Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:15 - ಕನ್ನಡ ಸತ್ಯವೇದವು C.L. Bible (BSI)

15 ಅವರ ಪಾಪಗಳು ಪ್ರಭುವಿನ ನೆನಪಲ್ಲಿರಲಿ I ಅವನ ಹೆಸರೇ ಇಲ್ಲದಂತಾಗಲಿ ಧರೆಯಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವು ಯೆಹೋವನ ಜ್ಞಾಪಕದಲ್ಲಿ ಇದ್ದೇ ಇರಲಿ. ಆತನು ಅವರ ಹೆಸರನ್ನು ಭೂಮಿಯಿಂದ ತೆಗೆದುಹಾಕಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅವು ಯೆಹೋವನ ಜ್ಞಾಪಕದಲ್ಲಿ ಇದ್ದೇ ಇರಲಿ. ಆತನು ಅವರ ಹೆಸರನ್ನು ಭೂವಿುಯಿಂದ ತೆಗೆದುಹಾಕಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆ ಪಾಪಗಳನ್ನು ಯೆಹೋವನು ಯಾವಾಗಲೂ ಜ್ಞಾಪಕಮಾಡಿಕೊಳ್ಳಲಿ; ಭೂಮಿಯ ಮೇಲೆ ಅವರ ನೆನಪೇ ಉಳಿಯದಂತೆ ಯೆಹೋವನು ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವು ಯಾವಾಗಲೂ ಯೆಹೋವ ದೇವರ ಮುಂದೆ ಇರಲಿ; ದೇವರು ಅವರ ನೆನಪನ್ನು ಭೂಮಿಯೊಳಗಿಂದ ತೆಗೆದುಬಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:15
11 ತಿಳಿವುಗಳ ಹೋಲಿಕೆ  

ದುರ್ಜನರಿಗಾದರೋ ಪ್ರಭು ವಿಮುಖನು I ಅವರ ಹೆಸರನು ಧರೆಯಿಂದ ಅಳಿಸುವನು II


ನಿನ್ನ ನೋಟಕೆ ಮರೆಯಾಗಿಲ್ಲ ನಮ್ಮ ಪಾಪದೋಷಗಳು I ನಿನ್ನ ಮುಖಕಾಂತಿಗೆ ಬಟ್ಟಬಯಲಾಗಿವೆ ಗುಪ್ತಾಪರಾಧಗಳು II


ಅವನ ಸ್ಮರಣೆ ಅಳಿದುಹೋಗುವುದು ಜಗದಲಿ ಇಲ್ಲವಾಗುವುದು ಅವನ ಹೆಸರು ನಾಡಿನಲಿ.


ನನ್ನ ಪಾಪದೋಷಕೆ ವಿಮುಖನಾಗು I ಸರ್ವದ್ರೋಹಗಳನು ಅಳಿಸಿಹಾಕು II


ಯಕೋಬನ ಮಹಿಮಾನ್ವಿತ ಸರ್ವೇಶ್ವರ ಆಣೆಯಿಟ್ಟು ಹೇಳುವುದೇನೆಂದರೆ: “ಖಂಡಿತವಾಗಿ ಅವರ ದುಷ್ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ನಾನು ಮರೆಯಲಾರೆ.


ನೀನು ಎಷ್ಟೇ ಚೌಳಿನಿಂದ ತೊಳೆದುಕೊಂಡರೂ ಎಷ್ಟೇ ಸಬ್ಬುಸೀಗೆಯಿಂದ ಉಜ್ಜಿಕೊಂಡರೂ ನಿನ್ನ ಅಕ್ರಮ ನನ್ನೆದುರಿಗೆ ಕಣ್ಣುಕಿಚ್ಚಾಗಿ ನಿಂತಿದೆ. ಇದು ಸರ್ವೇಶ್ವರ ಸ್ವಾಮಿಯಾದ ನನ್ನ ನುಡಿ.


ಆಯ್ಕೆಯಾದವರಿಗೆ ನಿಮ್ಮ ಹೆಸರು ಶಾಪದ ಹೆಸರಾಗಿಯೇ ಉಳಿಯುವುದು. ಏಕೆಂದರೆ, ಸ್ವಾಮಿ ಸರ್ವೇಶ್ವರ ಆದ ನಾನು ನಿಮ್ಮನ್ನು ಕೊಲೆಗೀಡುಮಾಡುವೆನು. ನನ್ನ ಭಕ್ತಾದಿಗಳಿಗಾದರೋ ಹೊಸ ಹೆಸರನ್ನು ಕೊಡುವೆನು.


ನಿರ್ಮೂಲವಾಗಲಿ ಅವನಾ ಪೀಳಿಗೆ I ನಿರ್ನಾಮವಾಗಲಿ ಮರುವಂಶದೊಳಗೆ II


“ಇಸ್ರಯೇಲನನು ಇಟ್ಟಿದ್ದೇನೆ ಮುದ್ರೆಹಾಕಿ ಉಗ್ರಾಣದೊಳು ಇಟ್ಟಿದ್ದೇನೆ ಭದ್ರವಾಗಿ.


ಆದರೆ ಅವರ ದುಷ್ಕೃತ್ಯಗಳೆಲ್ಲ ಸರ್ವೇಶ್ವರಸ್ವಾಮಿಯ ಜ್ಞಾಪಕದಲ್ಲಿ ಇರುತ್ತವೆ ಎಂಬುದನ್ನು ಅವರು ಮನದಟ್ಟುಮಾಡಿಕೊಂಡಿಲ್ಲ. ಅವರ ನೀಚಕೃತ್ಯಗಳು ಅವರನ್ನು ಆವರಿಸಿಕೊಂಡಿವೆ; ನನ್ನ ಕಣ್ಮುಂದೆಯೇ ಇವೆ.


ಕಿವಿಗೊಡುವನು ಪ್ರಭು ಸಜ್ಜನರ ಮೊರೆಗೆ I ನೆರವೀವನವರ ಕಷ್ಟನಿವಾರಣೆಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು