Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 116:9 - ಕನ್ನಡ ಸತ್ಯವೇದವು C.L. Bible (BSI)

9 ಎಂದೇ ನಡೆವೆನು ನಾನು ಪ್ರಭುವಿನ ಕಣ್ಮುಂದೆ I ಅಂತೆಯೇ ಬಾಳುವೆ ಜೀವಲೋಕದೊಳಿದ್ದೇ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀನು ನನ್ನ ಪ್ರಾಣವನ್ನು ಮರಣದಿಂದ ತಪ್ಪಿಸಿ, ಕಣ್ಣೀರನ್ನು ನಿಲ್ಲಿಸಿ, ನನ್ನ ಪಾದಗಳನ್ನು ಎಡವದಂತೆ ಕಾದಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀನು ನನ್ನ ಪ್ರಾಣವನ್ನು ಮರಣಕ್ಕೆ ತಪ್ಪಿಸಿ ಕಣ್ಣೀರನ್ನು ನಿಲ್ಲಿಸಿ ನನ್ನ ಪಾದಗಳನ್ನು ಎಡವದಂತೆ ಕಾದಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಜೀವಿಸುವವರ ನಾಡಿನಲ್ಲಿ ನಾನು ಯೆಹೋವನ ಸೇವೆಯನ್ನು ಮುಂದುವರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದ್ದರಿಂದ ಜೀವಿತರ ಲೋಕದಲ್ಲಿ ಯೆಹೋವ ದೇವರ ಮುಂದೆ ನಡೆದುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 116:9
9 ತಿಳಿವುಗಳ ಹೋಲಿಕೆ  

ಪ್ರಭುವಿನೊಳಿತನು ನಾ ಕಾಣುವೆ ಜೀವಲೋಕದೊಳು I ನಾನಿಟ್ಟಿರುವೆ ನಂಬಿಕೆ ನಿರೀಕ್ಷೆ ಅದರೊಳು II


ಹೀಗೆ ಜೀವಮಾನವೆಲ್ಲ ನಾವು ಆತನ ಸೇವೆ ಮಾಡುವಂತಾಯಿತು ನಿರ್ಭೀತರಾಗಿ I ಆತನ ಸನ್ನಿಧಿಯಲ್ಲಿ ಬಾಳುವಂತಾಯಿತು ಪುನೀತರಾಗಿ, ಸದ್ಭಕ್ತರಾಗಿ II


ಅಬ್ರಾಮನಿಗೆ ತೊಂಬತ್ತೊಂಬತ್ತು ವರ್ಷಗಳಾಗಿದ್ದಾಗ, ಸರ್ವೇಶ್ವರ ದರ್ಶನವಿತ್ತು ಇಂತೆಂದರು: “ನಾನು ಸರ್ವಶಕ್ತ ಸರ್ವೇಶ್ವರ. ನೀನು ನನ್ನ ಸಮ್ಮುಖದಲ್ಲಿದ್ದು ನಿರ್ದೋಷಿಯಾಗಿ ನಡೆದುಕೊಳ್ಳಬೇಕು.


ಎಳೆದೊಯ್ದರು ಬಂಧನದಿಂದ, ನ್ಯಾಯಸ್ಥಾನದಿಂದ ಹೌದು, ದೂರಮಾಡಿದರು ಆತನನು ಜೀವಲೋಕದಿಂದ. ವಧೆಯಾದನಾತ ನಮ್ಮ ಜನರ ಪಾಪದ ದೆಸೆಯಿಂದ. ಆದರೂ ಸಮಕಾಲೀನವರಾರು ಮರುಗಲಿಲ್ಲ ಕನಿಕರದಿಂದ.


ದೇವರ ಸಾನ್ನಿಧ್ಯದಲಿ ಆತನು ಸದಾ ಸಾಮ್ರಾಜ್ಯವಾಳಲಿ I ನಿನ್ನಯ ಪ್ರೀತಿ ಸತ್ಯತೆಗಳು ಆತನಿಗೆ ಬೆಂಗಾವಲಾಗಿರಲಿ II


ನೀನು ನಿನ್ನ ತಂದೆ ದಾವೀದನಂತೆ ಪೂರ್ಣಮನಸ್ಸಿನಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡು, ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಗೊಳ್ಳುತ್ತಾ ಬಂದರೆ, ಇಸ್ರಯೇಲರಲ್ಲಿ ನಿನ್ನ ಸಿಂಹಾಸನವನ್ನು ಸದಾ ಸ್ಥಿರಪಡಿಸುವೆನು;


ಇಸ್ರಯೇಲ್ ದೇವರಾದ ಸರ್ವೇಶ್ವರಾ, ನೀವು ನನ್ನ ತಂದೆ ದಾವೀದನಿಗೆ, ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಮಾರ್ಗದಲ್ಲೇ ನಡೆದುಕೊಳ್ಳುವುದಾದರೆ, ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕೂತುಕೊಳ್ಳುವುದು ತಪ್ಪದು; ಎಂಬುದಾಗಿ ವಾಗ್ದಾನಮಾಡಿದ್ದೀರಿ; ಅದನ್ನು ನೆರವೇರಿಸಿರಿ.


ಇದಲ್ಲದೆ ಸರ್ವೇಶ್ವರ, ‘ನಿನ್ನ ಸಂತಾನದವರು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ನನಗೆ ನಂಬಿಗಸ್ತರಾಗಿ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿದ್ದರೆ ಅವರು ಇಸ್ರಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದು ತಪ್ಪದು,’ ಎಂದು ನನಗೆ ಮಾಡಿದ ವಾಗ್ದಾನವನ್ನು ಅವರು ಸ್ಥಿರಪಡಿಸುವರು.


ದಂಪತಿಗಳಿಬ್ಬರೂ ದೇವರ ದೃಷ್ಟಿಯಲ್ಲಿ ಭಯಭಕ್ತಿಯುಳ್ಳವರಾಗಿದ್ದರು; ಸರ್ವೇಶ್ವರನ ವಿಧಿನಿಯಮಗಳನ್ನು ನಿಷ್ಠೆಯಿಂದ ಪಾಲಿಸಿಕೊಂಡು ಬರುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು