Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 11:1 - ಕನ್ನಡ ಸತ್ಯವೇದವು C.L. Bible (BSI)

1 ನಾನು ಆಶ್ರಯಿಸಿಕೊಂಡಿರಲು ಪ್ರಭುವನು I ನೀವು ಹೇಳುವುದೆಂತು ನನಗೀ ಮಾತನು: II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾನು ಯೆಹೋವನನ್ನು ಆಶ್ರಯಿಸಿಕೊಂಡಿದ್ದೇನೆ. ನೀವು, “ಪಕ್ಷಿಗಳಂತೆ ನಿಮ್ಮ ಬೆಟ್ಟಗಳಿಗೆ ಓಡಿಹೋಗಿರಿ” ಎಂದು ಹೇಳುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನನ್ನು ಆಶ್ರಯಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾನು ಯೆಹೋವನನ್ನೇ ಆಶ್ರಯಿಸಿಕೊಂಡಿದ್ದೇನೆ. ಹೀಗಿರಲು, “ನಿನ್ನ ಬೆಟ್ಟಕ್ಕೆ ಪಕ್ಷಿಯಂತೆ ಹಾರಿಹೋಗು” ಎಂದು ನೀವು ಹೇಳುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರಲ್ಲಿ ನಾನು ಆಶ್ರಯಿಸಿದ್ದೇನೆ. ಹಾಗಾದರೆ, “ಒಂದು ಪಕ್ಷಿಯಂತೆ ನಿನ್ನ ಪರ್ವತಕ್ಕೆ ಹಾರಿ ಹೋಗು,” ಎಂದು ನೀವು ನನಗೆ ಹೇಗೆ ಹೇಳುವಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 11:1
21 ತಿಳಿವುಗಳ ಹೋಲಿಕೆ  

ದೇವರಲ್ಲೇ ನಿರ್ಭೀತ ನಂಬಿಕೆ ನನಗೆ I ನರಮಾನವರು ಏನು ಮಾಡಿಯಾರೆನಗೆ II


ಶತ್ರುಗಾಗದಿರಲಿ ಸಡಗರ I ನನಗೊದಗದಿರಲಿ ಮುಜುಗರ II


ಅನಂತರ ದಾವೀದನು ಮರುಭೂಮಿಯಲ್ಲಿರುವ ಆಯಾ ಆಶ್ರಯಗಿರಿಗಳಲ್ಲಿ ಇರುತ್ತಿದ್ದನು. ಕಡೆಗೆ ಜೀಫ್ ಮರುಭೂಮಿಯ ಪರ್ವತಪ್ರಾಂತ್ಯಕ್ಕೆ ಬಂದು ಅಲ್ಲಿ ವಾಸಮಾಡಿದನು. ದಿನಂಪ್ರತಿ ಹುಡುಕುತ್ತಿದ್ದರೂ ದೇವರು ಆತನನ್ನು ಸೌಲನ ಕೈಗೆ ಒಪ್ಪಿಸಲಿಲ್ಲ.


ಅದೇ ಸಮಯಕ್ಕೆ ಸರಿಯಾಗಿ ಕೆಲವು ಮಂದಿ ಫರಿಸಾಯರು ಯೇಸುಸ್ವಾಮಿಯ ಬಳಿಗೆ ಬಂದು, “ಇಲ್ಲಿಂದ ಹೊರಟು ಹೋಗಿಬಿಡಿ, ಹೆರೋದನು ನಿಮ್ಮನ್ನು ಕೊಲ್ಲಬೇಕೆಂದಿದ್ದಾನೆ,” ಎಂದರು.


ಬೇಡನಿಂದ ಓಡುವ ಜಿಂಕೆಯಂತೆ, ಬೇಟೆಗಾರನ ಕೈಯಿಂದ ಹಾರಿಹೋಗುವ ಹಕ್ಕಿಯಂತೆ, ಆ ಬಲೆಯಿಂದ ತಪ್ಪಿಸಿಕೊ.


ನೀಡು ದೇವಾ ರಕ್ಷಣೆಯನು I ನಾ ನಿನಗೆ ಶರಣಾಗತನು II


ಸುದಾನ್ ಹಾಗೂ ಲಿಬಿಯರ ಸೈನ್ಯ ಅಪರಿಮಿತ ರಥಾಶ್ವಬಲಗಳುಳ್ಳ ಮಹಾ ಸೈನ್ಯವಲ್ಲವೇ? ನೀವು ಸರ್ವೇಶ್ವರನನ್ನು ಆಶ್ರಯಿಸಿಕೊಂಡದ್ದರಿಂದ ಅವರು ಅದನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟರು.


ನಾನಾದರೋ ಪ್ರಭೂ, ನಿನ್ನಲೆ ಭರವಸೆಯಿಟ್ಟಿರುವೆ I ನೀನೆ ನನ್ನ ದೇವರೆಂದು ಪ್ರಭು ಸಾರುವೆ II


ನಿನ್ನನು ಅರಸುವವರನು ಹೇ ಪ್ರಭು, ನೀ ಕೈ ಬಿಡುವವನಲ್ಲ I ನಿನ್ನಲ್ಲಿ ಭರವಸೆ ಇಡುವರು ನಿನ್ನ ನಾಮವನರಿತವರೆಲ್ಲ II


ನಿನ್ನಾಶ್ರಯವನರಸಿ ಹೇ ಸ್ವಾಮಿ ದೇವಾ, ನಾ ಬಂದಿಹೆನು I ಬೆನ್ನಟ್ಟಿ ಬರುವವರ ಕೈಯಿಂದ ತಪ್ಪಿಸಿ, ಕಾಪಾಡೆನ್ನನು II


ಆಸನು ತನ್ನ ದೇವರಾದ ಸರ್ವೇಶ್ವರನಿಗೆ, “ಸರ್ವೇಶ್ವರಾ, ಬಲಿಷ್ಠನು ಬಲಹೀನನ ಮೇಲೆ ಬೀಳುವಾಗ, ನಿಮ್ಮ ಹೊರತು ರಕ್ಷಕನಿಲ್ಲ. ನಿಮ್ಮಲ್ಲಿ ಭರವಸೆ ಇಟ್ಟು ನಿಮ್ಮ ಹೆಸರಿನಲ್ಲಿ ಈ ಮಹಾ ಸೇನೆಗೆ ವಿರುದ್ಧ ಯುದ್ಧಕ್ಕೆ ಬಂದಿದ್ದೇವೆ. ಸರ್ವೇಶ್ವರಾ, ನಮ್ಮ ದೇವರು ನೀವು; ನರರು ನಿಮ್ಮನ್ನು ಎದುರಿಸಿ ಗೆಲ್ಲಬಾರದು,” ಎಂದು ಮೊರೆ ಇಟ್ಟನು.


ಬೇಗ ಓಡು, ನಿಲ್ಲಬೇಡ,” ಎಂದು ಕೂಗಿದನು. ಹುಡುಗನು ಬಾಣಗಳನ್ನು ಕೂಡಿಸಿಕೊಂಡು ಯಜಮಾನನ ಬಳಿಗೆ ಬಂದನು.


ದಾವೀದನು ತನ್ನ ಮನಸ್ಸಿನಲ್ಲೇ, “ನಾನು ಇಲ್ಲಿದ್ದರೆ ಹೇಗೂ ಒಂದು ದಿನ ಸೌಲನ ಕೈಯಿಂದ ಮಡಿಯಲೇ ಬೇಕು. ಆದುದರಿಂದ ಫಿಲಿಷ್ಟಿಯರ ದೇಶಕ್ಕೆ ಹೋಗಿ ತಪ್ಪಿಸಿಕೊಳ್ಳುವುದೇ ಉತ್ತಮ. ಆಮೇಲೆ ಸೌಲನು ಇಸ್ರಯೇಲ್ ಪ್ರಾಂತ್ಯಗಳಲ್ಲಿ ನನ್ನನ್ನು ಹುಡುಕುವುದನ್ನು ಬಿಟ್ಟುಬಿಡುವನು. ನಾನು ಅವನ ಕೈಯಿಂದ ತಪ್ಪಿಸಿಕೊಂಡು ಸುರಕ್ಷಿತನಾಗಿರುವೆನು,” ಎಂದುಕೊಂಡನು.


ಅನಂತರ ದಾವೀದನು ತನ್ನ ತಂದೆತಾಯಿಗಳನ್ನು ಮೋವಾಬ್ ದೇಶದ ಮಿಚ್ಪೆ ಎಂಬಲ್ಲಿಗೆ ಕರೆದುಕೊಂಡು ಹೋದನು. ಅಲ್ಲಿನ ರಾಜನನ್ನು, “ದೇವರು ನನಗೆ ಮಾರ್ಗತೋರಿಸುವವರೆಗೂ ನನ್ನ ತಂದೆತಾಯಿಗಳು ನಿಮ್ಮ ಬಳಿಯಲ್ಲಿರುವುದಕ್ಕೆ ಅಪ್ಪಣೆಯಾಗಬೇಕು,” ಎಂದು ಬೇಡಿಕೊಂಡನು.


ಸೌಲನು ಕೂಡಲೆ ದೂತರನ್ನು ಕರೆಯಿಸಿ, “ದಾವೀದನ ಮನೆಯ ಸುತ್ತಲೂ ಹೊಂಚುಹಾಕಿ ಅವನನ್ನು ಬೆಳಗಾಗುವಷ್ಟರಲ್ಲಿ ಕೊಂದುಹಾಕಬೇಕು,” ಎಂದು ಆಜ್ಞಾಪಿಸಿ ಕಳುಹಿಸಿದನು. ಮೀಕಲಳು ತನ್ನ ಗಂಡನಾದ ದಾವೀದನಿಗೆ, “ನೀವು ಈ ರಾತ್ರಿಯೇ ತಪ್ಪಿಸಿಕೊಳ್ಳದೆ ಇದ್ದರೆ ನಾಳೆ ಬೆಳಿಗ್ಗೆ ಹತರಾಗುವಿರಿ,” ಎಂದು ಹೇಳಿ


ಅದಕ್ಕೆ ನಾನು, “ನನ್ನಂಥ ಗಂಡು ಓಡಿಹೋಗಿ ಅವಿತುಕೊಳ್ಳುವುದು ಸರಿಯೇ? ಇದಲ್ಲದೆ ಪ್ರಾಣರಕ್ಷಣೆಗಾಗಿ ಗರ್ಭಗುಡಿಯನ್ನು ನಾನು ಪ್ರವೇಶಿಸಬಹುದೇ? ಇಲ್ಲ, ನಾನು ಬರುವುದಿಲ್ಲ,” ಎಂದು ಉತ್ತರಕೊಟ್ಟೆ.


ಇಲ್ಲದಿರೆ ಶತ್ರು ತಿಳಿದಾನು ನನಗೆ ರಕ್ಷಕನಿಲ್ಲವೆಂದು I ಝಲ್ಲನೆ ಸೀಳಿಬಿಟ್ಟಾನು ಸಿಂಹದಂತೆ ಮೇಲೆಬಿದ್ದು II


‘ನಾವು ಶೂರರು, ಯುದ್ಧ ಪ್ರವೀಣರು, ಪರಾಕ್ರಮಿಗಳು’ ಎಂದು ನೀವು ಹೇಳುವುದೆಂತು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು