Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:14 - ಕನ್ನಡ ಸತ್ಯವೇದವು C.L. Bible (BSI)

14 ಮರೆಯದಿರಲಿ ಪ್ರಭು ಅವನಾ ಹಿರಿಯರ ದೋಷವನು I ಪರಿಹರಿಸದಿರಲಿ ಅವನ ತಾಯಿಯು ಗೈದ ಪಾಪವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನು ಅವನ ಹಿರಿಯರ ಪಾಪವನ್ನು ಮರೆಯದಿರಲಿ; ಅವನ ತಾಯಿಯ ಪಾಪವು ಅಳಿದುಹೋಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನು ಅವನ ಹಿರಿಯರ ಪಾಪವನ್ನು ಮರೆಯದಿರಲಿ; ಅವನ ತಾಯಿಯ ಪಾಪವು ಅಳಿದುಹೋಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನು ನನ್ನ ಶತ್ರುವಿನ ತಂದೆಯ ಪಾಪವನ್ನು ಮರೆಯದಿರಲಿ; ಅವನ ತಾಯಿಯ ಪಾಪವು ಅಳಿದುಹೋಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅವನ ಪಿತೃಗಳ ಅಕ್ರಮವು ಯೆಹೋವ ದೇವರ ಮುಂದೆ ಜ್ಞಾಪಕವಾಗಲಿ; ಅವನ ತಾಯಿಯ ಪಾಪವು ಅಳಿದು ಹೋಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:14
15 ತಿಳಿವುಗಳ ಹೋಲಿಕೆ  

ಅವರ ಅಪರಾಧವನ್ನು ಕ್ಷಮಿಸಬೇಡಿ. ನಿಮ್ಮೆದುರಿಗಿರುವ ಅವರ ಪಾಪವನ್ನು ಅಳಿಸಿಬಿಡಬೇಡಿ. ಏಕೆಂದರೆ ಕಟ್ಟುವವರ ಮುಂದೆಯೇ ಅವರು ನಿಮ್ಮನ್ನು ಕೆಣಕಿದ್ದಾರೆ,” ಎಂದು ನಾನು ಪ್ರಾರ್ಥಿಸಿದೆ.


ಅವುಗಳಿಗೆ ಅಡ್ಡಬೀಳಬೇಡ, ಅವುಗಳನ್ನು ಆರಾಧಿಸಬೇಡ. ಏಕೆಂದರೆ ನಾನೇ ನಿನ್ನ ದೇವರಾದ ಸರ್ವೇಶ್ವರ. ನನಗೆ ಸಲ್ಲತಕ್ಕ ಗೌರವವನ್ನು ನಾನು ಮತ್ತೊಬ್ಬರಿಗೆ ಸಲ್ಲಗೊಡಿಸುವುದಿಲ್ಲ. ನನ್ನನ್ನು ದ್ವೇಷಿಸುವವರನ್ನು ದಂಡಿಸುತ್ತೇನೆ; ಅವರ ದೋಷಫಲವನ್ನು ಅವರ ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುತ್ತೇನೆ.


ಸರ್ವೇಶ್ವರಾ, ನನ್ನನ್ನು ಕೊಲ್ಲಲು ಅವರು ಮಾಡಿಕೊಂಡಿರುವ ಸಂಚು ನಿಮಗೆ ತಿಳಿದಿದೆ. ಅವರ ಅಪರಾಧವನ್ನು ಕ್ಷಮಿಸಬೇಡಿ, ಅವರ ಪಾಪವನ್ನು ಅಳಿಸಬೇಡಿ, ಅದು ನಿಮ್ಮ ಕಣ್ಣೆದುರಿಗೇ ಇರಲಿ. ಅವರು ನಿಮ್ಮ ಮುಂದೆ ಎಡವಿಬೀಳಲಿ. ನಿಮ್ಮ ಕೋಪ ವ್ಯಕ್ತವಾಗುವಾಗ ಅವರಿಗೆ ತಕ್ಕುದನ್ನು ಮಾಡಿ.”


ಆದರೂ ನಾನೇ ನಾನಾಗಿ ಅಳಿಸಿಬಿಡುವೆ ನಿನ್ನ ದ್ರೋಹಗಳನು, ನನ್ನ ನೆನಪಿನಿಂದ ತೆಗೆದುಹಾಕುವೆ ನಿನ್ನ ಪಾಪಗಳನು.


ಅಹಜ್ಯನು ಮರಣಹೊಂದಿದನೆಂಬುದನ್ನು ಅವನ ತಾಯಿ ಅತಲ್ಯಳು ಕೇಳಿದಾಗ ರಾಜಸಂತಾನದವರನ್ನೆಲ್ಲಾ ಬೇಗನೆ ಸಂಹರಿಸಿಬಿಟ್ಟಳು.


ಜುದೇಯದ ಅರಸನಾದ ಅಹಜ್ಯನು ಇದನ್ನೆಲ್ಲಾ ಕಂಡು ಬೇತ್‍ಹಗ್ಗನಿನ ಮಾರ್ಗವಾಗಿ ಓಡಿಹೋದನು. ಯೇಹುವು ಅವನನ್ನು ಹಿಂದಟ್ಟಿ, “ಅವನನ್ನೂ ರಥದಲ್ಲಿಯೇ ಹೊಡೆಯಿರಿ,” ಎಂದು ಕೂಗಲು ಅವನ ಜನರು ಇಬ್ಲೆಯಾಮಿನ ಬಳಿಯಲ್ಲಿರುವ ಗೂರ್ ಗಟ್ಟದ ಮೇಲೆ ಅವನನ್ನು ಗಾಯಪಡಿಸಿದರು. ಅಹಜ್ಯನು ಮೆಗಿದ್ದೋವಿಗೆ ಓಡಿಹೋಗಿ ಅಲ್ಲಿ ಸತ್ತನು.


ಇವನಿಗೂ ಅಹಾಬನ ಕುಟುಂಬದವರಿಗೂ ಬೀಗತನ ಇದ್ದುದರಿಂದ ಇವನು ಅವರ ಹೆಜ್ಜೆಯಲ್ಲೇ ನಡೆದು ಸರ್ವೇಶ್ವರನ ದೃಷ್ಟಿಯಲ್ಲಿ ದ್ರೋಹಿಯಾದನು.


ದಾವೀದನ ಕಾಲದಲ್ಲಿ ಮೂರು ವರ್ಷಗಳವರೆಗೂ ಬಿಡದೆ ಬರವಿತ್ತು. ದಾವೀದನು ಸರ್ವೇಶ್ವರಸ್ವಾಮಿಯನ್ನು ವಿಚಾರಿಸಿದಾಗ, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೂ ಅವನ ಮನೆಯವರ ಮೇಲೂ ರಕ್ತಾಪರಾಧ ಇರುತ್ತದೆ,” ಎಂಬ ಉತ್ತರ ದೊರಕಿತು.


ಈ ಅಪರಾಧ ಯೋವಾಬನ ಮೇಲೂ ಅವನ ಸಂತಾನದವರೆಲ್ಲರ ಮೇಲೂ ಇರಲಿ ಅವನ ಮನೆಯಲ್ಲಿ ಮೇಹಸ್ರಾವವುಳ್ಳವರು, ಕುಷ್ಠರೋಗಿಗಳು, ಕುಂಟರು, ಕತ್ತಿಯಿಂದ ಹತರಾಗುವವರು ಹಾಗು ಭಿಕ್ಷೆಬೇಡುವವರು ಇದ್ದೇ ಇರಲಿ,” ಎಂದನು


ನಿಮ್ಮಲ್ಲಿ ಅಳಿದುಳಿದವರು ತಮ್ಮ ಪಾಪದ ಪ್ರಯುಕ್ತ ಹಾಗು ತಮ್ಮ ಪಿತೃಗಳ ಪಾಪದ ಪ್ರಯುಕ್ತ ಅವರಂತೆಯೇ ಶತ್ರುಗಳ ನಾಡುಗಳಲ್ಲಿ ಕ್ಷೀಣವಾಗಿ ಹೋಗುವರು.


ಸಾವಿರಾರು ತಲೆಗಳವರೆಗೂ ಅಚಲಪ್ರೀತಿ ತೋರುವವನು, ದೋಷಾಪರಾಧಗಳನ್ನೂ ಪಾಪಗಳನ್ನೂ ಕ್ಷಮಿಸುವವನು; ಆದರೂ ತಪ್ಪಿತಸ್ಥರನ್ನು ಶಿಕ್ಷಿಸದೆ ಬಿಡದವನು. ಹೆತ್ತವರ ದೋಷಪರಿಣಾಮಗಳನ್ನು ಮಕ್ಕಳ ಮೇಲೆ ಮೂರುನಾಲ್ಕು ತಲೆಗಳವರೆಗೆ ಬರಮಾಡುವವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು