ಕೀರ್ತನೆಗಳು 114:8 - ಕನ್ನಡ ಸತ್ಯವೇದವು C.L. Bible (BSI)8 ಮಾರ್ಪಡಿಸಿಹನು ಗೋರ್ಕಲ್ಲನು ಕೊಳವಾಗಿ I ಕಲ್ಲು ಬಂಡೆಯನು ನೀರಿನ ಬುಗ್ಗೆಯಾಗಿ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆತನು ಬಂಡೆಯನ್ನು ಕೆರೆಯನ್ನಾಗಿಯೂ, ಶಿಲೆಯನ್ನು ಬುಗ್ಗೆಯನ್ನಾಗಿಯೂ ಮಾರ್ಪಡಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆತನು ಬಂಡೆಯನ್ನು ಕೆರೆಯನ್ನಾಗಿಯೂ ಶಿಲೆಯನ್ನು ಬುಗ್ಗೆಯನ್ನಾಗಿಯೂ ಮಾರ್ಪಡಿಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಬಂಡೆಯೊಳಗಿಂದ ನೀರು ಹರಿದುಬರುವಂತೆ ಮಾಡಿದವನು ಆತನೇ. ಗಟ್ಟಿಯಾದ ಬಂಡೆಯೊಳಗಿಂದ ನೀರಿನ ಒರತೆಯನ್ನು ಬರಮಾಡಿದವನು ಆತನೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ದೇವರು ಬಂಡೆಯನ್ನು ನೀರಿನ ಕೆರೆಯಾಗಿಯೂ, ಕಗ್ಗಲ್ಲನ್ನು ನೀರಿನ ಬುಗ್ಗೆಯಾಗಿ ಮಾರ್ಪಡಿಸುತ್ತಾರೆ. ಅಧ್ಯಾಯವನ್ನು ನೋಡಿ |
ಅವರು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ ಪರೀಕ್ಷಿಸಿದ ನಂತರ ನಿಮಗೆ ಒಳಿತನ್ನು ಉಂಟುಮಾಡಬೇಕೆಂಬ ಉದ್ದೇಶದಿಂದ ಈಜಪ್ಟ್ ದೇಶದಲ್ಲಿ ಗುಲಾಮರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದರು. ವಿಷಸರ್ಪಗಳೂ ಚೇಳುಗಳೂ ಇದ್ದ ಆ ಘೋರವಾದ ಮಹಾಮರುಭೂಮಿಯನ್ನೂ ನೀರು ಬತ್ತಿಹೋಗಿದ್ದ ಭೂಮಿಗಳನ್ನೂ ದಾಟಿಸಿದರು; ಗಟ್ಟಿಯಾದ ಬಂಡೆಯೊಳಗಿಂದ ನೀರನ್ನು ಹೊರಡಿಸಿಕೊಟ್ಟರು. ನಿಮ್ಮ ಪೂರ್ವಿಕರಿಗೆ ತಿಳಿಯದೆ ಇದ್ದ ಮನ್ನವನ್ನು ಕೊಟ್ಟು ಪೋಷಿಸಿದರು. ಅಂಥವರನ್ನು ಮರೆತು ಮನಸ್ಸಿನಲ್ಲೇ