Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:103 - ಕನ್ನಡ ಸತ್ಯವೇದವು C.L. Bible (BSI)

103 ನಿನ್ನ ನುಡಿ ಎನಿತೊ ರುಚಿ ನನ್ನ ನಾಲಿಗೆಗೆ I ಜೇನುತುಪ್ಪಕ್ಕಿಂತ ಸಿಹಿ ನನ್ನ ಬಾಯಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

103 ನಿನ್ನ ನುಡಿಗಳು ನನ್ನ ನಾಲಿಗೆಗೆ ಎಷ್ಟೋ ರುಚಿಯಾಗಿವೆ, ಅವು ನನ್ನ ಬಾಯಿಗೆ ಜೇನು ತುಪ್ಪಕ್ಕಿಂತಲೂ ಸಿಹಿಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

103 ನಿನ್ನ ನುಡಿಗಳು ನನ್ನ ನಾಲಿಗೆಗೆ ಎಷ್ಟೋ ರುಚಿಯಾಗಿವೆ; ಅವು ನನ್ನ ಬಾಯಿಗೆ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

103 ನಿನ್ನ ನುಡಿಗಳು ನನ್ನ ಬಾಯಲ್ಲಿ ಜೇನಿಗಿಂತಲೂ ಸಿಹಿಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

103 ನಿಮ್ಮ ಮಾತುಗಳು ನನ್ನ ರುಚಿಗೆ ಎಷ್ಟೋ ಸಿಹಿಯಾಗಿವೆ! ಅವು ನನ್ನ ಬಾಯಿಗೆ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:103
12 ತಿಳಿವುಗಳ ಹೋಲಿಕೆ  

ಜ್ಞಾನವೆಂಬುದು ಹವಳಕ್ಕಿಂತ ಶ್ರೇಷ್ಠ, ಇಷ್ಟವಸ್ತುಗಳಾವುವು ಅದಕ್ಕೆ ಸಾಟಿಯಿಲ್ಲ.


ಅಪೇಕ್ಷಣೀಯವಾದುವವು ಚಿನ್ನ ಅಪರಂಜಿಗಿಂತ I ಅತಿಮಧುರವಾದುವು ಅಪ್ಪಟ ಜೇನುತುಪ್ಪಕ್ಕಿಂತ II


ಮೃಷ್ಟಾನ್ನ ತಿಂದಂತೆ ಎನ್ನ ಮನ ಸಂತೃಪ್ತ I ಸಂಭ್ರಮದಿಂದ ನಿನ್ನ ಹೊಗಳುವುದು ಬಾಯ್ತುಂಬ II


ನಾ ಬಿಟ್ಟಗಲಲಿಲ್ಲ ಆತನ ತುಟಿಯಿಂದ ಹೊರಟ ಆಜ್ಞೆಗಳನು ನನ್ನೆದೆಯಲಿ ನಿಧಿಯಾಗಿಟ್ಟೆ ಆತನ ಬಾಯಿಂದ ಬಂದ ಮಾತುಗಳನ್ನು.


ಆಕೆಯ ದಾರಿ ಸುಖಕರ, ಆಕೆಯ ಮಾರ್ಗ ಕ್ಷೇಮಕರ.


ನನ್ನ ಪ್ರಿಯಳೇ, ನನ್ನ ವಧುವೇ, ಇದೋ ನಾ ಬಂದಿರುವೆ ನನ್ನ ತೋಟದೊಳಗೆ ರಕ್ತಬೋಳ ಸುಗಂಧದ್ರವ್ಯಗಳನ್ನು ಕೂಡಿಸಿರುವೆ. ಜೇನುಗೂಡನ್ನೂ ಜೇನುತುಪ್ಪವನ್ನೂ ತಿಂದಿರುವೆ ದ್ರಾಕ್ಷಾರಸವನ್ನೂ ಹಾಲನ್ನೂ ಕುಡಿದಿರುವೆ. ಮಿತ್ರರೇ, ತಿನ್ನಿರಿ; ಪ್ರಿಯರೇ, ಕುಡಿಯಿರಿ ತೃಪ್ತಿಯಾಗುವಷ್ಟು ಪಾನಮಾಡಿರಿ. ನಲ್ಲೆ :


ಜಾಗೃತಗೊಳ್ಳುವನು ನಿನ್ನ ದಾಸನು ಅವುಗಳಿಂದ I ಸಂಭಾವಿತನಾಗುವನು ಅವುಗಳ ಪಾಲನೆಯಿಂದ II


ಜ್ಞಾನ ಉದಯಿಸುವುದು ನಿನ್ನ ಹೃದಯದೊಳಗೆ, ತಿಳುವಳಿಕೆ ಬೆಳಗುವುದು ನಿನ್ನ ಆತ್ಮದೊಳಗೆ.


ತಿನ್ನಿಸುತ್ತಾ, “ನರಪುತ್ರನೇ, ನಾನು ಕೊಡುವ ಈ ಸುರುಳಿಯನ್ನು ತಿಂದು ಹೊಟ್ಟೆ ತುಂಬಿಸಿಕೋ,” ಎಂದರು. ನಾನು ಅದನ್ನು ತಿಂದುಬಿಟ್ಟೆ; ಅದು ನನ್ನ ಬಾಯಿಗೆ ಜೇನಿನಂತೆ ಸಿಹಿಯಾಗಿತ್ತು.


ಅಂತೆಯೇ, ನಾನು ಆ ಚಿಕ್ಕ ಸುರುಳಿಯನ್ನು ದೇವದೂತನ ಕೈಯಿಂದ ತೆಗೆದುಕೊಂಡು ತಿಂದೆ. ಅದು ನನ್ನ ಬಾಯಲ್ಲಿ ಜೇನುತುಪ್ಪದಂತೆ ಸಿಹಿಯಾಗಿತ್ತು. ಆದರೆ ಅದನ್ನು ತಿಂದಮೇಲೆ ನನ್ನ ಹೊಟ್ಟೆಯೆಲ್ಲಾ ಕಹಿಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು