Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:20 - ಕನ್ನಡ ಸತ್ಯವೇದವು C.L. Bible (BSI)

20 ನನಗೆದುರಾಡಿ ತಪ್ಪು ಹೊರಿಸುವವರಿಗೆ I ಅದುವೇ ಪ್ರಭುವಿನಿಂದ ಗಿಟ್ಟುವ ಕೊಡುಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನನ್ನನ್ನು ಎದುರಿಸಿ ಕೀಳುಮಾತನಾಡುವವರಿಗೆ ಯೆಹೋವನಿಂದ ಬರುವ ಪ್ರತಿಫಲವು ಇದೇ ಆಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ನನ್ನನ್ನು ಎದುರಿಸಿ ಕೀಳುಮಾತಾಡುವವರಿಗೆ ಯೆಹೋವನಿಂದ ಬರುವ ಪ್ರತಿಫಲ ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನನ್ನ ಶತ್ರುವಿಗೂ ನನ್ನನ್ನು ಕೊಲ್ಲಬೇಕೆಂದಿರುವವರಿಗೂ ಯೆಹೋವನು ಅವುಗಳನ್ನು ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಇದು ನನಗೆ ವಿರೋಧವಾಗಿ ಕೇಡು ಮಾತಾಡುವ ನನ್ನ ಎದುರಾಳಿಗಳಿಗೆ ಯೆಹೋವ ದೇವರಿಂದ ಪ್ರತಿಫಲವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:20
19 ತಿಳಿವುಗಳ ಹೋಲಿಕೆ  

ಕಂಚುಗಾರನಾದ ಅಲೆಗ್ಸಾಂಡರನು ನನಗೆ ಬಹಳ ಕೇಡುಮಾಡಿದ್ದಾನೆ. ಪ್ರಭು ಅವನ ಕೃತ್ಯಗಳಿಗೆ ತಕ್ಕ ಶಿಕ್ಷೆಯನ್ನು ವಿಧಿಸುವರು.


ದಂಡಿಸುವನಾ ಕೆಡುಕರನು ಅವರ ಕೆಟ್ಟತನಕ್ಕಾಗಿ I ನಿರ್ಮೂಲ ಮಾಡುವನಾ ಜನರ ದುಷ್ಟತನಕ್ಕಾಗಿ I ನಮ್ಮೊಡೆಯ ದೇವನು ಸಂಹರಿಸಿಬಿಡುವನು ಈ ಕಾರಣಕ್ಕಾಗಿ II


ಇದಲ್ಲದೆ, ಅರಸನು ಅವನಿಗೆ, “ನೀನು ನನ್ನ ತಂದೆ ದಾವೀದನಿಗೆ ವಿರುದ್ಧ ಮಾಡಿದ ಪಾಪಕ್ಕೆ ಮನವೇ ಸಾಕ್ಷಿ; ಸರ್ವೇಶ್ವರ ಅದರ ಫಲವನ್ನು ನಿನ್ನ ತಲೆಯ ಮೇಲೆ ಬರಮಾಡುವರು.


ಇಷ್ಟುಮಾತ್ರ ನಿಮಗೆ ಸ್ಪಷ್ಟವಾಗಿ ತಿಳಿದಿರಲಿ; ಪವಿತ್ರಾತ್ಮ ಪ್ರೇರಣೆಯಿಂದ ಮಾತನಾಡುವ ಯಾವಾತನೂ, “ಯೇಸುವಿಗೆ ಧಿಕ್ಕಾರ!” ಎನ್ನಲಾರನು. ಅಂತೆಯೇ, ಪವಿತ್ರಾತ್ಮ ಪ್ರೇರಣೆಯಿಂದಲ್ಲದೆ ಯಾವಾತನೂ, “ಯೇಸುವೇ ಪ್ರಭು,” ಎಂದು ಒಪ್ಪಿಕೊಳ್ಳಲಾರನು.


“ಅಲ್ಲದೆ, ‘ನಾನು ತಮಗೆ ರಾಜನಾಗುವುದು ಬೇಡವೆಂದ ನನ್ನ ಶತ್ರುಗಳನ್ನು ಇಲ್ಲಿಗೆ ಎಳೆದು ತಂದು ನನ್ನ ಮುಂದೆಯೇ ಸಂಹರಿಸಿರಿ,” ಎಂದ.”


ಅದಕ್ಕೆ ಯೇಸು, “ಅವನನ್ನು ತಡೆಯಬೇಡಿ, ನನ್ನ ಹೆಸರಿನಲ್ಲಿ ಅದ್ಭುತ ಮಾಡುವವನು ಮರುಕ್ಷಣವೇ ನನ್ನ ವಿಷಯವಾಗಿ ಅಪಪ್ರಚಾರ ಮಾಡನು.


ಆದರೆ ಫರಿಸಾಯರು ಇದನ್ನು ಕೇಳಿದಾಗ, “ಇವನು ದೆವ್ವಗಳನ್ನು ಬಿಡಿಸುತ್ತಿರುವುದು ದೆವ್ವಗಳ ಒಡೆಯನಾದ ಬೆಲ್ಜೆಬೂಲನ ಶಕ್ತಿಯಿಂದಲೇ,” ಎಂದರು.


ನರಪುತ್ರನು ಬಂದನು; ಅನ್ನಪಾನೀಯಗಳನ್ನು ಸೇವಿಸಿದನು. ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ ಎನ್ನುತ್ತಾರೆ. ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದರ ಕಾರ್ಯಗಳಿಂದಲೇ ಸಮರ್ಥಿಸಲಾಗುತ್ತದೆ,” ಎಂದರು.


ನುಡಿದಿಹನು ಇಂತೆಂದು ಪ್ರಭು ನನ್ನೊಡೆಯನಿಗೆ I “ಆಸೀನನಾಗಿರು ನೀನು ನನ್ನ ಬಲಗಡೆಗೆ I ಹಗೆಗಳನು ನಿನಗೆ ಕಾಲ್ಮಣೆಯಾಗಿಸುವವರೆಗೆ” II


ನನಗೆದುರಾಗಿ ಶತ್ರುಗಳಾಲೋಚಿಸುತಿಹರಯ್ಯಾ I ನನ್ನ ಕೊಲೆಗಾಗಿ ಒಂದುಗೂಡಿ ಹೊಂಚಿಸುತಿಹರಯ್ಯಾ II


ಇಲ್ಲದಿರೆ ಭುಗಿಲೆದ್ದೀತು ಆತನ ಕೋಪಾವೇಶ I ಮಾರ್ಗಮಧ್ಯದಲೇ ಕಾದಿರಬಹುದು ನಿಮಗೆ ವಿನಾಶ I ಆತನನು ಆಶ್ರಯಿಸುವವರಿಗಿದೆ ಸೌಭಾಗ್ಯ ಸಂತೋಷ II


ಅರಸನು ಅವನನ್ನು, “ಆ ಯುವಕ ಅಬ್ಷಾಲೋಮನು ಸುರಕ್ಷಿತನಾಗಿದ್ದಾನೆಯೋ?’ ಎಂದು ಕೇಳಿದನು. ಅವನು, “ನನ್ನ ಒಡೆಯರಾದ ಅರಸರ ಶತ್ರುಗಳಿಗೂ, ಅವರಿಗೆ ಕೇಡು ಮಾಡುವುದಕ್ಕೆ ನಿಂತವರೆಲ್ಲರಿಗೂ ಆ ಯುವಕನಿಗಾದ ಗತಿಯೇ ಆಗಲಿ!” ಎಂದು ಉತ್ತರಕೊಟ್ಟನು.


ಅಹೀತೋಫೆಲನು ತನ್ನ ಆಲೋಚನೆ ನಡೆಯಲಿಲ್ಲವೆಂದು ತಿಳಿದು, ಕತ್ತೆಗೆ ತಡಿಹಾಕಿಸಿ ಕುಳಿತುಕೊಂಡು ತನ್ನ ಊರಿಗೆ ಹೋಗಿದ್ದನು. ಮನೆಯ ವ್ಯವಸ್ಥೆಮಾಡಿ ಅನಂತರ ಉರ್ಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು