Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 116:7 - ಕನ್ನಡ ಸತ್ಯವೇದವು C.L. Bible (BSI)

7 ಹಿಂತಿರುಗು ನನ್ನ ಮನವೆ, ವಿಶ್ರಾಂತಿ ನೆಲೆಗೆ II ಮಹೋಪಕಾರಗಳನ್ನು ಎಸಗಿಹನು ಪ್ರಭು ನಿನಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನನ್ನ ಮನವೇ, ನಿನ್ನ ವಿಶ್ರಾಂತಿಯ ನೆಲೆಗೆ ತಿರುಗು. ಯೆಹೋವನು ನಿನಗೆ ಮಹೋಪಕಾರಗಳನ್ನು ಮಾಡಿದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನನ್ನ ಮನವೇ, ನಿನ್ನ ವಿಶ್ರಾಂತಿಯ ನೆಲೆಗೆ ತಿರುಗು. ಯೆಹೋವನು ನಿನಗೆ ಮಹೋಪಕಾರಗಳನ್ನು ಮಾಡಿದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನನ್ನ ಆತ್ಮವೇ, ವಿಶ್ರಮಿಸಿಕೊ! ಯೆಹೋವನು ನಿನ್ನನ್ನು ಕಾಪಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನನ್ನ ಮನವೇ, ನೀನು ವಿಶ್ರಾಂತಿಯಿಂದಿರು; ಏಕೆಂದರೆ ಯೆಹೋವ ದೇವರು ನಿನಗೆ ಉಪಕಾರಿಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 116:7
8 ತಿಳಿವುಗಳ ಹೋಲಿಕೆ  

ಪ್ರಭು ಮಾಡಿದ ಮಹೋಪಕಾರಗಳಿಗಾಗಿ I ಹಾಡುವೆ ಗೀತವನು ಮನಃಪೂರ್ವಕವಾಗಿ II


“ನನ್ನ ದಾಸ ಯಕೋಬನೇ, ಅಂಜಬೇಡ! ಇಸ್ರಯೇಲೇ, ಭಯಪಡಬೇಡ” ಎನ್ನುತ್ತಾರೆ ಸರ್ವೇಶ್ವರ. “ದೂರ ನಾಡಿನಿಂದ ನಿನ್ನನ್ನು ಮುಕ್ತನನ್ನಾಗಿಸುವೆನು ನಿನ್ನ ಸಂತಾನ ಸೆರೆಹೋದ ಸೀಮೆಯಿಂದ ನಿನ್ನನ್ನು ಉದ್ಧರಿಸುವೆನು. ಹಿಂದಿರುಗಿ, ಹಾಯಾಗಿ ನೆಮ್ಮದಿಯಿಂದಿರುವುದು ಯಕೋಬು ಯಾರಿಂದಲೂ ಅದನ್ನು ಹೆದರಿಸಲಾಗದು.


ಸರ್ವೇಶ್ವರ ಸ್ವಾಮಿ ತಮ್ಮ ಜನರಿಗೆ : “ನೀವು ದಾರಿಗಳು ಕೂಡುವ ಸ್ಥಳಗಳಲ್ಲಿ ನಿಂತು ನೋಡಿ. ಸನಾತನ ಮಾರ್ಗಗಳು ಯಾವುವು? ಸನ್ಮಾರ್ಗ ಎಲ್ಲಿದೆ? ಎಂದು ವಿಚಾರಿಸಿರಿ. ಅದರಲ್ಲೆ ಮುನ್ನಡೆಯಿರಿ. ಆಗ ನಿಮಗೆ ಮನನೆಮ್ಮದಿ ದೊರಕುವುದು.” ಆದರೆ ಆ ಜನರು : “ಇಲ್ಲ, ನಾವು ಅದರಲ್ಲಿ ನಡೆಯುವುದೇ ಇಲ್ಲ” ಎಂದರು.


ನಿನ್ನ ನುಡಿಯ ಕೇಳಿ ಬಾಳುವಂತೆ I ತೋರು ದಾಸನೆನಗೆ ಪ್ರಸನ್ನತೆ II


ಎಂತಲೆ ಸೇರರಿವರು ನನ್ನ ವಿಶ್ರಾಂತಿ ನೆಲೆ I ಎಂದು ಸಿಟ್ಟಿನಿಂದ ಕೆರಳಿ ನಾ ಶಪಥಮಾಡಿದೆ II


ಅವಳು ತನ್ನ ನಲ್ಲರನ್ನು ಹಿಂದಟ್ಟಿ ಹೋದರೂ ಅವರನ್ನು ಸಂಧಿಸಲಾರಳು; ಅವರನ್ನು ಹುಡುಕಿದರೂ ಕಂಡುಹಿಡಿಯಲಾರಳು. ಆಗ ಅವಳು: ‘ನನ್ನನ್ನು ಮದುವೆಯಾದ ಪತಿಯ ಬಳಿಗೆ ಹಿಂತಿರುಗುವೆನು. ಈಗಿನ ಸ್ಥಿತಿಗಿಂತ ಆಗಿನ ಸ್ಥಿತಿಯೇ ಉತ್ತಮವಾಗಿತ್ತು’ ಎಂದುಕೊಳ್ಳುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು