Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 115:16 - ಕನ್ನಡ ಸತ್ಯವೇದವು C.L. Bible (BSI)

16 ಪ್ರಭುವಿಗೆ ಸ್ವಂತವಾದುದು ಪರಲೋಕ I ನರರಿಗೆ ಕೊಟ್ಟಿಹನಾತನು ಭೂಲೋಕ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಪರಲೋಕವು ಯೆಹೋವನದು; ಭೂಲೋಕವನ್ನು ಮಾನವ ಸಂತಾನಕ್ಕೆ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಪರಲೋಕವು ಯೆಹೋವನದು; ಭೂಲೋಕವನ್ನು ನರಸಂತಾನಕ್ಕೆ ಕೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಪರಲೋಕವು ಯೆಹೋವನದು. ಆತನು ಭೂಲೋಕವನ್ನು ಮನುಷ್ಯರಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಉನ್ನತ ಆಕಾಶಗಳು ಯೆಹೋವ ದೇವರದೇ, ಆದರೆ ಅವರು ಭೂಮಿಯನ್ನು ಮಾನವರಿಗೆ ಕೊಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 115:16
14 ತಿಳಿವುಗಳ ಹೋಲಿಕೆ  

ಒಡೆಯನಾಗಿಸಿದೆ ನಿನ್ನಯ ಕರಕೃತಿಗಳಿಗೆ I ಒಳಪಡಿಸಿದೆ ಸಕಲವನು ಅವನ ಪಾದದಡಿಗೆ II


ಆಕಾಶವು ನಿನ್ನದು ಪ್ರಭು, ಭೂಮಿಯೂ ನಿನ್ನದೇ I ಜಗವು, ಅದರಲ್ಲಿರುವುದೆಲ್ಲವು, ನಿನ್ನಿಂದಾದುದೇ II


ಪರಾತ್ಪರ ದೇವರು ಜನಾಂಗಗಳನು ಬೇರೆಬೇರೆಮಾಡಿದಾಗ, ಅವರವರಿಗೆ ಸ್ವದೇಶಗಳನು ವಿಂಗಡಿಸಿಕೊಟ್ಟಾಗ, ದೇವಕುವರರ ಸಂಖ್ಯಾನುಸಾರ ಪ್ರದೇಶಗಳನು ಗೊತ್ತುಮಾಡಿದಾಗ.


ಆಕಾಶವನು ತಗ್ಗಿಸಿ ಬಾ ಪ್ರಭು ಇಳಿದು I ಬೆಟ್ಟಗಳನು ನೀ ಮುಟ್ಟಲು, ಹೊಗೆ ಹೊರಹೊಮ್ಮುವುದು II


ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ಆಕಾಶವೇ ನನಗೆ ಸಿಂಹಾಸನವಾಗಿರಲು, ಭೂಮಿಯೇ ನನಗೆ ಪಾದಪೀಠವಾಗಿರಲು ನೀವು ನನಗೆ ಕಟ್ಟುವ ಮನೆ ಇನ್ನು ಎಂಥದ್ದು? ನನ್ನ ವಿಶ್ರಾಂತಿಗೆ ತಕ್ಕ ಸ್ಥಳ ಯಾವುದು?


ನನ್ನ ಪಿತನ ಆಸ್ಥಾನದಲ್ಲಿ ಅನೇಕ ನಿವಾಸಗಳು ಇವೆ. ಹಾಗಿಲ್ಲದ ಪಕ್ಷದಲ್ಲಿ ನಿಮಗೆ ತಿಳಿಸುತ್ತಿದ್ದೆ. ನಾನು ಹೋಗಿ ನಿಮಗೆ ಸ್ಥಳವನ್ನು ಅಣಿಗೊಳಿಸುತ್ತೇನೆ.


ಸಿಟ್ಟುಗೊಂಡು ಅವರನ್ನು ಹಿಂದಟ್ಟು ನಿನ್ನ ಆಕಾಶದ ಕೆಳಗಿನಿಂದ ಅವರನ್ನು ಅಳಿಸಿಹಾಕು".


ಉನ್ನತೋನ್ನತ ಆಕಾಶವೇ, ಹೊಗಳು ಆತನನು I ಅದರ ಮೇಲಿನ ಜಲರಾಶಿಗಳೇ, ಹೊಗಳಿ ಆತನನು II


ಇಗೋ ಕೇಳಿ: ಉನ್ನತೋನ್ನತವಾದ ಆಕಾಶಮಂಡಲವು, ಭೂಮಿಯು ಹಾಗು ಅದರಲ್ಲಿರುವ ಎಲ್ಲವು ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯವೇ.


ಉತ್ತರ ದಕ್ಷಿಣಗಳನುಂಟು ಮಾಡಿದವನು ನೀನು I ಸ್ತುತಿಸುತ್ತವೆ ತಾಬೋರ್ ಹೆರ್‍ಮೊನ್ ನಿನ್ನ ನಾಮವನು II


ಕೇಳಿ, ಆಕಾಶಮಂಡಲವನ್ನು ಸೃಷ್ಟಿಸಿದ ಸರ್ವೇಶ್ವರನ ಮಾತನ್ನು : ಭೂಲೋಕವನ್ನು ನಿರ್ಮಿಸಿ, ರೂಪಿಸಿ, ಸ್ಥಾಪಿಸಿದ ದೇವರು ಆತನು. ಅದನ್ನು ಶೂನ್ಯಸ್ಥಾನವಾಗಿ ಸೃಷ್ಟಿಸದೆ, ಜನನಿವಾಸಕ್ಕಾಗಿಯೇ ರೂಪಿಸಿದವನು ಆತನು. ಅಂಥವನು ಇಂತೆನ್ನುತ್ತಾನೆ : “ಸರ್ವೇಶ್ವರ ನಾನೇ; ನಾನಲ್ಲದೆ ಇನ್ನಾರೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು