Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 116:16 - ಕನ್ನಡ ಸತ್ಯವೇದವು C.L. Bible (BSI)

16 ಹೇ ಪ್ರಭು, ಕರುಣಿಸು, ನಾ ನಿನ್ನ ಕಿಂಕರನು I ನಿನ್ನ ದಾಸಿಯ ಮಗನು, ನಿನ್ನ ಸೇವಕನು I ಬಿಡಿಸಿರುವೆ ನೀನು ನನ್ನ ಬಂಧನಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಯೆಹೋವನೇ, ಕರುಣಿಸು, ನಾನು ನಿನ್ನ ಸೇವಕನು; ನಿನ್ನ ದಾಸಿಯ ಮಗನೂ, ನಿನ್ನ ದಾಸನೂ ಆಗಿದ್ದೇನೆ. ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯೆಹೋವನೇ, ಕರುಣಿಸು, ನಾನು ನಿನ್ನ ಕಿಂಕರನು; ನಿನ್ನ ದಾಸಿಯ ಮಗನೂ ನಿನ್ನ ಸೇವಕನೂ ಆಗಿದ್ದೇನೆ. ನನ್ನ ಬಂಧನಗಳನ್ನು ಬಿಚ್ಚಿಬಿಟ್ಟಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಯೆಹೋವನೇ, ನಾನು ನಿನ್ನ ಸೇವಕ. ನಿನ್ನ ದಾಸಿಯರಲ್ಲೊಬ್ಬಳ ಮಗ. ನೀನೇ ನನ್ನ ಪ್ರಥಮ ಉಪಾಧ್ಯಾಯ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಯೆಹೋವ ದೇವರೇ, ನಿಜವಾಗಿ ನಾನು ನಿಮ್ಮ ಸೇವಕನು; ಹೌದು, ನನ್ನ ತಾಯಿ ನಿಮಗೆ ಸೇವೆಮಾಡಿದಂತೆ ನಾನು ಸಹ ನಿಮ್ಮ ಸೇವಕನು; ನೀವು ನನ್ನ ಬಂಧನಗಳಿಂದ ನನ್ನನ್ನು ಬಿಡಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 116:16
11 ತಿಳಿವುಗಳ ಹೋಲಿಕೆ  

ಕಟಾಕ್ಷವಿಟ್ಟು ಕರುಣಿಸೆನ್ನನು I ನೀಡು ನಿನ್ನ ದಾಸನಿಗೆ ಬಲವನು I ರಕ್ಷಿಸು ನಿನ್ನ ದಾಸಿಯ ಮಗನನು II


ನಿನ್ನಚಲ ಪ್ರೀತಿಯಿಂದ ಧ್ವಂಸಮಾಡು ಶತ್ರುಗಳನು I ನಶಿಸಿಹಾಕು ಪ್ರಾಣವೈರಿಗಳನು, ನಾ ನಿನ್ನ ದಾಸನು II


ನಿನ್ನ ದಾಸ ನಾನು, ದಯಪಾಲಿಸು ಎನಗೆ I ನಿನ್ನ ಕಟ್ಟಳೆಗಳನು ಅರಿವ ತಿಳುವಳಿಕೆ II


ಜಗದಾದ್ಯಂತ ಚದರಿರುವ ಇಸ್ರಯೇಲಿನ ಹನ್ನೆರಡು ಕುಲದವರಿಗೆ - ದೇವರ ಹಾಗೂ ಪ್ರಭು ಯೇಸುಕ್ರಿಸ್ತರ ದಾಸನಾದ ಯಕೋಬನ ಶುಭಾಶಯಗಳು.


ಆದರೆ ನೀವು ಪಾಪದಿಂದ ಬಿಡುಗಡೆ ಹೊಂದಿರುವಿರಿ. ದೇವರಿಗೆ ದಾಸರಾಗಿರುವಿರಿ. ಇದರಿಂದ ನಿಮಗೆ ಸಿಕ್ಕಿರುವ ಪ್ರತಿಫಲ ಪರಿಶುದ್ಧಜೀವನ; ಅಂತಿಮವಾಗಿ ಅಮರ ಜೀವನ.


ನಾನು ಯಾವ ದೇವರ ಭಕ್ತನಾಗಿದ್ದೇನೋ, ಯಾವ ದೇವರನ್ನು ಆರಾಧಿಸುತ್ತೇನೋ ಆ ದೇವರ ದೂತನು ನಿನ್ನೆ ರಾತ್ರಿ ದರ್ಶನವಿತ್ತನು:


ನನ್ನ ಸೇವೆಮಾಡಬೇಕೆಂದಿರುವವನು ನನ್ನನ್ನು ಹಿಂಬಾಲಿಸಲಿ. ಆಗ ನಾನಿರುವಲ್ಲಿಯೇ ನನ್ನ ಸೇವಕನೂ ಇರುತ್ತಾನೆ. ನನ್ನ ಸೇವೆಮಾಡುವವನು ನನ್ನ ಪಿತನಿಂದ ಸನ್ಮಾನಹೊಂದುತ್ತಾನೆ,” ಎಂದರು


ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,


ಸರ್ವೇಶ್ವರಾ, ನಿಮ್ಮ ದಾಸನಾದ ನನ್ನ ಹಿತಕ್ಕಾಗಿಯೂ ತಮ್ಮ ಚಿತ್ತಾನುಸಾರವಾಗಿಯೂ ಈ ಮಹತ್ಕಾರ್ಯಗಳನ್ನೆಲ್ಲಾ ನಡೆಸಿ ನಿಮ್ಮ ಸರ್ವಮಹತ್ವವನ್ನು ತೋರ್ಪಡಿಸಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು