ಸತ್ಯತೆಯನು II


ಪ್ರೀತಿಯೂ ಸತ್ಯವೂ ಒಂದನ್ನೊಂದು ಕೂಡಿರುವುವು I ನೀತಿಯೂ ಶಾಂತಿಯೂ ಒಂದನ್ನೊಂದು ಚುಂಬಿಸುವುವು II


ಎಂತಲೆ, ನಿನ್ನ ಸ್ತುತಿಪೆನು ಅನ್ಯಜನಗಳ ಮಧ್ಯೆ ನಿನ್ನ ನಾಮವನು ಹೇ ಸರ್ವೇಶ್ವರಾ ಸಂಕೀರ್ತಿಪೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು