Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:16 - ಕನ್ನಡ ಸತ್ಯವೇದವು C.L. Bible (BSI)

16 ಯಾರೊಬ್ಬನಿಗು ಮರುಕತೋರೆ ಮರೆತುಬಿಟ್ಟನವನು I ಕೊಲ್ಲಲು ಯತ್ನಿಸಿದನು ದೀನರನು, ಮನಗುಂದಿದವರನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಏಕೆಂದರೆ ಅವನು ಕರುಣೆ ತೋರಿಸುವುದನ್ನು ಮರೆತುಬಿಟ್ಟನು, ಬಡವನನ್ನು, ದೀನನನ್ನು, ಮನಗುಂದಿದವನನ್ನು ಹಿಂಸಿಸಿ ಕೊಲ್ಲಬೇಕೆಂದು ಯತ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯಾಕಂದರೆ ಅವನು ಪ್ರೀತಿಸುವದನ್ನು ಮರೆತುಬಿಟ್ಟನು. ಬಡವನನ್ನೂ ದೀನನನ್ನೂ ಮನಗುಂದಿದವನನ್ನೂ ಹಿಂಸಿಸಿ ಕೊಲ್ಲಬೇಕೆಂದು ಯತ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯಾಕೆಂದರೆ, ಆ ದುಷ್ಟನು ಯಾವ ಒಳ್ಳೆಯದನ್ನೂ ಮಾಡಲಿಲ್ಲ; ಯಾರನ್ನೂ ಪ್ರೀತಿಸಲಿಲ್ಲ. ಅವನು ಬಡಜನರಿಗೂ ಮತ್ತು ಅಸಹಾಯಕರಿಗೂ ಜೀವನವನ್ನು ಕಷ್ಟಕರವನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಏಕೆಂದರೆ ಅವನು ಯಾರಿಗೂ ದಯೆ ತೋರಿಸಲಿಲ್ಲ. ಬಡವನನ್ನೂ, ದೀನನನ್ನೂ, ಮನಗುಂದಿದವನನ್ನೂ ಹಿಂಸಿಸಿ ಸಾಯಿಸಬೇಕೆಂದು ಯತ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:16
16 ತಿಳಿವುಗಳ ಹೋಲಿಕೆ  

ಸನಿಹದಲ್ಲಿಹನು ಪ್ರಭು ಭಗ್ನ ಹೃದಯಿಗಳಿಗೆ I ಉದ್ಧಾರಕನಾತನು ಮನಸ್ಸು ಕುಗ್ಗಿದವರಿಗೆ II


ದಯೆತೋರದವನಿಗೆ, ದಯೆದಾಕ್ಷಿಣ್ಯವಿಲ್ಲದ ನ್ಯಾಯತೀರ್ಪು ಕಾದಿರುತ್ತದೆ. ನ್ಯಾಯಕ್ಕೂ ಮಿಗಿಲಾಗಿ ವಿಜೃಂಭಿಸುವುದು ದಯೆಯೇ.


ಹಿಡಿದಿಹರು ದುರುಳರು ಕತ್ತಿಯನು, ಎತ್ತಿಹರು ಬಿಲ್ಲನು I ಕೆಡಹಲು ದೀನದಲಿತರನು, ಕೊಲ್ಲಲು ಸಜ್ಜನರನು II


ದಯಾವಂತರು ಭಾಗ್ಯವಂತರು; ದೇವರ ದಯೆ ಅವರಿಗೆ ದೊರಕುವುದು.


ದುಷ್ಟನಿಟ್ಟಿರುವನು ಕಣ್ಣನು ಸಜ್ಜನರ ಮೇಲೆ I ಹೊಂಚುಹಾಕಿ ನೋಡುತಿಹನು ಮಾಡಲವರ ಕೊಲೆ II


ಹೌದು ದೇವಾ, ನೀ ವಿಚಾರಿಪವನು; ದುಃಖದುಗುಡ ಲೆಕ್ಕಿಸುವವನು I ತಬ್ಬಲಿಗಳಿಗೆ ತಂದೆ ನೀನು, ನಿರ್ಗತಿಕ ನಿನಗೆ ಶರಣಾಗತನು II


ಸೊಕ್ಕಿನಿಂದ ಶೋಷಿಸುತಿಹರು ದಲಿತರನು ದುರುಳರು I ಸಿಕ್ಕಿಬೀಳಲಿ ತಾವೇ ಒಡ್ಡಿದ ಉರಿಲಿನೊಳವರು II


ಆಗ ಅವರು ತಮ್ಮತಮ್ಮೊಳಗೆ, “ನಾವು ನಮ್ಮ ತಮ್ಮನಿಗೆ ಮಾಡಿದ ದ್ರೋಹಕ್ಕೆ ತಕ್ಕ ದಂಡನೆಯನ್ನು ಅನುಭವಿಸುತ್ತಿದ್ದೇವೆ. ಅವನು ನಮ್ಮನ್ನು ಕಳಕಳಿ ಬೇಡಿಕೊಂಡ. ಅವನ ಪ್ರಾಣಸಂಕಟವನ್ನು ತಿಳಿದೂ ನಾವು ಅವನ ಮೊರೆಗೆ ಕಿವಿಗೊಡಲಿಲ್ಲ. ಆದ್ದರಿಂದಲೆ ಈ ಸಂಕಟದಲ್ಲಿ ಸಿಕ್ಕಿಹಾಕಿಕೊಂಡು ಇದ್ದೇವೆ,” ಎಂದು ಮಾತಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು