Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:18 - ಕನ್ನಡ ಸತ್ಯವೇದವು C.L. Bible (BSI)

18 ಶಪಿಸುವುದೆಂದರೆ ಅವನಿಗೆ ಉಡಿಗೆತೊಡಿಗೆಯಂತೆ I ಇಳಿಯಲಿ ಅದೀಗ ಅವನ ದೇಹಕೆ ನೀರಿನಂತೆ I ಸೇರಲಿ ಅದೀಗ ಅವನ ಕೀಲಿಗೆ ಎಣ್ಣೆಯಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವನು ಶಾಪವನ್ನೇ ವಸ್ತ್ರವನ್ನಾಗಿ ಹೊದ್ದುಕೊಳ್ಳಲಿ, ಅದು ನೀರಿನಂತೆ ಅವನ ಅಂತರಂಗದಲ್ಲಿಯೂ, ಎಣ್ಣೆಯಂತೆ ಎಲುಬುಗಳಲ್ಲಿಯೂ ಸೇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಶಪಿಸುವದೇ ಅವನಿಗೆ ವಸ್ತ್ರವಾಗಿತ್ತು. ಅದು ನೀರಿನಂತೆ ಅವನ ಅಂತರಂಗದಲ್ಲಿಯೂ ಎಣ್ಣೆಯಂತೆ ಎಲುಬುಗಳಲ್ಲಿಯೂ ಸೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅವನು ಉಡುಪುಗಳನ್ನು ಧರಿಸುವಂತೆ ಶಪಿಸುವುದೇ ಅವನ ದಿನನಿತ್ಯ ಜೀವಿತದ ಕೆಲಸವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವನು ತನ್ನ ವಸ್ತ್ರದಂತೆ ಶಾಪವನ್ನು ಹೊದ್ದುಕೊಂಡನು; ಅದು ನೀರಿನಂತೆ ಅವನ ಅಂತರಂಗದಲ್ಲಿಯೂ, ಎಣ್ಣೆಯಂತೆ ಅವನ ಎಲುಬುಗಳಲ್ಲಿಯೂ ಸೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:18
14 ತಿಳಿವುಗಳ ಹೋಲಿಕೆ  

ಈ ಕಾರಣ ಗರ್ವವೇ ಅವರಿಗೆ ಕಂಠಮಾಲೆ I ಹಿಂಸಾಚಾರವೇ ಅವರಿಗೆ ಬಟ್ಟೆಬರೆ II


ಶಾಪತರುವ ಈ ನೀರು ನಿನ್ನೊಳಗೆ ಸೇರಿ ನಿನ್ನ ಹೊಟ್ಟೆ ಉಬ್ಬುವಂತೆ, ಜನನೇಂದ್ರಿಯಗಳು ಬತ್ತಿಹೋಗುವಂತೆ ಮಾಡಲಿ,” ಎಂದು ಹೇಳಬೇಕು. ಅದಕ್ಕೆ ಆ ಹೆಂಗಸು, “ಆಗಲಿ, ಹಾಗೆಯೇ ಆಗಲಿ,” ಎಂದು ಹೇಳಬೇಕು.


ನೀವು ದೇವರಿಂದ ಆಯ್ಕೆಯಾದವರು. ದೇವರಿಗೆ ಪ್ರಿಯವಾದವರು. ದೇವರ ಸ್ವಂತಜನರು. ಹೀಗಿರಲಾಗಿ ಕನಿಕರ, ದಯೆ, ದೀನತೆ, ವಿನಯಶೀಲತೆ, ಶಾಂತಿ, ಸಹನೆ ಎಂಬ ಸದ್ಗುಣಗಳೇ ನಿಮ್ಮ ಆಭರಣಗಳಾಗಿರಲಿ.


ಅಂತೆಯೇ ಯುವಜನರೇ, ನೀವು ಹಿರಿಯರಿಗೆ ವಿಧೇಯರಾಗಿ ನಡೆದುಕೊಳ್ಳಿ. ನೀವೆಲ್ಲರೂ ದೀನಮನೋಭಾವನೆಯನ್ನು ಧರಿಸಿಕೊಂಡು ಒಬ್ಬರಿಗೊಬ್ಬರು ಸೇವೆಮಾಡಿ. “ಗರ್ವಿಷ್ಠರನ್ನು ದೇವರು ವಿರೋಧಿಸುತ್ತಾರೆ. ನಮ್ರರಿಗಾದರೋ ಅವರು ದಯೆತೋರುತ್ತಾರೆ,” ಎಂದು ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಈಗಲಾದರೋ ಕೋಪ, ರೋಷ, ಮತ್ಸರ - ಇವುಗಳನ್ನು ತ್ಯಜಿಸಿರಿ; ದೂಷಣೆ ಮತ್ತು ಹೊಲಸು ಮಾತುಗಳು ನಿಮ್ಮ ಬಾಯಿಂದ ಬರಕೂಡದು.


("ಇವನು ತನ್ನ ನೀಚ ಕೃತ್ಯದಿಂದ ಪಡೆದ ಹಣದಿಂದ ಒಂದು ಹೊಲವನ್ನು ಕೊಂಡುಕೊಂಡ. ಆದರೆ ಅದರಲ್ಲೇ ಪ್ರಾಣ ಕಳೆದುಕೊಂಡ. ತಲೆಕೆಳಗಾಗಿ ಬಿದ್ದು, ಹೊಟ್ಟೆ ಬಿರಿದು, ಕರುಳೆಲ್ಲಾ ಹೊರಬಂದು ಸತ್ತುಹೋದ.


ನರಪುತ್ರನೇನೋ ಪವಿತ್ರಗ್ರಂಥದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತಾನೆ, ನಿಜ. ಆದರೆ ಅಯ್ಯೋ, ನರಪುತ್ರನಿಗೆ ದ್ರೋಹಬಗೆಯುವವನ ದುರ್ಗತಿಯನ್ನು ಏನೆಂದು ಹೇಳಲಿ! ಅವನು ಹುಟ್ಟದೇ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು!” ಎಂದರು.


ಧರ್ಮವನ್ನು ನಾನು ಧರಿಸಿಕೊಂಡೆ; ಅದು ನನಗೆ ಅಂಬರವಾಗಿತ್ತು ನ್ಯಾಯನೀತಿ ನನಗೆ ನಿಲುವಂಗಿಯೂ ಪೇಟವೂ ಆಗಿತ್ತು.


ಅವಳು ದೋಷಿಯಾಗಿ ಗಂಡನಿಗೆ ದ್ರೋಹವೆಸಗಿದ್ದರೆ ಕುಡಿದ ಶಾಪಕರವಾದ ಆ ನೀರು ಅವಳೊಳಗೆ ಸೇರಿ ವಿಷವಾಗುವುದು. ಈ ಕಾರಣ ಅವಳ ಹೊಟ್ಟೆ ಉಬ್ಬುವುದು. ಅವಳ ಜನನೇಂದ್ರಿಯಗಳು ಬತ್ತಿಹೋಗುವುವು. ಆಕೆ ತನ್ನ ಜನರ ಮಧ್ಯೆ ಶಾಪಗ್ರಸ್ತಳಾಗುವಳು.


ಅವನಿಗಿರಲಿ ಶಾಪ ಹೊದಿಕೆಯಂತೆ I ಅದುವೆ ಅನುದಿನದ ನಡುಗಟ್ಟಂತೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು