Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 112:10 - ಕನ್ನಡ ಸತ್ಯವೇದವು C.L. Bible (BSI)

10 ಇದನು ಕಂಡು ಕೆರಳುವನಾ ದುರುಳನು I ಹೊಂದುವನು ಈ ಪರಿ ಆಶಾಭಂಗವನು I ಹಲ್ಲು ಕಡಿಯುತ ಅವನು ಹಾಳಾಗುವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದುಷ್ಟನು ನೋಡಿ ವ್ಯಥೆಪಡುವನು; ಅವನು ಹಲ್ಲುಕಡಿಯುತ್ತಾ ನಾಶವಾಗುವನು. ದುಷ್ಟರ ನಿರೀಕ್ಷೆಯು ಭಂಗವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದುಷ್ಟನು ನೋಡಿ ವ್ಯಥೆಪಡುವನು; ಅವನು ಹಲ್ಲುಕಡಿಯುತ್ತಾ ಲಯಹೊಂದುವನು. ದುಷ್ಟರ ನಿರೀಕ್ಷೆಯು ಭಂಗವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದುಷ್ಟರು ಇದನ್ನು ಕಂಡು ಕೋಪಗೊಳ್ಳುವರು; ಕೋಪದಿಂದ ಹಲ್ಲು ಕಡಿಯುತ್ತಾ ಅಳಿದುಹೋಗುವರು. ಅವರ ದುರಾಶೆಯು ಈಡೇರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದುಷ್ಟರು ಇದನ್ನು ಕಂಡು ವ್ಯಥೆ ಪಡುವರು; ಅವರು ತಮ್ಮ ಹಲ್ಲು ಕಡಿದು ಮರೆಯಾಗಿ ಹೋಗುವರು; ದುಷ್ಟರ ಆಶೆಯು ನಾಶವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 112:10
15 ತಿಳಿವುಗಳ ಹೋಲಿಕೆ  

ಅಬ್ರಹಾಮ, ಇಸಾಕ, ಯಕೋಬ ಮತ್ತು ಎಲ್ಲಾ ಪ್ರವಾದಿಗಳು ದೇವರ ಸಾಮ್ರಾಜ್ಯದಲ್ಲಿ ಇರುವುದನ್ನೂ ನಿಮ್ಮನ್ನು ಮಾತ್ರ ಹೊರಗೆ ಹಾಕಿರುವುದನ್ನೂ ನೋಡುವಾಗ ನಿಮಗಾಗುವ ಗೋಳಾಟವೇನು! ಹಲ್ಲು ಕಡಿತವೇನು!!


ದುರುಳನೊಂದಿಗೆ ಸಾಯುವುದು ಅವನ ನಿರೀಕ್ಷೆ; ಅಳಿವುದು ಸಾಮರ್ಥ್ಯದ ಮೇಲಿಟ್ಟ ಅವನ ನಂಬಿಕೆ.


ಸಜ್ಜನರ ನಂಬಿಕೆ ಆನಂದಕರ; ದುರ್ಜನರ ನಿರೀಕ್ಷೆ ವಿನಾಶಕರ.


ನಿನ್ನ ನೆರವು, ಸಾಂತ್ವನ, ನನಗಿದೆಯೆಂದು I ನೀಡೊಂದು ಪ್ರಭು, ಶುಭಸೂಚನೆಯನು I ಅದನೋಡಿ ಶತ್ರು ಪಡಲಿ ಲಜ್ಜೆಯನು II


ದುರ್ಜನನು ಹೂಡಿಹನು ಒಳಸಂಚು ಸಜ್ಜನನ ವಿರುದ್ಧ I ಕಟಕಟನೆ ಹಲ್ಲು ಕಡಿಯುತಿಹನಿದೋ ಆತನ ವಿರೋಧ II


ದೇವರನ್ನು ಮರೆಯುವವರೆಲ್ಲರ ಗತಿ ಇದುವೆ ಭಕ್ತಿಹೀನನ ನಿರೀಕ್ಷೆ ನಿರರ್ಥಕವೆ.


ಆಗ ರಾಜನು ಪರಿಚಾರಕರಿಗೆ, ‘ಇವನ ಕೈಕಾಲುಗಳನ್ನು ಕಟ್ಟಿ ಹೊರಗಿನ ಕತ್ತಲೆಗೆ ದಬ್ಬಿರಿ; ಅಲ್ಲಿರುವವರೊಡನೆ ಹಲ್ಲುಕಡಿದು ಗೋಳಾಡಲಿ,’ ಎಂದು ಹೇಳಿದ.


ಆದರೆ ಯಾರು ಈ ಸಾಮ್ರಾಜ್ಯಕ್ಕೆ ಬಾಧ್ಯಸ್ಥರೋ ಅವರನ್ನೇ ಹೊರಗೆ ದಬ್ಬಲಾಗುವುದು; ಅಲ್ಲಿ, ಆ ಕಾರ್ಗತ್ತಲಲ್ಲಿ, ಅವರ ಗೋಳಾಟವೇನು! ಹಲ್ಲು ಕಡಿತವೇನು!”


ಇಸ್ರಯೇಲರ ಹಿತಚಿಂತಕನು ಒಬ್ಬನು ಬಂದನೆಂಬ ಸಮಾಚಾರ ಹೋರೋನಿನ ಸನ್ಬಲ್ಲಟನಿಗೂ ಅಮ್ಮೋನ್ ದೇಶದವನಾದ ತೊಬೀಯ ಎಂಬ ಅಧಿಕಾರಿಗೂ ಮುಟ್ಟಿತು. ಅವರು ತುಂಬ ಹೊಟ್ಟೆಕಿಚ್ಚುಪಟ್ಟರು.


ತನ್ನ ಮಲದ ಹಾಗೆ ನಿತ್ಯಕ್ಕು ಅವನು ನಶಿಸಿಹೋಗುವನು ಅವನನು ಅರಿತವರೆಲ್ಲರೂ “ಅವನೆಲ್ಲಿಯೋ!’ ಎಂದು ಹೇಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು