Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 110:3 - ಕನ್ನಡ ಸತ್ಯವೇದವು C.L. Bible (BSI)

3 ಸೇನೆಯನು ನೀ ಅಣಿಗೊಳಿಸುವ ದಿನದೊಳು I ಸೇರಿಕೊಳ್ವರು ತಾವಾಗಿಯೇ ಪ್ರಜೆಗಳು I ಶುಭ್ರ ವಸ್ತ್ರಧರಿಸಿ ನಿನ್ನ ಯುವಕ ಯೋಧರು I ಉದಯಕಾಲದಿಬ್ಬನಿಯಂತೆ ಇಳಿದು ಬರುವರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವಕ ಸೈನಿಕರು ಉದಯಕಾಲದ ಇಬ್ಬನಿಯಂತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ ಜನರು ತಾವಾಗಿಯೇ ನಿನ್ನ ಸೈನ್ಯವನ್ನು ಸೇರಿಕೊಳ್ಳುವರು. ಅವರು ಸಮವಸ್ತ್ರಗಳನ್ನು ಧರಿಸಿಕೊಂಡು ಪ್ರತಿ ಮುಂಜಾನೆ ಸೇರಿಬರುವರು. ಆ ಯುವಕರು ನಿನಗೆ ಉದಯಕಾಲದ ಇಬ್ಬನಿಯಂತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀವು ನಿಮ್ಮ ಸೈನ್ಯವನ್ನು ಒಟ್ಟುಗೂಡಿಸುವ ದಿನದಲ್ಲಿ ನಿಮ್ಮ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಮುಂಜಾನೆಯ ಉದರದಿಂದ ಬರುವ ಇಬ್ಬನಿಯಂತೆ ನಿಮ್ಮ ಯೋಧರು ನಿಮ್ಮ ಕಡೆ ಇಳಿದು ಬರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 110:3
28 ತಿಳಿವುಗಳ ಹೋಲಿಕೆ  

ಪಣತೊಟ್ಟಿದ್ದರು ಇಸ್ರಯೇಲಿನ ವೀರರು ಸೈನ್ಯಸೇರಿದ್ದಾರೆ ಸ್ವೇಚ್ಛೆಯಿಂದಾ ಜನರು ಮಾಡಿರಿ ನೀವು ಸರ್ವೇಶ್ವರನಾ ಗುಣಗಾನವನು;


ನೀವು ಇಂಥ ದೇವರ ಚಿತ್ತವನ್ನು ನೆರವೇರಿಸಲು ನಿಮಗೆ ಬೇಕಾದ ಎಲ್ಲಾ ವರದಾನಗಳನ್ನು ಅವರು ನಿಮಗೆ ಅನುಗ್ರಹಿಸಲಿ. ಸ್ವಾಮಿ ಯೇಸುಕ್ರಿಸ್ತರ ಮುಖಾಂತರ ನಾವು ಅವರಿಗೆ ಪ್ರಿಯರಾದವರಾಗಿ ಬಾಳುವಂತಾಗಲಿ. ಯೇಸುಕ್ರಿಸ್ತರಿಗೆ ಯುಗಯುಗಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ದೇವರು ನಮ್ಮನ್ನು ಕರೆದಿರುವುದು ಅಶುದ್ಧ ನಡತೆಗಲ್ಲ, ಪರಿಶುದ್ಧ ನಡತೆಗೆ.


ಜಗತ್ತು ಸೃಷ್ಟಿಯಾಗುವ ಮೊದಲೇ ದೇವರು ಕ್ರಿಸ್ತಯೇಸುವಿನಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು. ಹೀಗೆ ಅವರ ಸನ್ನಿಧಿಯಲ್ಲಿ ನಾವು ನಿಷ್ಕಳಂಕರೂ ನಿರ್ದೋಷಿಗಳೂ ಆಗಿರಬೇಕೆಂದು ಇಚ್ಛಿಸಿದರು.


ಇದಾದ ಬಳಿಕ ನಾನು ಇನ್ನೊಂದು ದಿವ್ಯದರ್ಶನವನ್ನು ಕಂಡೆ; ಯಾರಿಂದಲೂ ಎಣಿಸಲಾಗದಷ್ಟು ಒಂದು ದೊಡ್ಡ ಜನಸಮೂಹವು ನೆರೆದಿತ್ತು. ಅವರು ಎಲ್ಲಾ ದೇಶ, ಭಾಷೆ, ಕುಲಗೋತ್ರಗಳಿಂದ ಬಂದವರಾಗಿದ್ದರು. ಶ್ವೇತಾಂಬರರಾಗಿ ಸಿಂಹಾಸನದ ಮತ್ತು ಯಜ್ಞದ ಕುರಿಮರಿಯಾದಾತನ ಸಾನ್ನಿಧ್ಯದಲ್ಲಿ ನಿಂತಿದ್ದರು. ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು.


ಬಲಹೀನಾವಸ್ಥೆಯಲ್ಲಿ ಅವರನ್ನು ಶಿಲುಬೆಗೇರಿಸಲಾಯಿತು ಎಂಬುದೇನೋ ನಿಜ. ಆದರೆ, ದೇವರ ಶಕ್ತಿಯಿಂದ ಅವರು ಜೀವಂತರಾಗಿದ್ದಾರೆ. ಕ್ರಿಸ್ತಯೇಸುವಿನಲ್ಲಿ ನಾವೂ ಬಲಹೀನರೇ. ಆದರೆ ನಿಮ್ಮ ವಿಷಯದಲ್ಲಿ ವರ್ತಿಸುವಾಗ ದೇವರ ಶಕ್ತಿಯಿಂದ ಯೇಸುಸ್ವಾಮಿಯೊಂದಿಗೆ ಜೀವಂತರಾಗಿದ್ದೇವೆ.


ನಿಮ್ಮ ಮೇಲೆ ನನಗಿರುವ ಅದೇ ಅಕ್ಕರೆಯನ್ನು ತೀತನಲ್ಲೂ ಮೂಡಿಸಿದ ದೇವರಿಗೆ ಕೃತಜ್ಞತೆ ಸಲ್ಲಬೇಕು.


ಒಬ್ಬನು ಕೊಡುವುದಕ್ಕೆ ಮನಸ್ಸುಳ್ಳವನಾಗಿದ್ದರೆ, ಅವನು ತನ್ನಲ್ಲಿ ಇರುವುದಕ್ಕೆ ತಕ್ಕಂತೆ ಕೊಟ್ಟರೆ ಸಾಕು. ನಿಮ್ಮಲ್ಲಿ ಇಲ್ಲದ್ದನ್ನು ದೇವರು ಬಯಸುವುದಿಲ್ಲ.


ಇದನ್ನು ಕೇಳಿದ ಅವರು ದೇವರನ್ನು ಕೊಂಡಾಡಿದರು. ಅನಂತರ ಅವರು ಪೌಲನಿಗೆ ಹೀಗೆಂದರು: "ಸಹೋದರಾ, ನಿನಗೆ ತಿಳಿದಿರುವಂತೆ ಯೆಹೂದ್ಯರಲ್ಲಿ ಭಕ್ತವಿಶ್ವಾಸಿಗಳಾಗಿರುವವರು ಸಾವಿರಾರು ಮಂದಿ ಇದ್ದಾರೆ; ಅವರೆಲ್ಲರೂ ಯೆಹೂದ್ಯ ಧರ್ಮಶಾಸ್ತ್ರದಲ್ಲಿ ಬಹಳ ಶ್ರದ್ಧೆ ಉಳ್ಳವರು.


ಪ್ರಭುವಿಗೆ ಮಣಿಯಿರಿ ಪವಿತ್ರ ವಸ್ತ್ರಧಾರಿಗಳಂತೆ I ಅಂಜಿಕೆಯಿಂದ ನಡುಗಲಿ ಜಗವಿಡೀ ಆತನ ಮುಂದೆ I


ಏಕೆಂದರೆ ದೈವಚಿತ್ತವನ್ನು ನೀವು ನೆರವೇರಿಸುವಂತೆ ಅವರೇ ನಿಮ್ಮಲ್ಲಿ ಸತ್ಪ್ರೇರಣೆಯನ್ನೂ ಸತ್ಫಲವನ್ನೂ ನೀಡುತ್ತಾರೆ.


ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನ ಪಡೆದರು. ಅಂದೇ ಸುಮಾರು ಮೂರು ಸಾವಿರ ಜನರು ಸಭೆಯನ್ನು ಸೇರಿಕೊಂಡರು.


ಯೇಸು, ದೇವರ ಬಲಪಾರ್ಶ್ವಕ್ಕೆ ಆರೋಹಿತರಾದರು. ಅವರು ತಮ್ಮ ಪಿತ ವಾಗ್ದಾನಮಾಡಿದ ಪವಿತ್ರಾತ್ಮ ಅವರನ್ನು ಪಡೆದು, ನಮ್ಮ ಮೇಲೆ ಸುರಿಸಿದ ಆ ವರವನ್ನೇ ನೀವು ಈಗ ನೋಡುತ್ತಿರುವುದು ಹಾಗೂ ಕೇಳುತ್ತಿರುವುದು.


ಆದರೆ ಪವಿತ್ರಾತ್ಮ ಅವರು ನಿಮ್ಮ ಮೇಲೆ ಬಂದಾಗ ನೀವು ಶಕ್ತಿಯುತರಾಗುವಿರಿ. ಆಗ ನೀವು ಜೆರುಸಲೇಮಿನಲ್ಲೂ ಜುದೇಯದಲ್ಲೂ ಸಮಾರಿಯದಲ್ಲೂ ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗುವಿರಿ,” ಎಂದರು.


ಆತನ ನಾಮಕೆ ಘನತೆ ಗೌರವವನು ತನ್ನಿ I ಕಾಣಿಕೆಯೊಂದಿಗೆ ಆತನ ಮಂದಿರಕೆ ಬನ್ನಿ II


ಪ್ರಭುವಿನ ವಾಕ್ಯ ಹೀಗೆ ಹಬ್ಬಿಹರಡಿ ಪ್ರಬಲವಾಯಿತು.


ಆದರೆ ಪ್ರೇಷಿತರ ಬೋಧನೆಯನ್ನು ಕೇಳಿದ ಅನೇಕರು ವಿಶ್ವಾಸಿಗಳಾದರು. ಭಕ್ತವಿಶ್ವಾಸಿಗಳ ಸಂಖ್ಯೆ ಸುಮಾರು ಐದು ಸಾವಿರಕ್ಕೆ ಏರಿತು.


ಮತ್ತು ಸ್ವಂತ ಇಚ್ಛೆಯಿಂದ ಜೆರುಸಲೇಮಿನಲ್ಲಿ ವಾಸಿಸುವುದಕ್ಕೆ ಮನಸ್ಸು ಮಾಡಿದಂಥವರನ್ನು ಜನರು ಆಶೀರ್ವದಿಸಿದರು.


ಇದೇ ದೇವಸ್ಥಾನದ ನಿಯಮ. ಪರ್ವತಾಗ್ರದಲ್ಲಿನ ಅದರ ಪ್ರದೇಶವೆಲ್ಲ ಸುತ್ತುಮುತ್ತಲು ಅತಿಪರಿಶುದ್ಧವಾಗಿರಬೇಕು. ಇಗೋ, ದೇವಸ್ಥಾನದ ನಿಯಮ ಇದೇ.”


ಇಸ್ರಯೇಲಿನಾ ನಾಯಕರೊಡನೆ ಸೇರಿ ಸ್ವೇಚ್ಛೆಯಿಂದ ಸೈನ್ಯಸೇರಿದಾ ಜನರೊಡಗೂಡಿ ನಾ ನಲಿದು ಹಾಡುವೆನು, ಮಾಡಿರಿ ನೀವು ಸರ್ವೇಶ್ವರನ ಗುಣಗಾನವನು;


ಸ್ತುತಿಸಿರಿ ಆತನ ಶ್ರೀನಾಮ ಮಹಿಮೆಯನು I ಪೂಜಿಸಿರಿ ಪವಿತ್ರಾಂಬರರಾಗಿ ಆತನನು II


ಅಸ್ಸೀರಿಯದವರು ಇವರ ಶಸ್ತ್ರಾಸ್ತ್ರಗಳಿಗೆ ತುತ್ತಾಗುವರು. ನಿಮ್ರೋದ್ ಸೀಮೆಯ ಪ್ರವೇಶದ್ವಾರಗಳು ಧ್ವಂಸವಾಗುವುವು. ಅಸ್ಸೀರಿಯದವರು ನಮ್ಮ ನಾಡಿಗೆ ನುಗ್ಗಿ ನಮ್ಮ ಕೋಟೆಯನ್ನು ಆಕ್ರಮಿಸುವಾಗ, ಆ ಶಾಂತಿದಾತನು ನಮ್ಮನ್ನು ರಕ್ಷಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು