Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 111:10 - ಕನ್ನಡ ಸತ್ಯವೇದವು C.L. Bible (BSI)

10 ಸುಜ್ಞಾನಕ್ಕೆ ಮೂಲವು ದೈವಭಯವು I ಅದರ ಪಾಲನೆಯು ವಿವೇಕತನವು I ಪ್ರಭುವಿಗೆ ಸ್ತೋತ್ರ ಸದಾಕಾಲವು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನ ಭಯವೇ ಜ್ಞಾನಕ್ಕೆ ಮೂಲ; ಆತನ ಕಟ್ಟಳೆಗಳನ್ನು ಕೈಕೊಳ್ಳುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಯೆಹೋವನ ಭಯವೇ ಜ್ಞಾನಕ್ಕೆ ಮೂಲವು; ಆತನ ಕಟ್ಟಳೆಗಳನ್ನು ನಡಿಸುವವರು ಪೂರ್ಣ ವಿವೇಕಿಗಳು. ಆತನ ಸ್ತುತಿಯು ನಿರಂತರವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನ ಮೇಲಿರುವ ಭಯಭಕ್ತಿಗಳಿಂದಲೇ ಜ್ಞಾನವು ಆರಂಭವಾಗುತ್ತದೆ. ಆತನಲ್ಲಿ ಭಯಭಕ್ತಿಯುಳ್ಳವರು ಜ್ಞಾನಪೂರ್ಣರಾಗಿದ್ದಾರೆ. ಆತನಿಗೆ ಸದಾಕಾಲ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಯೆಹೋವ ದೇವರ ಭಯವು ಜ್ಞಾನದ ಮೂಲವು; ಅವರ ಸೂತ್ರಗಳನ್ನು ಕೈಗೊಳ್ಳುವವರಿಗೆ ಒಳ್ಳೆಯ ತಿಳುವಳಿಕೆ ಉಂಟಾಗುವುದು; ನಿತ್ಯ ಸ್ತೋತ್ರವು ದೇವರಿಗೆ ಸಲ್ಲಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 111:10
22 ತಿಳಿವುಗಳ ಹೋಲಿಕೆ  

ಸರ್ವೇಶ್ವರನಲ್ಲಿ ಭಯಭಕ್ತಿಯೇ ಜ್ಞಾನಕ್ಕೆ ಮೂಲ; ಮೂರ್ಖರಿಗಾದರೋ ಜ್ಞಾನ, ಶಿಸ್ತು ಎಂದರೆ ತಾತ್ಸಾರ.


ಸರ್ವೇಶ್ವರನಲ್ಲಿನ ಭಯಭಕ್ತಿ ಜ್ಞಾನಕ್ಕೆ ಮೂಲ; ಪರಮಪಾವನನನ್ನು ಅರಿಯುವುದು ವಿವೇಕ.


ಬಳಿಕ ಮಾನವನಿಗೆ ಇಂತೆಂದನು: ‘ಸರ್ವೇಶ್ವರನಲ್ಲಿ ಭಯಭಕ್ತಿ ಇಡುವುದೇ ಸುಜ್ಞಾನ ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ’.”


ವಿಷಯ ಮುಗಿಯಿತು; ಎಲ್ಲವನ್ನು ಕೇಳಿ ಆಯಿತು. ದೇವರಿಗೆ ಭಯಪಟ್ಟು ಅವರ ಆಜ್ಞೆಗಳನ್ನು ಕೈಗೊಳ್ಳು. ಇದೇ ಪ್ರತಿಯೊಬ್ಬ ಮಾನವನ ಕರ್ತವ್ಯ.


ಕಾರಣ, ದೇವರಿಂದ ಸಿಗುವಂಥ ಗೌರವವನ್ನು ಅರಸದೆ ನಿಮ್ಮ ನಿಮ್ಮಲ್ಲೇ ಪರಸ್ಪರ ಗೌರವವನ್ನು ಬಯಸುತ್ತೀರಿ. ಹೀಗಿರುವಲ್ಲಿ ನಿಮ್ಮಲ್ಲಿ ವಿಶ್ವಾಸಮೂಡಲು ಹೇಗೆ ತಾನೆ ಸಾಧ್ಯ? ಪಿತನ ಮುಂದೆ ನಾನು ನಿಮ್ಮನ್ನು ಆಪಾದಿಸುತ್ತಿರುವೆನೆಂದು ಎಣಿಸಬೇಡಿ.


ಧಣಿ ಅವನಿಗೂ, ‘ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ. ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೂ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ನೀನೂ ಭಾಗಿಯಾಗು,’ ಎಂದ.


ಅದಕ್ಕೆ ಆ ಧಣಿ, “ಭಲಾ, ನೆಚ್ಚಿನ ಸೇವಕ, ನೀನು ಪ್ರಾಮಾಣಿಕ, ಈ ಚಿಕ್ಕ ಕಾರ್ಯದಲ್ಲಿ ಪ್ರಾಮಾಣಿಕನಾಗಿದ್ದ ನಿನಗೆ ದೊಡ್ಡ ಜವಾಬ್ದಾರಿಯನ್ನೇ ವಹಿಸುತ್ತೇನೆ. ಬಾ, ನಿನ್ನ ಧಣಿಯ ಸೌಭಾಗ್ಯದಲ್ಲಿ ಭಾಗಿಯಾಗು,’ ಎಂದ.


ಇವುಗಳನ್ನು ಕೈಗೊಂಡು ಅನುಸರಿಸಿರಿ. ಅನುಸರಿಸಿದ್ದೇ ಆದರೆ ಅನ್ಯಜನಗಳು ನಿಮ್ಮನ್ನು ಜ್ಞಾನಿಗಳೂ ವಿವೇಕಿಗಳೂ ಎಂದು ತಿಳಿಯುವರು; ಈ ಆಜ್ಞೆಗಳ ಬಗ್ಗೆ ಅವರು ಅರಿತುಕೊಂಡಾಗ, ‘ಈ ದೊಡ್ಡ ಜನಾಂಗ ಎಂಥಾ ಜ್ಞಾನವಿವೇಕವುಳ್ಳ ಜನಾಂಗ’, ಎಂದು ಮಾತಾಡಿಕೊಳ್ಳುವರು.


ನಾವು ಅನುಭವಿಸುತ್ತಿರುವ ಕಷ್ಟಸಂಕಟಗಳು ಅಲ್ಪವಾದುವು, ಕ್ಷಣಿಕವಾದುವು. ಅವುಗಳಿಂದ ಲಭಿಸುವ ಮಹಿಮೆಯಾದರೋ ಅಪಾರವಾದುದು, ಅನಂತವಾದುದು.


ಸತ್ಕಾರ್ಯಗಳಲ್ಲಿ ನಿರತರಾಗಿದ್ದು, ಮಹಿಮೆಯನ್ನು, ಗೌರವವನ್ನು, ಅಮರತ್ವವನ್ನು ಅರಸುತ್ತಾ ಬಾಳುವವರಿಗೆ ದೇವರು ನಿತ್ಯಜೀವವನ್ನು ದಯಪಾಲಿಸುತ್ತಾರೆ.


ಇದನ್ನೆಲ್ಲಾ ಅರ್ಥಮಾಡಿಕೊಂಡು ಅದರಂತೆ ನಡೆದರೆ, ನೀವು ಧನ್ಯರು !


ಆಗ ದೇವರಿಗೂ ಮಾನವರಿಗೂ ಪ್ರಿಯನಾಗುವೆ, ದಯೆ ದಾಕ್ಷಿಣ್ಯವನ್ನು ಪಡೆಯುವೆ.


“ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರವಾಗಿಟ್ಟುಕೊಂಡಿರುವವರು ಭಾಗ್ಯವಂತರು. ಜೀವವೃಕ್ಷದ ಫಲವನ್ನು ಸವಿಯುವ ಹಕ್ಕು ಅವರಿಗಿರುತ್ತದೆ. ಹೆಬ್ಬಾಗಿಲಿನ ಮೂಲಕ ಅವರು ಆ ನಗರವನ್ನು ಸೇರುವರು.


ನದಿಯ ಬದಿಯಲೇ ಬೆಳೆದಿಹ ಮರದಂತೆ I ಸಕಾಲಕೆ ಫಲವೀವ ವೃಕ್ಷದಂತೆ I ಎಲೆಬಾಡದೆ ಪಸಿರಿರುವ ತರುವಂತೆ I ಸಿಗುವುದು ಅವನ ಕಾರ್ಯಗಳಿಗೆ ಸಫಲತೆ II


ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.


ಯಾರು ಅಂತರಂಗದಲ್ಲಿ ಯೆಹೂದ್ಯನಾಗಿರುತ್ತಾನೋ ಅವನೇ ನಿಜವಾದ ಯೆಹೂದ್ಯನು. ಅಂಥವನಿಗೆ ಅಂತರ್ಯದಲ್ಲಿ ಸುನ್ನತಿಯಾಗಿರುತ್ತದೆ. ಇದು ಲಿಖಿತ ಧರ್ಮಶಾಸ್ತ್ರದಿಂದ ಆದದ್ದಲ್ಲ, ದೇವರಾತ್ಮ ಅವರಿಂದ ಆದ ಕಾರ್ಯ; ಇಂಥವನು ಮೆಚ್ಚುಗೆಯನ್ನು ಪಡೆಯುವುದು ಮನುಷ್ಯನಿಂದಲ್ಲ, ದೇವರಿಂದ.


ದೇವರಿಂದ ದೊರಕುವ ಮನ್ನಣೆಗಿಂತ ಮಾನವರಿಂದ ಸಿಗುವ ಮನ್ನಣೆಯೇ ಅವರಿಗೆ ಪ್ರಿಯವಾಗಿತ್ತು.


ಪರಿಶೋಧನೆಗಳು ಬಂದೊದಗುವುದು ನಿಮ್ಮ ವಿಶ್ವಾಸವನ್ನು ಪುಟವಿಡುವುದಕ್ಕಾಗಿಯೇ. ನಶಿಸಿಹೋಗುವ ಬಂಗಾರವೂ ಕೂಡ ಬೆಂಕಿಯಿಂದ ಪರಿಶೋಧಿತವಾಗುತ್ತದೆ. ಬಂಗಾರಕ್ಕಿಂತಲೂ ಬಹು ಅಮೂಲ್ಯವಾದ ನಿಮ್ಮ ವಿಶ್ವಾಸವು ಶೋಧಿತವಾಗಬೇಕು. ಆಗ ಮಾತ್ರ ಯೇಸುಕ್ರಿಸ್ತರು ಪ್ರತ್ಯಕ್ಷವಾಗುವ ದಿನದಂದು ನಿಮಗೆ ಪ್ರಶಂಸೆ, ಪ್ರತಿಷ್ಠೆ ಹಾಗೂ ಪ್ರತಿಭೆ ದೊರಕುತ್ತವೆ.


ಹೊಗಳುವೆನು ನಾ ದಿನದಿನವೂ ನಿನ್ನನು I ಭಜಿಸುವೆನೆಂದೆಂದಿಗೂ ನಿನ್ನ ಹೆಸರನು II


ಕಿವುಡರನ್ನು ದೂಷಿಸಬೇಡ; ಕುರುಡರು ನಡೆಯುವ ದಾರಿಯಲ್ಲಿ ಎರಡು ಕಲ್ಲನ್ನು ಇಡಬೇಡ, ನಿನ್ನ ದೇವರಲ್ಲಿ ಭಯಭಕ್ತಿಯಿರಲಿ, ನಾನೇ ಸರ್ವೇಶ್ವರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು