Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 116:6 - ಕನ್ನಡ ಸತ್ಯವೇದವು C.L. Bible (BSI)

6 ಕಾಪಾಡುವನು ಪ್ರಭು ಸರಳ ಜೀವಿಗಳನು I ರಕ್ಷಿಸಿದನು ಕುಗ್ಗಿದವನಾಗಿದ್ದ ಎನ್ನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನು ಸರಳ ಮನಸ್ಸುಳ್ಳವರನ್ನು ಕಾಪಾಡುವನು; ಕುಗ್ಗಿದವನಾದ ನನ್ನನ್ನು ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನು ಸಾಧುಜನರನ್ನು ಕಾಪಾಡುವವನು; ಕುಗ್ಗಿದವನಾದ ನನ್ನನ್ನು ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನು ಅಸಹಾಯಕರನ್ನು ಕಾಪಾಡುವನು. ನಾನು ಅಸಹಾಯಕನಾಗಿದ್ದಾಗ ಯೆಹೋವನು ನನ್ನನ್ನು ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯೆಹೋವ ದೇವರು ಸರಳ ಹೃದಯದವರನ್ನು ಕಾಪಾಡುತ್ತಾರೆ; ನಾನು ಕೊರತೆಯಲ್ಲಿದ್ದಾಗ, ಅವರು ನನ್ನನ್ನು ರಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 116:6
11 ತಿಳಿವುಗಳ ಹೋಲಿಕೆ  

ಕುಗ್ಗಿ ಹೋಗಿರುವೆ, ನನ್ನ ಕೂಗಿಗೆ ಪ್ರಭು ಕಿವಿಗೊಡು I ಬಲಿಷ್ಠ ಹಿಂಸಾತ್ಮಕರಿಂದ ನನ್ನನು ಪಾರುಮಾಡು II


ಪ್ರಭುವಿನ ಆಜ್ಞೆ ಪರಿಪೂರ್ಣ; ಜೀವನಕದು ನವಚೇತನ I ನಂಬಲರ್ಹ; ಪ್ರಭುವಿನ ಶಾಸನ ಮುಗ್ದರಿಗದು ಸುಜ್ಞಾನ II


ಆ ಸಮಯದಲ್ಲಿ ಯೇಸುಸ್ವಾಮಿ, “ಪಿತನೇ, ಪರಲೋಕ ಭೂಲೋಕಗಳ ಒಡೆಯನೇ, ಜ್ಞಾನಿಗಳಿಗೂ ಮೇಧಾವಿಗಳಿಗೂ ಈ ವಿಷಯಗಳನ್ನು ಮರೆಮಾಡಿ ಮಕ್ಕಳಂಥವರಿಗೆ ನೀವು ಶ್ರುತಪಡಿಸಿದ್ದೀರಿ; ಇದಕ್ಕಾಗಿ ನಿಮ್ಮನ್ನು ವಂದಿಸುತ್ತೇನೆ.


ಹೊರಿಸಬೇಡ ಪೂರ್ವಿಕರ ತಪ್ಪುಗಳನು ನಮ್ಮ ಮೇಲೆ I ಉರಿಸಂಕಟದಲ್ಲಿರುವೆವು, ತೋರೆಮಗೆ ಕರುಣೆಯನೀಗಲೆ II


ನಿರ್ದೋಷ, ನಿಷ್ಕಪಟ ನಡತೆ ನನಗೆ ರಕ್ಷೆ I ನೀನೆ ಪ್ರಭು ನನಗಿರುವ ದೃಢ ನಿರೀಕ್ಷೆ II


ಅಲ್ಲಿರುವುದೊಂದು ರಾಜಮಾರ್ಗ ಅದೆನಿಸಿಕೊಳ್ಳುವುದು ಪವಿತ್ರಮಾರ್ಗ ನಡೆಯನು ಅದರೊಳು ಪಾಪಾತ್ಮನು; ಅದಾಗುವುದು ಜನರಿಗೆ ಮೀಸಲು ದಾರಿತಪ್ಪನು ಅಲ್ಲಿ ನಡೆಯುವ ಮೂಢನು.


ದಾಸ್ಯದಲ್ಲಿರುವವರೇ, ಎಲ್ಲಾ ವಿಷಯಗಳಲ್ಲೂ ನಿಮ್ಮ ನಿಮ್ಮ ಧಣಿಗಳಿಗೆ ವಿಧೇಯರಾಗಿರಿ. ಧಣಿಗಳನ್ನು ಮೆಚ್ಚಿಸುವ ಸಲುವಾಗಿ ಮುಖದಾಕ್ಷಿಣ್ಯದ ಸೇವೆಮಾಡಬೇಡಿ. ಪ್ರಭುವಿಗೆ ಭಯಪಟ್ಟು ಪ್ರಾಮಾಣಿಕತೆಯಿಂದ ದುಡಿಯಿರಿ.


ಆದರೂ ಹವ್ವಳು ಸರ್ಪದ ಕುಯುಕ್ತಿಗೆ ಸಿಕ್ಕಿ ಮೋಸಹೋದಂತೆ ನೀವೂ ಕೂಡ ಕ್ರಿಸ್ತಯೇಸುವಿನ ವಿಷಯದಲ್ಲಿ ಇರಬೇಕಾದ ಶುದ್ಧ ಪಾತಿವ್ರತ್ಯವನ್ನು ಕಳೆದುಕೊಂಡು ಕೆಟ್ಟುಹೋದೀರಿ ಎಂಬ ಭಯ ನನಗುಂಟು.


ಲೋಕದ ಜನರೊಡನೆ, ವಿಶೇಷವಾಗಿ ನಿಮ್ಮೊಡನೆ ವ್ಯವಹರಿಸುವಾಗ ನಾವು ಕೇವಲ ಮಾನವ ಜ್ಞಾನವನ್ನಾಶ್ರಯಿಸದೆ ದೇವರ ಅನುಗ್ರಹವನ್ನೇ ಆಶ್ರಯಿಸಿ ನಡೆದುಕೊಂಡೆವು. ದೇವದತ್ತವಾದ ನಿಷ್ಕಪಟ ಮನಸ್ಸಿನಿಂದಲೂ ಪರಿಶುದ್ಧತೆಯಿಂದಲೂ ವರ್ತಿಸಿದೆವು. ಇದಕ್ಕೆ ನಮ್ಮ ಮನಸ್ಸೇ ಸಾಕ್ಷಿ. ಇದಕ್ಕಾಗಿ ನಾವು ಹೆಮ್ಮೆಪಡುತ್ತೇವೆ.


ನೀವು ಶುಭಸಂದೇಶಕ್ಕೆ ವಿಧೇಯರಾಗಿ ನಡೆಯುವವರೆಂಬ ಸಮಾಚಾರ ಎಲ್ಲೆಲ್ಲೂ ಹರಡಿದೆ. ಇದರಿಂದಾಗಿ ನಾನು ನಿಮ್ಮ ವಿಷಯದಲ್ಲಿ ಸಂತೋಷಪಡುತ್ತೇನೆ. ನೀವು ಒಳ್ಳೆಯ ವಿಷಯದಲ್ಲಿ ಜಾಣರೂ ಕೆಟ್ಟ ವಿಷಯದಲ್ಲಿ ಕಳಂಕರಹಿತರೂ ಆಗಿರಬೇಕು.


ಪ್ರಭು ಪದೇಪದೇ ವಿಮುಕ್ತಗೊಳಿಸಿದನಾದರೂ I ಪರ್ಯಾಲೋಚಿಸದೆ ಪ್ರತಿಭಟನೆ ಮಾಡಿದರವರು I ಈ ಪರಿಯ ಅಕ್ರಮದ ನಿಮಿತ್ತ ಅವನತಿಗಿಳಿದರು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು