Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 116:4 - ಕನ್ನಡ ಸತ್ಯವೇದವು C.L. Bible (BSI)

4 ಕೂಗಿ ಕರೆದೆನಾಗ ಪ್ರಭುವಿನ ಸಿರಿ ನಾಮವನು I “ಪ್ರಭು, ಉಳಿಸೆನ್ನ ಪ್ರಾಣವನು” ಎಂದು ಬೇಡಿದೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಯೆಹೋವನ ಹೆಸರನ್ನು ಹೇಳಿ, “ಯೆಹೋವನೇ, ಕೃಪೆಮಾಡಿ ನನ್ನ ಪ್ರಾಣವನ್ನು ರಕ್ಷಿಸು” ಎಂದು ಪ್ರಾರ್ಥಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆಗ ಯೆಹೋವನ ಹೆಸರು ಹೇಳಿ - ಯೆಹೋವನೇ, ಕೃಪೆಮಾಡಿ ನನ್ನ ಪ್ರಾಣವನ್ನು ರಕ್ಷಿಸು ಎಂದು ಪ್ರಾರ್ಥಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ನಾನು ಯೆಹೋವನ ಹೆಸರು ಹೇಳಿ, “ಯೆಹೋವನೇ, ನನ್ನನ್ನು ರಕ್ಷಿಸು!” ಎಂದು ಮೊರೆಯಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ನಾನು, “ಓ ಯೆಹೋವ ದೇವರೇ, ನನ್ನನ್ನು ರಕ್ಷಿಸಿರಿ,” ಎಂದು ಯೆಹೋವ ದೇವರ ಹೆಸರಿನಲ್ಲಿ ಬೇಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 116:4
20 ತಿಳಿವುಗಳ ಹೋಲಿಕೆ  

ಇಕ್ಕಟ್ಟಿನಲ್ಲಿ ಮೊರೆಯಿಟ್ಟೆನು ಪ್ರಭುವಿಗೆ I ಕಿವಿಗೊಟ್ಟು ಬಿಡುಗಡೆಯಿತ್ತನು ಆತನೆನಗೆ II


ಕತ್ತಿಗೆ ತುತ್ತಾಗದಂತೆ ತಪ್ಪಿಸು I ಕುಕ್ಕುರಗಳಿಂದ ಪ್ರಾಣವನುಳಿಸು II


ಸುಂಕವಸೂಲಿಯವನಾದರೋ ದೂರದಲ್ಲೇ ನಿಂತು, ತಲೆಯನ್ನೂ ಮೇಲಕ್ಕೆ ಎತ್ತದೆ, ‘ಓ ದೇವರೇ, ನಾನು ಪಾಪಿ; ನನಗೆ ದಯೆತೋರಿ,’ ಎನ್ನುತ್ತಾ ಎದೆಬಡಿದುಕೊಂಡ.


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು I ಸರ್ವಾಪತ್ತಿನಿಂದವನು ಮುಕ್ತಗೊಂಡನು II


ನಿವಾರಿಸೆನ್ನ ಮನಕ್ಲೇಶವನು I ಪರಿಹರಿಸೆನ್ನ ದುಃಖದುಗುಡವನು II


ಇಂಥಾ ದುಸ್ಥಿತಿಯಲಿ ನಾ ಮೊರೆಯಿಟ್ಟೆ ಪ್ರಭುವಿಗೆ I ಪ್ರಾರ್ಥನೆ ಮಾಡಿದೆ ಆ ನನ್ನ ದೇವನಲಿ I ನನ್ನ ಪ್ರಾರ್ಥನೆ ಬಿದ್ದಿತು ಆತನ ಕಿವಿಯಲಿ II


ನನ್ನ ಕಡೆ ತಿರುಗಿ ಪ್ರಭು, ನನ್ನನುದ್ಧರಿಸು I ನಿನ್ನಚಲ ಪ್ರೀತಿಯಿಂದ ನನ್ನ ರಕ್ಷಿಸು II


ಯೇಸು ಸ್ವಾಮಿಯ ತಾಯಿ ಅಲ್ಲಿಗೆ ಬಂದಿದ್ದರು. ಯೇಸುವಿಗೂ ಅವರ ಶಿಷ್ಯರಿಗೂ ಆ ಮದುವೆಗೆ ಆಮಂತ್ರಣವಿತ್ತು.


ಸತ್ತವರಲಿ ನಿನ್ನ ಸ್ಮರಿಸುವವರಾರು? I ಪಾತಾಳದಲಿ ನಿನ್ನ ಸ್ತುತಿಸುವವರಾರು?II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು