Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 112:2 - ಕನ್ನಡ ಸತ್ಯವೇದವು C.L. Bible (BSI)

2 ಬಲಿಷ್ಠವಾಗುವುದು ಜಗದೊಳು ಅವನ ಸಂತಾನ I ಸಜ್ಜನರ ಸಂತತಿ ಪಡೆವುದು ಆಶೀರ್ವಚನ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನ ಸಂತಾನವು ಲೋಕದಲ್ಲಿ ಬಲಿಷ್ಠವಾಗುವುದು; ನೀತಿವಂತನ ವಂಶವು ಶುಭಹೊಂದುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನ ಸಂತಾನವು ಲೋಕದಲ್ಲಿ ಬಲಿಷ್ಠವಾಗುವದು; ನೀತಿವಂತನ ವಂಶವು ಶುಭಹೊಂದುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವನ ಸಂತತಿಗಳವರು ಭೂಮಿಯ ಮೇಲೆ ಪ್ರಬಲರಾಗುವರು; ನೀತಿವಂತನ ಸಂತತಿಗಳವರು ಆಶೀರ್ವಾದವನ್ನು ಹೊಂದಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರ ಸಂತತಿಯು ಭೂಮಿಯಲ್ಲಿ ಪರಾಕ್ರಮಶಾಲಿಯಾಗಿರುವುದು; ಯಥಾರ್ಥರ ಸಂತತಿಯು ಆಶೀರ್ವಾದ ಹೊಂದುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 112:2
12 ತಿಳಿವುಗಳ ಹೋಲಿಕೆ  

ನಿನಗೂ ನಿನ್ನ ಸಂತತಿಗೂ ನಾನು ದೇವರಾಗಿರುತ್ತೇನೆ. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ಚಿರಒಡಂಬಡಿಕೆಯಾಗಿ ಸ್ಥಿರಪಡಿಸುತ್ತೇನೆ.


ನಿರ್ದೋಷಿಗಳಾಗಿ ನಡೆಯುತ್ತಾರೆ ನೀತಿವಂತರು; ಅವರು ಗತಿಸಿದ ಮೇಲೂ ಅವರ ಸಂತತಿಯವರು ಭಾಗ್ಯವಂತರು.


ದಾನ ನೀಡುವನು, ಸಾಲ ನಿರಾಕರಿಸನು ಸಜ್ಜನನು I ಆತನ ಸಂತಾನ ಹೊಂದುವುದು ಆಶೀರ್ವಾದವನು II


ಈ ವಾಗ್ದಾನವನ್ನು ನಿಮಗೆ ಮಾತ್ರವಲ್ಲ, ನಿಮ್ಮ ಸಂತತಿಗೂ ದೂರ ಇರುವ ಎಲ್ಲರಿಗೂ ಮತ್ತು ಸರ್ವೇಶ್ವರನಾದ ದೇವರು ತಮ್ಮತ್ತ ಆಹ್ವಾನಿಸುವ ಪ್ರತಿಯೊಬ್ಬನಿಗೂ ಮಾಡಲಾಗಿದೆ,” ಎಂದನು.


ಬಾಳುವನಂಥವನು ಸುಖಸೌಭಾಗ್ಯದಿಂದ I ಬದುಕುವುದವನ ಸಂತತಿ ನಾಡಿನೊಡೆತನದಿಂದ II


ಬಾಳುವರು ನಿನ್ನ ದಾಸರ ಮಕ್ಕಳು ಸುರಕ್ಷಿತವಾಗಿ I ಇರುವುದವರ ಸಂತತಿ ನಿನ್ನ ಸಮ್ಮುಖದಲಿ ಸ್ಥಿರವಾಗಿ II 7


ಅವರಿಗೆ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು. ಇದರಿಂದ ಅವರು ತಮ್ಮ ಹಿತಕ್ಕಾಗಿಯೂ ತಮ್ಮ ಅನಂತರ ತಮ್ಮ ಸಂತಾನದ ಹಿತಕ್ಕಾಗಿಯೂ ನನ್ನಲ್ಲಿ ಸದಾ ಭಯಭಕ್ತಿ ಉಳ್ಳವರಾಗಿರುವರು.


ಅಬ್ರಹಾಮನು ಕಾಲವಾದ ಬಳಿಕ ಅವನ ಮಗ ಇಸಾಕನನ್ನು ದೇವರು ಆಶೀರ್ವದಿಸಿದರು. ಇಸಾಕನು ‘ಲಹೈರೋಯಿ’ ಎಂಬ ಬಾವಿಯ ಹತ್ತಿರ ವಾಸವಾಗಿದ್ದನು.


ಧೂಪದ್ರವ್ಯ ತುಂಬಿದ್ದ 10 ಶೆಕೆಲ್ ತೂಕದ ಒಂದು ಚಿನ್ನದ ಧೂಪಾರತಿ


ದುಷ್ಟನಿಗೆ ದಂಡನೆ ಕಟ್ಟಿಟ್ಟ ಬುತ್ತಿ; ಶಿಷ್ಟ ಸಂತಾನಕ್ಕೆ ಸಿಗುವುದು ಮುಕ್ತಿ.


ಒಳ್ಳೆಯವನ ಆಸ್ತಿ ಸಂತತಿಯವರಿಗೆ ಬಾಧ್ಯದ ಸೊತ್ತು; ಪಾಪಿಯ ಸೊತ್ತು ಸತ್ಪುರುಷರಿಗೆ ಸೇರುವ ಸಂಪತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು