ಕೀರ್ತನೆಗಳು 11:2 - ಕನ್ನಡ ಸತ್ಯವೇದವು C.L. Bible (BSI)2-3 “ನೇರ ಮನಸ್ಕರನು ಕೊಲ್ಲಲು ಇರುಳೊಳು I ಬಿಲ್ಲು ಬಗ್ಗಿಸಿಹರಿದೋ ಆ ದುರುಳರು I ಎದೆಗೆ ಬಾಣವನು ಹೂಡಿ ನಿಂತಿರುವರು” II “ಓಡಿರಿ, ಪಕ್ಷಿಪಾರಿವಾಳಗಳಂತೆ ಗಿರಿಶಿಖರಗಳಿಗೆ I ಅಸ್ತಿವಾರವೆ ಕಿತ್ತಿರಲು, ಗತಿಯೆನಿತು ಸತ್ಯವಂತರಿಗೆ?” II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ದುಷ್ಟರು ಕತ್ತಲಲ್ಲಿ ಯಥಾರ್ಥ ಹೃದಯವುಳ್ಳವರನ್ನು ಕೊಲ್ಲಬೇಕೆಂದು ಬಿಲ್ಲುಬೊಗ್ಗಿಸಿ, ಹೆದೆಗೆ ಬಾಣವನ್ನು ಹೂಡಿದ್ದಾರೆ ನೋಡಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀವು - ದುಷ್ಟರು ಕತ್ತಲಲ್ಲಿ ಯಥಾರ್ಥ ಹೃದಯವುಳ್ಳವರನ್ನು ಕೊಲ್ಲಬೇಕೆಂದು ಬಿಲ್ಲುಬೊಗ್ಗಿಸಿ ಹೆದೆಗೆ ಬಾಣವನ್ನು ಹೂಡಿದ್ದಾರೆ ನೋಡಿರಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದುಷ್ಟರು ಬೇಟೆಗಾರರಂತಿದ್ದಾರೆ; ಅವರು ಕತ್ತಲೆಯಲ್ಲಿ ಅವಿತುಕೊಂಡಿರುವರು; ಬಿಲ್ಲುಗಳಿಗೆ ಬಾಣಗಳನ್ನು ಹೂಡಿ ನೀತಿವಂತರ ಹೃದಯಕ್ಕೆ ನೇರವಾಗಿ ಹೊಡೆಯುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 “ಇಗೋ, ದುಷ್ಟರು ತಮ್ಮ ಬಿಲ್ಲು ಬಗ್ಗಿಸಿ; ಬಾಣವನ್ನು ಬಿಲ್ಲಿಗೆ ಹೂಡಿ, ಯಥಾರ್ಥ ಹೃದಯವುಳ್ಳವರ ಮೇಲೆ ಗುಪ್ತವಾಗಿ ಎಸೆಯುವುದಕ್ಕೆ ಸಿದ್ಧಮಾಡಿದ್ದಾರೆ. ಅಧ್ಯಾಯವನ್ನು ನೋಡಿ |