Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:22 - ಕನ್ನಡ ಸತ್ಯವೇದವು C.L. Bible (BSI)

22 ಬಡವ ನಾನು, ನನಗಿದೆ ಕುಂದುಕೊರತೆ I ನನ್ನ ಎದೆಗೆ ಅಲಗೇ ನಾಟಿದಂತಿದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಾನು ಬಡವನೂ, ದೀನನೂ ಆಗಿದ್ದೇನಲ್ಲಾ! ನನ್ನ ಹೃದಯದಲ್ಲಿ ಅಲಗು ನೆಟ್ಟಂತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಾನು ಬಡವನೂ ದೀನನೂ ಆಗಿದ್ದೇನಲ್ಲಾ! ನನ್ನ ಹೃದಯದಲ್ಲಿ ಅಲಗು ನೆಟ್ಟಂತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಾನು ಕೇವಲ ಬಡವನೂ ಅಸಹಾಯಕನೂ ಆಗಿರುವೆ. ನನ್ನ ಹೃದಯವು ನೊಂದು ದುಃಖಗೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಏಕೆಂದರೆ ನಾನು ಬಡವನೂ ಅಗತ್ಯತೆಯಲ್ಲಿ ಇರುವವನೂ ಆಗಿದ್ದೇನೆ; ನನ್ನ ಹೃದಯವು ನನ್ನ ಅಂತರಂಗದಲ್ಲಿ ಗಾಯಗೊಂಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:22
15 ತಿಳಿವುಗಳ ಹೋಲಿಕೆ  

ಹೇ ಪ್ರಭು, ನೀಡೆನಗೆ ಸದುತ್ತರವನು I ಕಿವಿಗೊಡು, ದೀನನು, ದಲಿತನು ನಾನು II


ಬಿಸಿಲಿಗೆ ಬಾಡಿದ ಹುಲ್ಲಿನಂತಿದೆ ಎನ್ನೆದೆ I ತಿಂಡಿತೀರ್ಥವನುಣ್ಣಲೂ ನಾ ಮರೆತುಹೋದೆ II


ಬಡವನು, ದುರ್ಬಲನು ಆದೆನಗೆ ಪ್ರಭೂ, ನೀ ಹಿತಚಿಂತಕನು I ತಡಮಾಡಬೇಡ ದೇವಾ, ನೀನೆನಗುದ್ಧಾರಕನು, ಸಹಾಯಕನು II


ಮನುಜ ನಾನು, ಕ್ರಿಮಿಕೀಟಕೆ ಸಮಾನನು I ಅಲಕ್ಷಿತನು, ಪರರಿಂದ ತಿರಸ್ಕೃತನು II


ಪ್ರಭು ಯೇಸುಕ್ರಿಸ್ತರ ಕೃಪಾಶಕ್ತಿಯನ್ನು ನೀವು ಬಲ್ಲಿರಿ. ಅವರು ತಮ್ಮ ಬಡತನದಿಂದ ನಿಮ್ಮನ್ನು ಶ್ರೀಮಂತವಾಗಿಸಲೆಂದು, ತಾವು ಶ್ರೀಮಂತರಾಗಿದ್ದರೂ ನಿಮಗೋಸ್ಕರ ಬಡವರಾದರು.


ಯೇಸು ಸ್ವಾಮಿ ತಮ್ಮ ಮಾತನ್ನು ಮುಂದುವರಿಸುತ್ತಾ, “ಈಗ ನನ್ನಾತ್ಮ ತತ್ತರಿಸುತ್ತಿದೆ. ನಾನು ಏನೆಂದು ಹೇಳಲಿ? ‘ಪಿತನೇ, ಈ ಗಳಿಗೆಯಿಂದ ನನ್ನನ್ನು ಕಾಪಾಡು ಎನ್ನಲೇ?’ ಇಲ್ಲ, ಅದಕ್ಕೆ ಬದಲಾಗಿ ಇದನ್ನು ಅನುಭವಿಸಲೆಂದೇ ನಾನು ಈ ಗಳಿಗೆಗೆ ಕಾಲಿಟ್ಟಿದ್ದೇನೆ.


ಕಡುಯಾತನೆಯಲ್ಲಿದ್ದ ಅವರು ಇನ್ನೂ ಶ್ರದ್ಧೆಯಿಂದ ಪ್ರಾರ್ಥಿಸಿದರು. ಅವರ ಬೆವರು ರಕ್ತದ ಹನಿಯಂತೆ ತೊಟ್ಟುತೊಟ್ಟಾಗಿ ನೆಲದ ಮೇಲೆ ಬೀಳುತ್ತಿತ್ತು.


ಅದಕ್ಕೆ ಯೇಸು, “ನರಿಗಳಿಗೆ ಗುಹೆಗಳುಂಟು; ಆಕಾಶದ ಪಕ್ಷಿಗಳಿಗೆ ಗೂಡುಗಳುಂಟು; ಆದರೆ ನರಪುತ್ರನಿಗೆ ತಲೆಯಿಟ್ಟು ಮಲಗಲೂ ಸ್ಥಳ ಇಲ್ಲ,” ಎಂದರು.


ಧಿಕ್ಕರಿಸಲ್ಪಟ್ಟವನು, ಮನುಜರಿಂದ ತಿರಸ್ಕೃತನು, ದುಃಖಕ್ರಾಂತನು, ಕಷ್ಟಸಂಕಟ ಅನುಭವಿಸಿದವನು. ನೋಡಿದವರು ಮುಖ ತಿರುಗಿಸುವಷ್ಟು ನಿಂದಕನು ! ನಾವೋ ಲಕ್ಷ್ಯಕ್ಕೂ ತೆಗೆದುಕೊಳ್ಳಲಿಲ್ಲ ಆತನನು.


ಯಾರೊಬ್ಬನಿಗು ಮರುಕತೋರೆ ಮರೆತುಬಿಟ್ಟನವನು I ಕೊಲ್ಲಲು ಯತ್ನಿಸಿದನು ದೀನರನು, ಮನಗುಂದಿದವರನು II


ನನ್ನ ಮನದೊಳು ಸರ್ವಶಕ್ತನ ಬಾಣಗಳು ನಾಟಿವೆ ನನ್ನ ಅಂತರಂಗದೊಳು ಅವುಗಳ ವಿಷ ಹೀರಲಾಗುತ್ತಿದೆ ದೇವರಿಂದ ಬಂದ ಆತಂಕಗಳು ನನ್ನನು ಸುತ್ತುವರೆದಿವೆ.


ಗೇಹಜಿಯು ಆಕೆಯನ್ನು ದೂಡುವುದಕ್ಕಾಗಿ ಹತ್ತಿರ ಬಂದನು. ದೈವಪುರುಷನು, “ಬಿಡು, ತಡೆಯಬೇಡ; ಆಕೆಗೆ ಮನಸ್ಸಿನಲ್ಲಿ ತೀವ್ರ ದುಃಖವಿರುವ ಹಾಗೆ ತೋರುತ್ತದೆ. ಸರ್ವೇಶ್ವರ ಆಕೆಯ ದುಃಖವನ್ನು ನನಗೆ ತಿಳಿಸಲಿಲ್ಲ; ಮರೆಮಾಡಿದ್ದಾರೆ,” ಎಂದು ಹೇಳಿದನು.


ಒಬ್ಬೊಂಟಿಗನಾದೆ, ಸಿಕ್ಕಿಕೊಂಡೆ ಸಂಕಟಕೆ I ಕಟಾಕ್ಷಿಸೋ ಪ್ರಭು, ಕರುಣೆತೋರೋ ತಬ್ಬಲಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು