Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 108:7 - ಕನ್ನಡ ಸತ್ಯವೇದವು C.L. Bible (BSI)

7 ಗರ್ಭಗುಡಿಯಿಂದಲೆ ದೇವನಿಂತೆಂದನು : I “ಜಯಶೀಲ ನಾನು, ಹಂಚುವೆನು ಶೆಖೆಮನು I ಅಳೆದುಕೊಡುವೆನು ಸುಖೋತೆಂಬ ಬಯಲನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದೇವರು ತನ್ನ ಪವಿತ್ರತ್ವವನ್ನು ಸಾಕ್ಷಿಮಾಡಿ ನುಡಿದಿದ್ದಾನೆ. ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು. ಸುಖೋತ್ ಬಯಲನ್ನು ಅಳತೆಮಾಡಿ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ದೇವರು ತನ್ನ ಪವಿತ್ರತ್ವವನ್ನು ಸಾಕ್ಷಿಮಾಡಿ ನುಡಿದಿದ್ದಾನೆ. ಜಯಘೋಷಮಾಡುವೆನು; ಶೆಖೆಮ್ ಪ್ರದೇಶವನ್ನು ಹಂಚುವೆನು. ಸುಖೋತ್ ಬೈಲನ್ನು ಅಳೆದುಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರು ತನ್ನ ಆಲಯದೊಳಗಿಂದ ಹೀಗೆಂದನು: “ನಾನು ಯುದ್ಧದಲ್ಲಿ ಗೆದ್ದು ಜಯಘೋಷ ಮಾಡುವೆನು; ಶೆಕೆಮ್ ಪ್ರದೇಶವನ್ನೂ ಸುಕ್ಕೋತ್ ಬಯಲನ್ನೂ ನನ್ನ ಜನರಿಗೆ ಕೊಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರು ತಮ್ಮ ಪರಿಶುದ್ಧ ಸ್ಥಳದಿಂದ ಹೀಗೆ ನುಡಿದಿದ್ದಾರೆ: “ನಾನು ಜಯದಿಂದ ಶೆಕೆಮ್ ಪ್ರದೇಶವನ್ನು ಹಂಚುವೆನು. ಸುಕ್ಕೋತಿನ ತಗ್ಗನ್ನು ಅಳತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 108:7
13 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವನ್ನು ನೀವು ನೋಡದಿದ್ದರೂ ಅವರನ್ನು ಪ್ರೀತಿಸುತ್ತೀರಿ. ನೀವೀಗ ಕಣ್ಣಾರೆ ಕಾಣದಿದ್ದರೂ ಅವರನ್ನು ವಿಶ್ವಾಸಿಸುತ್ತೀರಿ.


ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿಂದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿಂದ ನಮಗೆ ಹೊಸ ಜನ್ಮವನ್ನು ಮತ್ತು ಜೀವಂತ ನಿರೀಕ್ಷೆಯನ್ನು ನೀಡಿದ್ದಾರೆ.


“ದಿನಗಳು ಬರುವುವು. ಆಗ ನಿಮ್ಮನ್ನು ಕೊಂಡಿಗಳಿಂದ ಎಳೆದುಕೊಂಡು ಹೋಗುವರು; ನಿಮ್ಮಲ್ಲಿ ಅಳಿದುಳಿದವರನ್ನು ಗಾಳಕ್ಕೆ ಸಿಕ್ಕಿದ ಮೀನಿನಂತೆ ಸೆಳೆದೊಯ್ಯುವರು.” ಒಡೆಯರಾದ ದೇವರು ಇದನ್ನು ಆಣೆಯಿಟ್ಟು ನುಡಿದಿದ್ದಾರೆ.


ತರುವಾಯ ಯೆಹೋಶುವನು ಎಲ್ಲ ಇಸ್ರಯೇಲ ಕುಲದವರನ್ನು ಶೆಕೆಮಿನಲ್ಲಿ ಸಭೆ ಸೇರಿಸಿದನು. ಹಿರಿಯರು, ನಾಯಕರು, ನ್ಯಾಯಾಧಿಪತಿಗಳು, ಅಧಿಕಾರಿಗಳು ಬಂದು ದೇವರ ಸನ್ನಿಧಿಯಲ್ಲಿ ಉಪಸ್ಥಿತರಾದರು.


ಅಂತೆಯೇ ಇಸ್ರಯೆಲರು ನಫ್ತಾಲಿ ಕುಲದವರ ಮಲೆನಾಡಿನ ಪ್ರದೇಶವಾದ ಗಲಿಲೇಯ ಪ್ರಾಂತ್ಯದಲ್ಲಿನ ಕೆದೆಷ್, ಎಫ್ರಯಿಮ್ ಮಲೆನಾಡಿನ ಪ್ರದೇಶದಲ್ಲಿನ ಶೆಕೆಮ್ ಹಾಗೂ ಯೂದವಂಶದ ಮಲೆನಾಡಿನ ಹೆಬ್ರೋನ್ ಎನಿಸಿಕೊಳ್ಳುವ ಕಿರ್ಯತರ್ಬ ಎಂಬ ನಗರಗಳನ್ನು ನೇಮಿಸಿದರು.


ಮನಸ್ಸೆಯವರ ಸೊತ್ತಿನ ಎಲ್ಲೆ ಆಶೇರ್ ಊರಿನಿಂದ ತೊಡಗಿ ಶೆಕೆಮಿನ ಪೂರ್ವದಲ್ಲಿ ಇರುವ ಮಿಕ್ಮೆತಾತಿನ ಮೇಲೆ ದಕ್ಷಿಣದಲ್ಲಿರುವ ತಪ್ಪೂಹದ ಬುಗ್ಗೆಗೆ ಹೋಗುತ್ತದೆ.


ಇತ್ತ ಯಕೋಬನು ಪ್ರಯಾಣ ಬೆಳೆಸುತ್ತಾ ಸುಕ್ಕೋತಿಗೆ ಬಂದನು. ಅಲ್ಲಿ ತನಗೋಸ್ಕರ ಮನೆಯನ್ನೂ ಮಂದೆಗಳಿಗೋಸ್ಕರ ಕೊಟ್ಟಿಗೆಗಳನ್ನೂ ಕಟ್ಟಿಸಿದನು. ಈ ಕಾರಣ ಆ ಸ್ಥಳಕ್ಕೆ ‘ಸುಕ್ಕೋತ್’ ಎಂದು ಹೆಸರಾಯಿತು.


ಗಿಲ್ಯಾದ ಸೀಮೆ, ಮನಸ್ಸೆ ನಾಡು ನನ್ನವೆ I ಎಫ್ರಯಿಮ್ ಗೋತ್ರವು ಶಿರಸ್ತ್ರಾಣವು ನನಗೆ I ಜೂದ ಕುಲವು ರಾಜದಂಡವು ನನ್ನ ಕೈಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು