Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 113:7 - ಕನ್ನಡ ಸತ್ಯವೇದವು C.L. Bible (BSI)

7 ದೀನರನು ಎಬ್ಬಿಸುವನು ಧೂಳಿನಿಂದ I ಬಡವರನು ಎತ್ತುವನು ತಿಪ್ಪೆಯಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆತನು ದೀನರನ್ನು ಧೂಳಿನಿಂದ ಎಬ್ಬಿಸಿ, ಬಡವರನ್ನು ತಿಪ್ಪೆಯಿಂದ ಎತ್ತುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆತನು ದೀನರನ್ನು ಧೂಳಿಯಿಂದ ಎಬ್ಬಿಸಿ ಬಡವರನ್ನು ತಿಪ್ಪೆಯಿಂದ ಎತ್ತುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆತನು ಬಡವರನ್ನು ಧೂಳಿನಿಂದ ಎಬ್ಬಿಸುವನು; ಭಿಕ್ಷುಕರನ್ನು ತಿಪ್ಪೆಯಿಂದ ಎತ್ತುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಧೂಳಿನೊಳಗಿಂದ ದರಿದ್ರರನ್ನು ಎಬ್ಬಿಸುತ್ತಾರೆ, ತಿಪ್ಪೆಯೊಳಗಿಂದ ಬಡವರನ್ನು ಎತ್ತುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 113:7
20 ತಿಳಿವುಗಳ ಹೋಲಿಕೆ  

ದೀನರನ್ನೇರಿಸಿದನು ಅವನತಿಯಿಂದ ಉನ್ನತಿಗೆ I ಹೆಚ್ಚಿಸಿದನವರ ಸಂತತಿಯನು ಕುರಿಮಂದೆ ಹಾಗೆ II


ಆಶ್ರಯ ಪಡೆವುವು ಅದರ ರೆಂಬೆಗಳ ನೆರಳಲಿ, ಆಗ ತಿಳಿವುವು ವನದ ವೃಕ್ಷಗಳು: ಎತ್ತರವಾದ ಮರಗಳ ತಗ್ಗಿಸುವವನು ತಗ್ಗಾದುದನು ಎತ್ತರಪಡಿಸುವವನು ಹಸುರಾದುದನು ಒಣಗಿಸುವವನು ಒಣಗಿದುದನು ಚಿಗುರಿಸುವವನು ಸರ್ವೇಶ್ವರ ನಾನೇ ಎಂದು ಇದ ನುಡಿದವ ನಾನು, ನುಡಿದುದನು ನಡೆಸುವವ ನಾನು.”


ಉನ್ನತಿಗೇರಿಸುತ್ತಾನೆ ದೀನದಲಿತರನು ಸುರಕ್ಷತೆಗೊಯ್ಯುತ್ತಾನೆ ದುಃಖಿತರನು.


ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು‍ ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?


ಬದುಕುವರು ನಿಧನರಾದ ನಮ್ಮ ಜನರು ಜೀವದಿಂದೇಳುವುವು ನಮ್ಮವರ ಶವಗಳು. ಎದ್ದು ಹರ್ಷಧ್ವನಿಗೈಯಲಿ ನೆಲದಲಿ ಬಿದ್ದಿರುವವರು. ನೀ ಸುರಿಸುವ ಇಬ್ಬನಿ ಜ್ಯೋತಿರ್ಮಯ, ಆದುದರಿಂದ ಸತ್ತವರು ಪುನರುತ್ಥಾನಹೊಂದುವರು ನೆಲದಿಂದ.


ಯೋಬನು ತನ್ನ ಮೈಕಡಿತವನ್ನು ತಾಳಲಾಗದೆ ಬೋಕಿಯೊಂದರಿಂದ ಕೆರೆದುಕೊಳ್ಳುತ್ತಾ ಬೂದಿಗುಂಡಿಯಲ್ಲಿ ಕುಳಿತುಕೊಳ್ಳಬೇಕಾಯಿತು.


ಎನ್ನ ಗೋಣು ಒಣಗಿಹೋಗಿದೆ ಒಡೆದ ಮಡಕೆಯಂತೆ I ಅಂಗುಳಕೆ ಜಿಹ್ವೆ ಅಂಟಿದೆ; ಮಣ್ಣಿಗೆನ್ನ ಸೇರಿಸಿದೆ II


ಇಸ್ರಯೇಲರ ಅರಸರೇ, ಯಾರನ್ನು ಹಿಂದಟ್ಟಿ ಹೊರಟಿದ್ದೀರಿ? ಯಾರನ್ನು ಹಿಡಿಯಬೇಕೆಂದಿರುತ್ತೀರಿ? ಸತ್ತ ನಾಯಿಯನ್ನೇ? ಒಂದು ಬಡ ಸೊಳ್ಳೆಯನ್ನೇ?


“ನಾನು ನಿನ್ನನ್ನು ಧೂಳಿನಿಂದ ಎತ್ತಿ ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನನ್ನಾಗಿ ಮಾಡಿದೆ. ಆದರೂ ನೀನು ಯಾರೊಬ್ಬಾಮನ ಮಾರ್ಗದಲ್ಲೇ ನಡೆದು, ನನ್ನ ಜನರಾದ ಇಸ್ರಯೇಲರನ್ನು ಪಾಪಕ್ಕೆ ಪ್ರೇರಿಸಿದೆ. ಅವರ ಪಾಪದ ಮೂಲಕ ನನಗೆ ಕೋಪವನ್ನೆಬ್ಬಿಸಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು