Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:3 - ಕನ್ನಡ ಸತ್ಯವೇದವು C.L. Bible (BSI)

3 ಹಾಕಿಹರು ದ್ವೇಷತುಂಬಿದ ಮಾತುಗಳ ಮುತ್ತಿಗೆ I ನನ್ನ ಎದುರಿಸುತಿಹರು ನಿಷ್ಕಾರಣವಾಗಿಯೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರು ಹಗೆಯ ನುಡಿಗಳಿಂದ ನನ್ನನ್ನು ಮುತ್ತಿಕೊಂಡು, ಕಾರಣವಿಲ್ಲದೆ ನನ್ನ ಸಂಗಡ ಯುದ್ಧ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರು ಹಗೆನುಡಿಗಳಿಂದ ನನ್ನನ್ನು ಮುತ್ತಿಕೊಂಡು ನಿಷ್ಕಾರಣವಾಗಿ ನನ್ನ ಸಂಗಡ ಯುದ್ಧಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವರು ನನ್ನನ್ನು ದ್ವೇಷಿಸುತ್ತಾರೆ; ನಿಷ್ಕಾರಣವಾಗಿ ನನಗೆ ಎದುರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ದ್ವೇಷ ಮಾತುಗಳಿಂದ ನನ್ನನ್ನು ಸುತ್ತಿಕೊಂಡಿದ್ದಾರೆ, ನನಗೆ ವಿರೋಧವಾಗಿ ಕಾರಣವಿಲ್ಲದೆ ಯುದ್ಧ ಮಾಡುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:3
14 ತಿಳಿವುಗಳ ಹೋಲಿಕೆ  

ತಲೆ ಕೂದಲಿಗಿಂತ ಮಿಗಿಲಿಹರು ನಿಷ್ಕಾರಣ ದ್ವೇಷಿಗಳು I ಬಲಿಷ್ಟರಿಹರು ನನ್ನ ಕೊಲೆಗಡುಕರು, ನಿರ್ನಿಮಿತ್ತ ಶತ್ರುಗಳು I ಕಳ್ಳನಾನಲ್ಲನಾದರೂ ದಂಡಕೋರುತಿಹರು ವೈರಿಗಳು II


ನಿಷ್ಕಾರಣ ಕೊಲೆಮಾಡಲೆನ್ನ ಬಲೆಯೊಡ್ಡಿಹರು I ಆ ಕಾರಣ ಪ್ರಾಣ ತೆಗೆಯಲು ಗುಂಡಿ ತೋಡಿಹರು II


ದಿನವೆಲ್ಲಾ ನನ್ನನು ಅವು ಸುತ್ತುಗಟ್ಟಿವೆ I ಪ್ರವಾಹದಂತೆ ಎನ್ನ ಮೇಲೆ ಹರಿಯುತ್ತಿವೆ II


ಸಮಾಧಾನಕರವಲ್ಲ ಅವರಾಡುವ ನುಡಿಗಳು I ಮುಗ್ಧನಾಡಿಗರನು ಮೋಸಗೊಳಿಸುವಾ ಮಾತುಗಳು II


“ಎಫ್ರಯಿಮಿನ ಸುಳ್ಳುತನ, ಇಸ್ರಯೇಲಿನ ಕಪಟತನ ನನ್ನನ್ನು ಮುತ್ತಿಕೊಂಡಿವೆ. ಸತ್ಯಸ್ವರೂಪಿಯೂ ಪರಮಪಾವನರೂ ಆದ ದೇವರಿಂದ ದೂರವಾಗಿ ಜುದೇಯವು ಅಲೆಯುತ್ತಿದೆ.


ಸುತ್ತಿಕೊಂಡಿವೆಯೆನ್ನನು ಬಲವಂತ ಹೋರಿಗಳು I ಮುತ್ತಿಕೊಂಡಿವೆ ಬಾಷಾನಿನ ಹಲವು ಗೂಳಿಗಳು II


ಹಿಂದೆಯೆ ಬಂದು ಸುತ್ತುವರೆದುಕೊಳ್ಳುವರು I ನೆಲಕ್ಕಪ್ಪಳಿಸಲು ಹೊಂಚು ಕಾಯುತ್ತಿರುವರು II


ಇದಲ್ಲದೆ ಅವನು ಶಾಂತಿಸಮಾಧಾನದ ಬಲಿದಾನ ಮಾಡುತ್ತಿರುವಾಗ ದಾವೀದನ ಮಂತ್ರಿಯಾಗಿದ್ದ ಗೀಲೋವಿನ ಅಹೀತೋಫೆಲನೆಂಬವನನ್ನು ಅವನ ಊರಾದ ಗೀಲೋವಿನಿಂದ ಬರಮಾಡಿಸಿದ್ದನು. ಜನರು ಅಬ್ಷಾಲೋಮನನ್ನು ಕೂಡಿಕೊಳ್ಳುತ್ತಾ ಬಂದುದರಿಂದ ಒಳಸಂಚು ಪ್ರಬಲವಾಗುತ್ತಾ ಹೋಯಿತು.


ನನ್ನ ಒಡೆಯ, ತಮ್ಮ ಸೇವಕನನ್ನು ಈ ಪ್ರಕಾರ ಹಿಂಸಿಸುವುದೇಕೆ? ನಾನೇನು ಮಾಡಿದೆ? ಯಾವ ಪಾಪಕ್ಕೆ ಕೈಹಾಕಿದೆ?


ಕಳ್ಳ ವೈರಿಗಳೆನ್ನ ನೋಡಿ ಹಿಗ್ಗಲು ಬಿಡಬೇಡ I ಈ ಕಾರಣ ಶತ್ರುಗಳು ಕಣ್ಣು ಮಿಟುಕಿಸುವುದು ಬೇಡ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು