Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 117:2 - ಕನ್ನಡ ಸತ್ಯವೇದವು C.L. Bible (BSI)

2 ನಮ್ಮ ಮೇಲೆ ಆತನಿಗಿರುವ ಪ್ರೀತಿ ಅಚಲ I ಆತನ ಸತ್ಯಪರತೆ ಇರುವುದು ಅನಂತ ಕಾಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನ ಕೃಪೆಯು ನಮ್ಮ ಮೇಲೆ ಅಪಾರವಾಗಿದೆ; ಯೆಹೋವನ ಸತ್ಯತೆಯು ಸದಾ ಇರುವುದು. ಯೆಹೋವನಿಗೆ ಸ್ತೋತ್ರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನ ಕೃಪೆಯು ನಮ್ಮ ಮೇಲೆ ಅಪಾರವಾಗಿದೆ; ಯೆಹೋವನ ಸತ್ಯತೆಯು ಸದಾ ಇರುವದು. ಯಾಹುವಿಗೆ ಸ್ತೋತ್ರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆತನ ಪ್ರೀತಿಯು ನಮ್ಮ ಮೇಲೆ ಅಪಾರವಾಗಿದೆ. ಆತನ ನಂಬಿಗಸ್ತಿಕೆಯು ಶಾಶ್ವತವಾದದ್ದು. ಯೆಹೋವನಿಗೆ ಸ್ತೋತ್ರವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೇವರ ಪ್ರೀತಿಯು ನಮ್ಮ ಮೇಲೆ ಅಪಾರವಾಗಿದೆ; ಯೆಹೋವ ದೇವರ ಸತ್ಯತೆಯು ಯುಗಯುಗಕ್ಕೂ ಇರುತ್ತದೆ. ಯೆಹೋವ ದೇವರನ್ನು ಸ್ತುತಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 117:2
11 ತಿಳಿವುಗಳ ಹೋಲಿಕೆ  

ಸರ್ವೇಶ್ವರಾ, ನೀನೆನ್ನ ದೇವನು, ಏಕೆನೆ ನೀನು ಸತ್ಯಸ್ವರೂಪನು, ನಿಷ್ಟಾವಂತನು, ಆದಿ ಯೋಜನೆಗಳನು ಪೂರೈಸುವವನು, ಅದ್ಭುತಕಾರ್ಯಗಳನು ಎಸಗಿದಂತವನು. ಘನಪಡಿಸುವೆ ನಾ ನಿನ್ನನು, ಸ್ತುತಿಸುವೆನು ನಿನ್ನ ನಾಮ ಮಹಿಮೆಯನು.


ಆಕಾಶಮಂಡಲವು ಭೂಮಿಯಿಂದೆಷ್ಟೋ ಉನ್ನತ I ದೈವಭಯವುಳ್ಳವರಿಗೆ ಆತನ ಕೃಪೆ ಅಷ್ಟೇ ಸನ್ನುತ II


ಪ್ರಭು, ಕೀರ್ತಿಸುವೆನು ಸದಾ ನಿನ್ನಚಲ ಪ್ರೀತಿಯನು I ಸಾರುವೆನು ತಲತಲಾಂತರಕು ನಿನ್ನ ಸತ್ಯತೆಯನು II


ಕ್ರಿಸ್ತಯೇಸುವೇ ಜಲ ಮತ್ತು ರಕ್ತದಿಂದ ಸಾಕ್ಷಿಹೊಂದಿದವರು. ಜಲದಿಂದ ಮಾತ್ರವಲ್ಲ ಜಲ ಮತ್ತು ರಕ್ತದಿಂದ ಸಾಕ್ಷಿಹೊಂದಿದವರು.


ಪ್ರೀತಿಯೂ ಸತ್ಯವೂ ಒಂದನ್ನೊಂದು ಕೂಡಿರುವುವು I ನೀತಿಯೂ ಶಾಂತಿಯೂ ಒಂದನ್ನೊಂದು ಚುಂಬಿಸುವುವು II


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ಪುರಾತನ ಕಾಲದಲ್ಲಿ ನಮ್ಮ ಪಿತೃಗಳಿಗೆ ಪ್ರಮಾಣಮಾಡಿದಂತೆ ಯಕೋಬ ವಂಶದವರಿಗೆ ನಂಬಿಕಸ್ಥರಾಗಿರಿ. ಅಬ್ರಹಾಮನ ವಂಶದವರಿಗೆ ಪ್ರೀತಿಪರರಾಗಿರಿ.


ಭೂಮ್ಯಾಕಾಶ, ಸಾಗರ, ಚರಾಚರಗಳನು ನಿರ್ಮಿಸಿದವ ಆತನೆ I ಕೊಟ್ಟ ವಾಗ್ದಾನಗಳನು ತಪ್ಪದೆ ನೆರವೇರಿಸುವವ ಆತನೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು