Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:25 - ಕನ್ನಡ ಸತ್ಯವೇದವು C.L. Bible (BSI)

25 ಗುರಿಯಾಗಿರುವೆನು ನಾ ಜನರ ಅಪಹಾಸ್ಯಕ್ಕೆ I ನೋಡುವವರು ತಲೆಯಾಡಿಸಿ ಮಾಡುವ ನಿಂದೆಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಾನು ಜನರ ಪರಿಹಾಸ್ಯಕ್ಕೆ ಗುರಿಯಾಗಿದ್ದೇನೆ; ನನ್ನನ್ನು ನೋಡುವವರು ತಲೆಯಾಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಾನು ಜನಹಾಸ್ಯಕ್ಕೆ ಗುರಿಯಾಗಿದ್ದೇನೆ; ನನ್ನನ್ನು ನೋಡುವವರು ತಲೆಯಾಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಕೆಡುಕರು ನನ್ನನ್ನು ಗೇಲಿ ಮಾಡುವರು. ಅವರು ನನ್ನನ್ನು ನೋಡಿ ತಲೆಯಾಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಾನು ನನ್ನ ದೂರುಗಾರರಿಗೆ ನಿಂದೆಯಾಗಿದ್ದೇನೆ; ಅವರು ನನ್ನನ್ನು ಕಂಡು ತಮ್ಮ ತಲೆಗಳನ್ನು ಅಲ್ಲಾಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:25
13 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸು ತಮ್ಮ ಸ್ವಂತ ಹಿತವನ್ನು ಎಂದಿಗೂ ಬಯಸಲಿಲ್ಲ. “ದೇವರೇ, ನಿಮ್ಮನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೆ ಎರಗಿವೆ,” ಎಂದು ಲಿಖಿತವಾಗಿರುವ ವಾಕ್ಯ ಅವರಿಗೆ ಅನ್ವಯಿಸುತ್ತದೆ.


ಅಂತೆಯೇ ನಾವು ಅವರ ನಿಮಿತ್ತ ನಮಗೆ ಬರುವ ನಿಂದೆ ಅವಮಾನಗಳನ್ನು ಹೊತ್ತು ನಮ್ಮ ಪಾಳೆಯದಿಂದಾಚೆ ಅವರ ಬಳಿಗೆ ಹೋಗೋಣ.


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ಪಕ್ಕದಲ್ಲಿ ಹಾದುಹೋಗುತ್ತಿದ್ದ ಜನರು ತಲೆಯಾಡಿಸುತ್ತಾ, “ಆಹಾ, ಮಹಾದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಅದನ್ನು ಮತ್ತೆ ಕಟ್ಟಬಲ್ಲವನೇ,


“ನಿನ್ನನ್ನು ಪರಿಹಾಸ್ಯಮಾಡಿ ತಿರಸ್ಕರಿಸುತಿಹಳು ಕನ್ಯೆಯಾದ ಸಿಯೋನಿನ ಕುವರಿಯು, ನಿನ್ನ ಹಿಂದೆ ತಲೆಯಾಡಿಸಿ ಮೂದಲಿಸುತಿಹಳು ಜೆರುಸಲೇಮಿನ ಆ ಕುವರಿಯು.


ನನ್ನ ಸ್ಥಿತಿಯಲ್ಲಿ ನೀವಿದ್ದಿದ್ದರೆ ನಾನೂ ಮಾತಾಡಬಹುದಿತ್ತು ನಿಮ್ಮಂತೆ. ನಿಮಗೆ ವಿರುದ್ಧ ನಾನೂ ಮಾತೂ ಬೆಳೆಸಬಹುದಿತ್ತು ನಿಮ್ಮ ವಿಷಯದಲ್ಲಿ ನಾನೂ ತಲೆಯಾಡಿಸಬಹುದಿತ್ತು.


“ಇತ್ತನಿವನು ಭರವಸೆ, ಪ್ರಭುವೆ ತನ್ನುದ್ಧಾರಕನೆಂದು I ಆತನಿಗಿವನು ಮೆಚ್ಚುಗೆಯಾದರೆ ರಕ್ಷಿಸಲಿ” - ಇಂತೆಂದು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು