Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 108:8 - ಕನ್ನಡ ಸತ್ಯವೇದವು C.L. Bible (BSI)

8 ಗಿಲ್ಯಾದ ಸೀಮೆ, ಮನಸ್ಸೆ ನಾಡು ನನ್ನವೆ I ಎಫ್ರಯಿಮ್ ಗೋತ್ರವು ಶಿರಸ್ತ್ರಾಣ ನನಗೆ I ಜೂದಕುಲ ರಾಜದಂಡವಾಗಿದೆ ನನ್ನ ಕೈಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಗಿಲ್ಯಾದ್ ಸೀಮೆಯೂ, ಮನಸ್ಸೆಯ ದೇಶವೂ ನನ್ನವು. ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣ. ನನ್ನ ರಾಜದಂಡವು ಯೆಹೂದ ಕುಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಗಿಲ್ಯಾದ್ ಸೀಮೆಯೂ ಮನಸ್ಸೆಯ ದೇಶವೂ ನನ್ನವು; ಎಫ್ರಾಯೀಮ್ ಗೋತ್ರವು ನನಗೆ ಶಿರಸ್ತ್ರಾಣವು. ನನ್ನ ರಾಜದಂಡವು ಯೆಹೂದಕುಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಗಿಲ್ಯಾದ್ ಪ್ರಾಂತವೂ ಮನಸ್ಸೆ ಪ್ರಾಂತವೂ ನನ್ನದಾಗಿರುತ್ತವೆ. ಎಫ್ರಾಯೀಮ್ ನನ್ನ ಶಿರಸ್ತ್ರಾಣವಾಗಿರುತ್ತದೆ. ಯೆಹೂದವು ನನ್ನ ರಾಜದಂಡವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಗಿಲ್ಯಾದ್ ನನ್ನದು; ಮನಸ್ಸೆ ನನ್ನದು, ಎಫ್ರಾಯೀಮ್ ನನ್ನ ಶಿರಸ್ತ್ರಾಣ, ಯೆಹೂದವು ನನ್ನ ರಾಜದಂಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 108:8
7 ತಿಳಿವುಗಳ ಹೋಲಿಕೆ  

ರಾಜ್ಯಾಧಿಕಾರ ಪಡೆದವನು ಬರುವ ತನಕ ರಾಷ್ಟ್ರಗಳು ಆತನಿಗೆ ತಲೆಬಾಗುವ ತನಕ ತಪ್ಪದು ರಾಜದಂಡ ಯೆಹೂದನ ಕೈಯಿಂದ ಕದಲದು ಮುದ್ರೆಕೋಲು ಅವನ ವಂಶದಿಂದ.


ಸ್ಥಾಪಿತವಾಗಿವೆಯಿಲ್ಲಿ ನ್ಯಾಯಪೀಠಗಳು I ದಾವೀದನ ಮನೆತನದವರ ಸಿಂಹಾಸನಗಳು II


ಸೌಲನ ಸೇನಾಪತಿ ಹಾಗು ನೇರನ ಮಗನಾದ ಅಬ್ನೇರನು ಸೌಲನ ಮಗನಾದ ಈಷ್ಬೋಶೆತನನ್ನು ನದಿಯ ಆಚೆಯಲ್ಲಿರುವ ಮಹನಯಿಮಿಗೆ ಕರೆದೊಯ್ದನು.


ಫಿಲಿಷ್ಟಿಯರು ಸೈನ್ಯಕೂಡಿಸಿಕೊಂಡು ಬಂದು ಶೂನೇಮಿನಲ್ಲಿ ಪಾಳೆಯಮಾಡಿಕೊಂಡಿದ್ದರು. ಸೌಲನು ಸಮಸ್ತ ಇಸ್ರಯೇಲರೊಡನೆ ಬಂದು ಗಿಲ್ಬೋವದಲ್ಲಿ ಇಳಿದುಕೊಂಡನು.


ಅವನು ಹೆಬ್ರೋನಿನಲ್ಲಿದ್ದುಕೊಂಡು ಯೆಹೂದ ಕುಲ ಒಂದನ್ನೇ ಆಳಿದ್ದು ಏಳು ವರ್ಷ ಆರು ತಿಂಗಳು; ಜೆರುಸಲೇಮಿನಲ್ಲಿದ್ದುಕೊಂಡು ಯೆಹೂದ್ಯರನ್ನು ಹಾಗು ಇಸ್ರಯೇಲರನ್ನು ಆಳಿದ್ದು ಮೂವತ್ತಮೂರು ವರ್ಷ.


ಜೋಸೆಫನದು ಜೇಷ್ಠಸಂತತಿಯು ಗೂಳಿಯ ಗಾಂಭೀರ್ಯವೂ ಅವನ ಕೊಂಬುಗಳು, ಕಾಡುಕೋಣದ ಕೊಂಬುಗಳು ಅವುಗಳಿಂದ ಇರಿದು ಓಡಿಸಬಲ್ಲನು ಜಗದ ಜನಾಂಗಗಳನು! ಇವನಂಥವರು ಎಫ್ರಯಿಮ್ ಕುಲದ ಕೋಟ್ಯಾಂತರ ಜನರು ಇವನಂಥವರು ಮನಸ್ಸೆಕುಲದ ಲಕ್ಷಾಂತರ ಮಂದಿಗಳು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು