Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 116:8 - ಕನ್ನಡ ಸತ್ಯವೇದವು C.L. Bible (BSI)

8 ತಪ್ಪಿಸಿಹನು ಮರಣಕೆ ನಾನೀಡಾಗದಂತೆ I ಸಂತೈಸಿಹನು ಕಂಬನಿಯ ನಾ ಸುರಿಸದಂತೆ I ಕಾಪಾಡಿಹನು ಕಾಲೆಡವಿ ನಾ ಬೀಳದಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನೇ, ನಾನು ಜೀವಲೋಕದಲ್ಲಿದ್ದು ನಿನಗೆ ನೀತಿಯುಳ್ಳವನಾಗಿ ನಡೆದುಕೊಳ್ಳಬೇಕೆಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನೇ, ನಾನು ಜೀವಲೋಕದಲ್ಲಿದ್ದು ನಿನಗೆ ನಡೆದುಕೊಳ್ಳಬೇಕೆಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನೇ, ನೀನು ನನ್ನ ಆತ್ಮವನ್ನು ಮರಣದಿಂದ ರಕ್ಷಿಸಿದೆ. ನೀನು ನನ್ನ ಕಣ್ಣೀರನ್ನು ನಿಲ್ಲಿಸಿದೆ; ಬೀಳದಂತೆ ನನ್ನನ್ನು ಕಾಪಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಏಕೆಂದರೆ ಯೆಹೋವ ದೇವರೇ, ನೀವು ನನ್ನನ್ನು ಮರಣಕ್ಕೂ, ನನ್ನ ಕಣ್ಣುಗಳನ್ನು ಕಣ್ಣೀರಿಗೂ, ನನ್ನ ಪಾದಗಳನ್ನು ಬೀಳದಂತೆಯೂ ತಪ್ಪಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 116:8
10 ತಿಳಿವುಗಳ ಹೋಲಿಕೆ  

ಒರಸುವನಾತ ಅವರ ಕಂಬನಿಯನೆಲ್ಲಾ ಇರದಿನ್ನು ಸಾವುನೋವು ಅವರಿಗೆಲ್ಲಾ; ಇರವು ಶೋಕ ದುಃಖಗಳಾವುವು ಮರೆಯಾಗಿ ಹೋದವು ಹಿಂದಿನದೆಲ್ಲವು.”


ನೀನೆನಗೆ ತೋರಿಸಿರುವ ಕರುಣೆ ಮಹತ್ತರವಾದುದಯ್ಯಾ I ಪಾತಾಳದಿಂದ ನನ್ನ ಪ್ರಾಣವನು ಉಳಿಸಿದೆಯಯ್ಯಾ II


ನಿಂತಿಹನು ಕುರಿಮರಿಯಾದಾತನು ಸಿಂಹಾಸನದ ನಡುವೆ ಕಾಯುವನು ಅವರುಗಳನು ಕುರುಬನಂತೆ ನಡೆಸುವನು ಅವರನು ಜೀವಜಲದ ಒರತೆಗಳ ಬಳಿಗೆ ದೇವನೊರಸುವನು ಅವರ ಕಂಬನಿಗಳನು ಬಿಡದೆ', “ ಎಂದು ನನಗೆ ತಿಳಿಸಿದನು.


ಮರಣವನ್ನು ಶಾಶ್ವತವಾಗಿ ನಿರ್ನಾಮಮಾಡುವರು. ಸರ್ವೇಶ್ವರ ಸ್ವಾಮಿ ಎಲ್ಲರ ಕಣ್ಣೀರನ್ನು ಒರೆಸಿಬಿಡುವರು. ತಮ್ಮ ಪ್ರಜೆಗಾದ ಅವಮಾನವನ್ನು ಜಗದಿಂದಲೇ ತೊಲಗಿಸಿಬಿಡುವರು. ಸರ್ವೇಶ್ವರ ಸ್ವಾಮಿಯೇ ಇಂತೆಂದು ನುಡಿದಿದ್ದಾರೆ.


“ನೀನು ಹೋಗಿ ಹಿಜ್ಕೀಯನಿಗೆ ಹೀಗೆಂದು ತಿಳಿಸು : ‘ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನು ನೋಡಿದ್ದೇನೆ; ಇಗೋ, ನಿನ್ನ ಆಯುಷ್ಯಕ್ಕೆ ಇನ್ನೂ ಹದಿನೈದು ವರ್ಷಗಳನ್ನು ಸೇರಿಸುತ್ತೇನೆ.


ನನ್ನ ಕಾಲು ಜಾರಿಹೋಯಿತು ಎನ್ನುವುದರೊಳಗೆ I ನಿನ್ನ ಅಚಲ ಪ್ರೀತಿ, ಪ್ರಭು ನೆರವಾಯಿತೆನಗೆ II


ನನ್ನನ್ನಾದರೊ ಸ್ವಾಗತಿಸುವನು ದೇವನು I ಪಾತಾಳದ ಹಿಡಿತದಿಂದ ಬಿಡಿಸುವನು II


ಬಿದ್ದರೂ ಅವನೆದ್ದೇ ತೀರುವನು I ಪ್ರಭು ಅವನಿಗೆ ಊರುಗೋಲಾಗಿಹನು II


ಇವರು ಆ ಊರೊಳಗಿಂದ ಬರುತ್ತಿದ್ದ ಒಬ್ಬ ವ್ಯಕ್ತಿಯನ್ನು ಕಂಡು, “ದಯಮಾಡಿ, ಪಟ್ಟಣದೊಳಗೆ ನುಗ್ಗಬಹುದಾದ ದಾರಿಯನ್ನು ನಮಗೆ ತೋರಿಸಿಕೊಡು; ನಾವು ನಿನಗೆ ಒಳ್ಳೆಯದನ್ನೇ ಮಾಡುತ್ತೇವೆ,” ಎಂದರು. ಅವನು ಅವರಿಗೆ ಆ ದಾರಿಯನ್ನು ತೋರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು