Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:102 - ಕನ್ನಡ ಸತ್ಯವೇದವು C.L. Bible (BSI)

102 ತಪ್ಪಿಸಿಕೊಳ್ಳಲಿಲ್ಲ ನಾ ನಿನ್ನ ವಿಧಿಗಳಿಂದ I ನೀನೇ ನನಗದರ ಬೋಧನೆ ಮಾಡಿದ್ದರಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

102 ನಾನು ನಿನ್ನ ವಿಧಿಗಳಿಂದ ಸ್ವಲ್ಪವೂ ತಪ್ಪಿಹೋಗಲಿಲ್ಲ, ಏಕೆಂದರೆ ನೀನು ನನಗೆ ಬೋಧಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

102 ನಾನು ನಿನ್ನ ವಿಧಿಗಳಿಂದ ಸ್ವಲ್ಪವೂ ತಪ್ಪಿಹೋಗಲಿಲ್ಲ; ಯಾಕಂದರೆ ನೀನು ನನ್ನನ್ನು ಬೋಧಿಸಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

102 ನೀನೇ ನನ್ನ ಉಪಾಧ್ಯಾಯ. ಆದ್ದರಿಂದ ನಿನ್ನ ಕಟ್ಟಳೆಗಳಿಗೆ ವಿಧೇಯನಾಗಿಯೇ ಇರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

102 ನಿಮ್ಮ ನಿಯಮಗಳಿಂದ ನಾನು ತಪ್ಪಿಹೋಗಲಿಲ್ಲ, ಏಕೆಂದರೆ ನೀವೇ ನನಗೆ ಉಪದೇಶಿಸಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:102
8 ತಿಳಿವುಗಳ ಹೋಲಿಕೆ  

ದೇವರನು ತೊರೆದು ದುರುಳನಾಗದೆ I ನಾನನುಸರಿಸಿದೆ ಪ್ರಭುವಿನ ಮಾರ್ಗವನೆ II


ನೀವು ಕ್ರಿಸ್ತಯೇಸುವಿನಿಂದ ಅಭಿಷಿಕ್ತರಾಗಿದ್ದೀರಿ. ಆ ಅಭಿಷೇಕವು ನಿಮ್ಮಲ್ಲಿ ನೆಲೆಸಿದೆ. ಆದ್ದರಿಂದ ಯಾರೂ ನಿಮಗೆ ಬೋಧಿಸುವ ಅವಶ್ಯಕತೆಯಿಲ್ಲ. ಆ ಅಭಿಷೇಕವೇ ನಿಮಗೆ ಎಲ್ಲವನ್ನೂ ಬೋಧಿಸುತ್ತಾ ಬರುತ್ತದೆ. ಈ ಬೋಧನೆ ಸತ್ಯವಾದುದು, ಮಿಥ್ಯವಾದುದಲ್ಲ. ಅದರ ಪ್ರಕಾರವೇ ಕ್ರಿಸ್ತಯೇಸುವಿನಲ್ಲಿ ನೆಲೆಸಿರಿ.


ಇನ್ನೊಂದು ಕಾರಣಕ್ಕಾಗಿಯೂ ನಾವು ಸತತವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನೀವು ದೇವರ ಸಂದೇಶವನ್ನು ನಮ್ಮಿಂದ ಕೇಳಿದಾಗ, ಅದನ್ನು ಮನುಷ್ಯರ ಮಾತುಗಳೆಂದು ಪರಿಗಣಿಸದೆ, ದೇವರ ವಾಕ್ಯವೆಂದೇ ಅರಿತು ಅಂಗೀಕರಿಸಿದಿರಿ. ವಿಶ್ವಾಸಿಗಳಾದ ನಿಮ್ಮಲ್ಲಿ ಚೈತನ್ಯಪೂರ್ಣವಾಗಿರುವ ಈ ವಾಕ್ಯವು, ನಿಜವಾಗಿಯೂ ದೇವರ ಸಂದೇಶವೇ ಸರಿ.


ಇಂತಿರಲು ಮಗನೇ, ನನಗೆ ಕಿವಿಗೊಡು, ನನ್ನ ಮಾತುಗಳನ್ನು ಬಿಟ್ಟು ಅಗಲದಿರು.


ಈ ಕ್ರಿಸ್ತವಿರೋಧಿಗಳು ನಮ್ಮವರಾಗಿರಲಿಲ್ಲ. ಆದಕಾರಣ, ಅವರು ನಮ್ಮನ್ನು ತೊರೆದರು. ಅವರು ನಮ್ಮವರೇ ಆಗಿದ್ದರೆ, ನಮ್ಮೊಂದಿಗೇ ಇರುತ್ತಿದ್ದರು. ಆದರೆ ಅವರು ನಮ್ಮನ್ನು ತೊರೆದು ಹೋದರು. ಇದರಿಂದ ಕ್ರೈಸ್ತರೆನಿಸಿಕೊಳ್ಳುವವರೆಲ್ಲರೂ ನಮ್ಮವರಲ್ಲ ಎಂಬುದು ಸ್ಪಷ್ಟವಾಗಿ ಕಂಡುಬರುತ್ತದೆ.


ನಾನು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡುವೆನು. ಹೀಗೆ ನಾನು ಅವರಿಗೆ ಒಳಿತನ್ನು ಮಾಡುವುದನ್ನು ಬಿಡೆನು. ನನ್ನ ಬಗ್ಗೆ ಅವರ ಹೃದಯದಲ್ಲಿ ಭಯಭಕ್ತಿ ನೆಲಸುವಂತೆ ಮಾಡುವೆನು. ಆಗ ಅವರು ನನ್ನನ್ನು ಬಿಟ್ಟು ಅಗಲಿಹೋಗರು.


ದೇವರ ಶಕ್ತಿ ಉನ್ನತೋನ್ನತ ಯಾರಿಹನು ಅವನಂಥ ಬೋಧಕ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು