Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 118:19 - ಕನ್ನಡ ಸತ್ಯವೇದವು C.L. Bible (BSI)

19 ತೆರೆಯಿರಿ ಎನಗೆ ನೀತಿದ್ವಾರಗಳನು I ಒಳನುಗ್ಗಿ ಹೊಗಳುವೆನು ಪ್ರಭುವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀತಿದ್ವಾರಗಳನ್ನು ತೆರೆಯಿರಿ; ನಾನು ಒಳಗೆ ಪ್ರವೇಶಿಸಿ ಯೆಹೋವನನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀತಿದ್ವಾರಗಳನ್ನು ತೆರೆಯಿರಿ; ಒಳಗೆ ಪ್ರವೇಶಿಸಿ ಯಾಹುವನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀತಿಯ ಬಾಗಿಲುಗಳೇ, ನನಗೋಸ್ಕರ ತೆರೆಯಿರಿ, ನಾನು ಒಳಗೆ ಬಂದು ಯೆಹೋವನನ್ನು ಆರಾಧಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನೀತಿಯ ಬಾಗಿಲುಗಳನ್ನು ನನಗೆ ತೆರೆಯಿರಿ; ಅವುಗಳೊಳಗೆ ಪ್ರವೇಶಿಸಿ ಯೆಹೋವ ದೇವರಿಗೆ ಧನ್ಯವಾದ ಸಲ್ಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 118:19
10 ತಿಳಿವುಗಳ ಹೋಲಿಕೆ  

ತೆರೆಯಿರಿ ನಗರ ದ್ವಾರಗಳನು, ಪ್ರವೇಶಿಸಲಿ ವಿಶ್ವಾಸವುಳ್ಳ ಸಜ್ಜನರು.


“ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರವಾಗಿಟ್ಟುಕೊಂಡಿರುವವರು ಭಾಗ್ಯವಂತರು. ಜೀವವೃಕ್ಷದ ಫಲವನ್ನು ಸವಿಯುವ ಹಕ್ಕು ಅವರಿಗಿರುತ್ತದೆ. ಹೆಬ್ಬಾಗಿಲಿನ ಮೂಲಕ ಅವರು ಆ ನಗರವನ್ನು ಸೇರುವರು.


ಆತನ ಗೃಹದ್ವಾರವನು ಪ್ರವೇಶಿಸಿ ಧನ್ಯವಾದದೊಂದಿಗೆ I ಆತನ ಆವರಣದಲಿ ನಿಲ್ಲಿರಿ ಸ್ತುತಿಸ್ತೋತ್ರಗಳೊಂದಿಗೆ I ಆತನ ನಾಮವನು ಕೊಂಡಾಡಿ ಉಪಕಾರಸ್ಮರಣೆಯೊಂದಿಗೆ II


ಹಿಜ್ಕೀಯನು, “ನಾನು ಗುಣಹೊಂದಿ ಸರ್ವೇಶ್ವರ ಸ್ವಾಮಿಯ ಆಲಯವನ್ನು ಸೇರುವೆನು ಎಂಬುದಕ್ಕೆ ಗುರುತೇನು?” ಎಂದು ಕೇಳಿದನು.


ಸರ್ವೇಶ್ವರಾ, ನೀ ನನ್ನ ಉದ್ಧಾರಕ ಹೊಗಳುವೆ ನಿನ್ನ ನಾ ತಂತಿವಾದ್ಯ ಸಮೇತ ದಿನನಿತ್ಯ, ನಿನ್ನಾಲಯದೊಳು, ಜೀವವಿರುವ ತನಕ.


ಆತನ ಸನ್ನಿಧಿ ಸೇರೋಣ ಕೃತಜ್ಞತಾಸ್ತುತಿಯೊಂದಿಗೆ I ಜಯಜಯಕಾರ ಮಾಡೋಣ ಕೀರ್ತನೆಗಳಿಂದಾತನಿಗೆ II


ದಿವ್ಯಧಾಮದಲ್ಲಿಹ ಆ ದೇವ I ತಬ್ಬಲಿಗೆ ತಂದೆ, ವಿಧವೆಗಾಶ್ರಯ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು