Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 109:31 - ಕನ್ನಡ ಸತ್ಯವೇದವು C.L. Bible (BSI)

31 ನಿಂತಿರುವನು ಪ್ರಭು ಬಡವನ ಬಲಗಡೆ I ವಿಧಿಸುವವರಿಂದ ತಪ್ಪಿಸುವನು ಮರಣದಂಡನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆತನು ದೀನನ ಬಲಗಡೆಯಲ್ಲಿ ನಿಂತುಕೊಂಡು, ಪ್ರಾಣಶಿಕ್ಷೆ ವಿಧಿಸುವವರ ಕೈಯಿಂದ ತಪ್ಪಿಸಿ ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆತನು ದೀನನ ಬಲಗಡೆಯಲ್ಲಿ ನಿಂತುಕೊಂಡು ಪ್ರಾಣಶಿಕ್ಷೆ ವಿಧಿಸುವವರ ಕೈಯಿಂದ ತಪ್ಪಿಸಿ ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಯಾಕೆಂದರೆ, ಆತನು ಅಸಹಾಯಕರ ಬಲಗಡೆಯಲ್ಲಿ ನಿಂತುಕೊಳ್ಳುವನು; ಮರಣದಂಡನೆ ವಿಧಿಸಬೇಕೆಂದಿರುವ ಜನರಿಂದ ಅವರನ್ನು ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ದೇವರು ಬಡವನ ಬಲಗಡೆಯಲ್ಲಿ ನಿಂತು, ಅವನ ಪ್ರಾಣವನ್ನು ಖಂಡಿಸುವವರಿಂದ ಅವನನ್ನು ರಕ್ಷಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 109:31
16 ತಿಳಿವುಗಳ ಹೋಲಿಕೆ  

ನಿನ್ನನು ಕಾಯುತಿಹನು ಪ್ರಭುವೇ I ಬಲಗಡೆ ನೆರಳಂತಿಹನು ವಿಭುವೇ II


ಇರಿಸಿಕೊಳ್ಳುವೆ ಪ್ರಭುವನು ಸತತ ನನ್ನೆದುರಿಗೆ I ಆತನಿರಲು ಬಲಕ್ಕೆ ನನಗೆಲ್ಲಿಯದು ಹೆದರಿಕೆ II


ಪ್ರಭು ನೀ ದೀನದಲಿತರ ವಕೀಲನೆಂದು ನಾ ಬಲ್ಲೆ I ಬಡವರಿಗೆ ನ್ಯಾಯ ದೊರಕಿಸುವವ ನೀ ಅಲ್ಲವೆ? II


ಬೆಂಬಲವಾಗಿ ನಿಂತಿಹನು ಪ್ರಭು ನಿನ್ನ ಹತ್ತಿರದಲೆ I ಸದೆಬಡಿವನು ಅರಸರನು ತನ್ನ ಪ್ರಕೋಪ ದಿನದಲೆ II


ಆದರೂ ನಾನಿರುವೆ ನಿನ್ನ ಸನ್ನಿಧಿಯಲಿ I ನೀ ಹಿಡಿದಿರುವೆ ನನ್ನ ಬಲಗೈಯನು ಭದ್ರವಾಗಿ II


ಸಫಲವಾಗದು ನಿನ್ನ ವಿರುದ್ಧ ಪ್ರಯೋಗಿಸಿದ ಆಯುಧ ನ್ಯಾಯಸ್ಥಾನದಲ್ಲಿ ನಿನ್ನ ಪ್ರತಿವಾದಿ ಪಡೆವನು ಅಪಜಯ ನನ್ನ ದಾಸನನು ರಕ್ಷಿಸಿ ಆತನಿಗೆ ನೀಡುವೆ ವಿಜಯ” ಇದು ಸರ್ವೇಶ್ವರನ ವಾಕ್ಯ.


ನಾಡಿನಲ್ಲಿ ಬಡವರ ಶೋಷಣೆಯನ್ನೂ ನ್ಯಾಯನೀತಿಯ ಉಲ್ಲಂಘನೆಯನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬ ಅಧಿಕಾರಿ ಉಸ್ತುವಾರಿ ನಡೆಸುತ್ತಾನೆ. ಆ ಇಬ್ಬರು ಅಧಿಕಾರಿಗಳ ಮೇಲೆ ಇನ್ನೂ ಉನ್ನತ ಅಧಿಕಾರಿಗಳು ಇದ್ದಾರೆ.


ದೀನದಲಿತರನಾತ ಉದ್ಧರಿಸಲಿ I ಬಡಬಗ್ಗರಿಗೆ ನ್ಯಾಯ ದೊರಕಿಸಲಿ I ಪ್ರಜಾಹಿಂಸಕರನು ಸದೆಬಡಿಯಲಿ II


ದಿವ್ಯಧಾಮದಲ್ಲಿಹ ಆ ದೇವ I ತಬ್ಬಲಿಗೆ ತಂದೆ, ವಿಧವೆಗಾಶ್ರಯ II


ಯಾರೊಬ್ಬನಿಗು ಮರುಕತೋರೆ ಮರೆತುಬಿಟ್ಟನವನು I ಕೊಲ್ಲಲು ಯತ್ನಿಸಿದನು ದೀನರನು, ಮನಗುಂದಿದವರನು II


ಹೌದು ದೇವಾ, ನೀ ವಿಚಾರಿಪವನು; ದುಃಖದುಗುಡ ಲೆಕ್ಕಿಸುವವನು I ತಬ್ಬಲಿಗಳಿಗೆ ತಂದೆ ನೀನು, ನಿರ್ಗತಿಕ ನಿನಗೆ ಶರಣಾಗತನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು