Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:23 - ಕನ್ನಡ ಸತ್ಯವೇದವು C.L. Bible (BSI)

23 ನಾ ಗತಿಸಿಹೋಗುತ್ತಿರುವೆ ಬೈಗಿನ ನೆರಳಂತೆ I ಬಿರುಗಾಳಿ ಕೊಂಡೊಯ್ಯುವ ಮಿಡತೆಯಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಸಂಜೆಯ ನೆರಳಿನಂತೆ ಗತಿಸಿಹೋಗುತ್ತಿದ್ದೇನೆ; ಗಾಳಿಯು ಬಡಿದುಕೊಂಡು ಹೋಗುವ ಮಿಡತೆಯಂತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಸಂಜೆಯ ನೆರಳಿನಂತೆ ಗತಿಸಿಹೋಗುತ್ತಿದ್ದೇನೆ; ಗಾಳಿಯು ಬಡಕೊಂಡುಹೋಗುವ ವಿುಡಿತೆಯಂತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಸಂಜೆಯ ನೆರಳಿನಂತೆ ನನ್ನ ಜೀವಮಾನವು ಕೊನೆಗೊಳ್ಳುತ್ತಿದೆ; ಗಾಳಿಯು ಬಡಿದುಕೊಂಡು ಹೋಗುವ ಮಿಡತೆಯಂತಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ನಾನು ಇಳಿಯುವ ನೆರಳಿನ ಹಾಗೆ ಆಗಿದ್ದೇನೆ; ಮಿಡತೆಯ ಹಾಗೆ ಹಾರಾಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:23
10 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಪಶ್ಚಿಮದಿಂದ ಬಿರುಗಾಳಿ ಬೀಸುವಂತೆ ಮಾಡಿದರು. ಅದು ಆ ಮಿಡಿತೆಗಳನ್ನು ಬಡಿದುಕೊಂಡು ಹೋಗಿ ಕೆಂಪು ಸಮುದ್ರದೊಳಗೆ ಹಾಕಿಬಿಟ್ಟಿತು. ಈಜಿಪ್ಟ್ ದೇಶದ ಮೇರೆಗಳೊಳಗೆ ಒಂದು ಮಿಡಿತೆಯನ್ನೂ ನಿಲ್ಲಲು ಬಿಡಲಿಲ್ಲ.


ಅರಳಿ ಬಾಡುವನು ಹೂವಿನಂತೆ ನಿಲ್ಲದೆ ಓಡುವನು ನೆರಳಿನಂತೆ.


ನಾವು ನಿಮ್ಮ ದೃಷ್ಟಿಯಲ್ಲಿ ಪರದೇಶಿಗಳು; ನಮ್ಮ ಪೂರ್ವಜರಂತೆ ಪ್ರವಾಸಿಗಳು. ನಮ್ಮ ಆಯುಷ್ಕಾಲ ನೆರಳಿನಂತೆ; ನಮಗಿಲ್ಲ, ಯಾವ ನಿರೀಕ್ಷೆ.


ನಿಮ್ಮ ಜೀವಮಾನ ಎಷ್ಟುಮಾತ್ರದ್ದು? ಈಗ ಕಾಣಿಸಿಕೊಂಡು ಆಮೇಲೆ ಕಾಣದೆಹೋಗುವ ಹೊಗೆಯಂತೆ ಅದು.


ದೇವರಿಗೆ ಹೆದರದ ದುರ್ಜನನಿಗೆ ಒಳ್ಳೆಯದಾಗದೆಂಬುದು ನಿಶ್ಚಯ. ನೆರಳಿನಂತಿರುವ ಅವನ ಬಾಳಿನ ದಿನಗಳು ಹೆಚ್ಚುವುದಿಲ್ಲ.


ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮಾನವನ ಜೀವಮಾನ ದಿನಗಳಲ್ಲೆಲ್ಲಾ ಅವನಿಗೆ ಯಾವುದು ಹಿತವೆಂದು ಯಾರಿಗೆ ಗೊತ್ತು? ತಾನು ಕಾಲವಾದ ಮೇಲೆ ಇಹಲೋಕದಲ್ಲಿ ಏನಾಗುವುದೆಂದು ಅವನು ಯಾರಿಂದ ತಿಳಿದುಕೊಳ್ಳಲು ಸಾಧ್ಯ?


ಮಾನವನು ಕೇವಲ ಉಸಿರಿಗೆ ಸಮಾನ I ಮರೆಯಾಗುವ ನೆರಳು ಅವನ ಜೀವನ II


ಅಂತೆಯೇ ಮೋಶೆ ತನ್ನ ಕೋಲನ್ನು ಈಜಿಪ್ಟ್ ದೇಶದ ಮೇಲೆ ಚಾಚಿದನು. ಸರ್ವೇಶ್ವರ ಹಗಲಿರುಳು ಪೂರ್ವದಿಕ್ಕಿನಿಂದ ಗಾಳಿ ಬೀಸುವಂತೆ ಮಾಡಿದರು. ಆ ಗಾಳಿಯಿಂದಾಗಿ ಮುಂಜಾನೆಯಲ್ಲೇ ಮಿಡತೆಗಳು ಬಂದಿದ್ದವು.


ನೀನಾದರೋ ಪ್ರಭು, ಸದಾ ಸಿಂಹಾಸನಾರೂಢ I ಮಾಳ್ಪರು ತಲತಲಾಂತರಕು ನಿನ್ನ ನಾಮಸ್ಮರಣ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು