ಕೀರ್ತನೆಗಳು 109:17 - ಕನ್ನಡ ಸತ್ಯವೇದವು C.L. Bible (BSI)17 ಅವನಿಗೆ ಪ್ರಿಯ ಶಪಿಸುವುದೆಂದರೆ, ಎರಗಲಿದೀಗ ಅವನ ಮೇಲೇ I ಆಶೀರ್ವದಿಸುವುದು ಅವನಿಗಪ್ರಿಯ, ಇರಲಿ ಅವನಿಗದು ದೂರದಲೇ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಶಪಿಸುವುದು ಅವನಿಗೆ ಇಷ್ಟವಾಗಿತ್ತು, ಅದೇ ಅವನಿಗೆ ಬರಲಿ! ಆಶೀರ್ವದಿಸುವುದು ಅವನಿಗೆ ಇಷ್ಟವಿರಲ್ಲಿಲ್ಲ, ಅದು ಅವನಿಂದ ದೂರವಿರಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಶಪಿಸುವದು ಇಷ್ಟವಾಗಿದ್ದದರಿಂದ ಅದು ಅವನಿಗೆ ಬಂತು; ಆಶೀರ್ವದಿಸುವದು ಇಷ್ಟವಲ್ಲದ್ದರಿಂದ ಅದು ಅವನಿಗೆ ದೂರವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಜನರನ್ನು ಶಪಿಸುವುದೇ ಅವನಿಗೆ ಇಷ್ಟವಾಗಿತ್ತು. ಆದ್ದರಿಂದ ಆ ಶಾಪಗಳು ಅವನಿಗೇ ಸಂಭವಿಸಲಿ. ಅವನು ಜನರನ್ನು ಆಶೀರ್ವದಿಸಲೇ ಇಲ್ಲ. ಆದ್ದರಿಂದ ಅವನಿಗೆ ಒಳ್ಳೆಯದಾಗದಂತೆ ಮಾಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವನು ಶಾಪಕೊಡಲು ಇಷ್ಟಪಟ್ಟನು; ಅದೇ ಅವನಿಗೆ ಬರಲಿ; ಅವನು ಆಶೀರ್ವಾದವನ್ನು ಮೆಚ್ಚಲಿಲ್ಲ; ಅದು ಅವನಿಗೆ ದೂರವಾಗಿರಲಿ. ಅಧ್ಯಾಯವನ್ನು ನೋಡಿ |