Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:104 - ಕನ್ನಡ ಸತ್ಯವೇದವು C.L. Bible (BSI)

104 ವಿವೇಕಿಯಾದೆನು ನಿನ್ನ ನಿಯಮಗಳ ಮೂಲಕ I ದ್ವೇಷಿಸುತಿಹೆನು ಪ್ರತಿಯೊಂದು ಮಿಥ್ಯಾ ಮಾರ್ಗ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

104 ನಿನ್ನ ನಿಯಮಗಳ ಮೂಲಕ ವಿವೇಕಿಯಾದೆನು, ಸುಳ್ಳು ಮಾರ್ಗವನ್ನೆಲ್ಲಾ ನಾನು ದ್ವೇಷಿಸುತ್ತೇನೆ. ನೂನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

104 ನಿನ್ನ ನೇಮಗಳ ಮೂಲಕ ವಿವೇಕಿಯಾದೆನು; ವಿುಥ್ಯಾಮಾರ್ಗವನ್ನೆಲ್ಲಾ ಹಗೆಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

104 ನಿನ್ನ ಉಪದೇಶಗಳು ನನ್ನನ್ನು ಜ್ಞಾನಿಯನ್ನಾಗಿ ಮಾಡುತ್ತವೆ, ಆದ್ದರಿಂದ ನಾನು ದುರುಪದೇಶಗಳನ್ನು ದ್ವೇಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

104 ನಾನು ನಿಮ್ಮ ಸೂತ್ರಗಳಿಂದ ತಿಳುವಳಿಕೆಯನ್ನು ಸಂಪಾದಿಸಿಕೊಂಡಿದ್ದೇನೆ; ಆದ್ದರಿಂದ ಪ್ರತಿಯೊಂದು ದುರ್ಮಾರ್ಗವನ್ನೂ ದ್ವೇಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:104
15 ತಿಳಿವುಗಳ ಹೋಲಿಕೆ  

ನ್ಯಾಯವಾಗಿವೆ ನಿನ್ನ ನಿಯಮಗಳೆಲ್ಲ I ನನಗೆ ಹಗೆ ಮಿಥ್ಯಮಾರ್ಗಗಳೆಲ್ಲ II


ದೈವಭಯದಿಂದ ಹುಟ್ಟುತ್ತದೆ ಪಾಪದ್ವೇಷ; ಗರ್ವ, ಅಹಂಕಾರ, ದುರಾಚಾರ, ಕಪಟ ಭಾಷಣ ನನಗೆ ಅಸಹ್ಯ.


ಒಂದು ಮಾರ್ಗ ಒಬ್ಬನಿಗೆ ನೇರವೆಂದು ತೋರಬಹುದು; ಕೊನೆಗೆ ಅದು ಮರಣಕ್ಕೊಯ್ಯುವ ಹಾದಿಯಾಗಬಹುದು.


ನಿನ್ನಾಜ್ಞೆಗಳು ಸದಾ ನನ್ನೊಂದಿಗಿರುವುದರಿಂದ I ನಾನಧಿಕ ಬುದ್ಧಿವಂತ ನನ್ನ ಶತ್ರುಗಳಿಗಿಂತ II


ಕೇಡನು ಹಗೆಮಾಡುವವನಿಗೆ ಪ್ರಭು ಒಲಿವನು I ತನ್ನ ಭಕ್ತರ ಪ್ರಾಣವನು ಕಾಪಾಡುವನು I ದುಷ್ಟರ ಕೈಯಿಂದವರನು ಬಿಡಿಸುವನು II


ನಿಮ್ಮ ಪ್ರೀತಿ ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿರಿ. ಒಳ್ಳೆಯದನ್ನು ಕೈಬಿಡದಿರಿ.


ನಿನ್ನ ನಿಯಮಗಳನು ಕೈಗೊಂಡುದರಿಂದ I ನಾನಧಿಕ ವಿವೇಕಿ ಗುರುಹಿರಿಯರಿಗಿಂತ II


ನೀಚಕಾರ್ಯಗಳನು ನಾ ವೀಕ್ಷಿಸಲಾರೆ I ಅಧರ್ಮಿಗಳ ನಡೆಯನು ನಾ ಸಹಿಸಲಾರೆ I ಅಂಥವರ ಸಹವಾಸವನು ನಾ ತಾಳಲಾರೆ II


“ಕಿರಿದಾದ ಬಾಗಿಲಿನಿಂದಲೇ ಒಳಕ್ಕೆ ಹೋಗಿರಿ. ಏಕೆಂದರೆ ವಿನಾಶಕ್ಕೆ ಒಯ್ಯುವ ಬಾಗಿಲು ಹಿರಿದು; ಅದರ ಮಾರ್ಗ ಸರಾಗ; ಅದನ್ನು ಹಿಡಿಯುವವರು ಅನೇಕರು.


ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ. ನ್ಯಾಯಮಂಟಪದಲ್ಲಿ ಸತ್ಯಕ್ಕೆ ಜಯವಾಗುವಂತೆ ನೋಡಿಕೊಳ್ಳಿರಿ. ಆಗ ಬಹುಶಃ ಸೇನಾಧೀಶ್ವರ ದೇವರಾದ ಸರ್ವೇಶ್ವರ ಅಳಿದುಳಿದ ಜೋಸೆಫನ ವಂಶಕ್ಕೆ ಕರುಣೆ ತೋರಿಯಾರು.


ಆಲೋಚಿಸುತ್ತಿಹನು ಅಕ್ರಮವನು ಹಾಸಿಗೆಯಿಂದಲೆ I ಹೇಸನು ದುಷ್ಕೃತ್ಯಕ್ಕೆ, ಮುನ್ನುಗ್ಗುವನು ದುರ್ಮಾರ್ಗದಲೆ II


ವಯೋವೃದ್ಧರು ಮಾತ್ರ ಜ್ಞಾನಿಗಳಲ್ಲ ಮುದುಕರು ಮಾತ್ರ ನ್ಯಾಯಬಲ್ಲವರಲ್ಲ.


ನೀಡೆನಗೆ ನಿನ್ನ ಶಾಸ್ತ್ರದ ಅರಿವನು I ಪೂರ್ಣಮನದಿಂದ ಆಚರಿಸುವೆನದನು II


ಹಿಡಿಸದು ಎನಗೆ ಮಿಥ್ಯವಾದುದು, ಅದು ಎನಗೆ ಅಸಹ್ಯ I ನಿನ್ನ ಧರ್ಮಶಾಸ್ತ್ರವಾದರೋ ನನಗೆ ಸುಪ್ರಿಯ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು