Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:106 - ಕನ್ನಡ ಸತ್ಯವೇದವು C.L. Bible (BSI)

106 ನಡೆದುಕೊಳ್ಳುವೆನು ಶಪಥ ಮಾಡಿರುವಂತೆ I ನಿನ್ನ ನೀತಿವಿಧಿಗಳನು ಪಾಲಿಪೆನು ಅದರಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

106 ನಿನ್ನ ನೀತಿವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣಮಾಡಿದ್ದೇನೆ, ಅದನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

106 ನಿನ್ನ ನೀತಿವಿಧಿಗಳನ್ನು ಅನುಸರಿಸುವೆನೆಂದು ಪ್ರಮಾಣಮಾಡಿದ್ದೇನೆ; ಅದನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

106 ನಿನ್ನ ವಿಧಿನಿಯಮಗಳು ಒಳ್ಳೆಯವೇ. ಅವುಗಳಿಗೆ ವಿಧೇಯನಾಗಿರುವುದಾಗಿ ಪ್ರಮಾಣಮಾಡಿದ್ದೇನೆ, ಅದನ್ನು ನೆರವೇರಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

106 ನಿಮ್ಮ ನೀತಿಯ ನಿಯಮಗಳನ್ನು ಪಾಲಿಸುವೆನೆಂದು ನಾನು ಒಂದು ಶಪಥಮಾಡಿದ್ದೇನೆ; ಅದನ್ನು ನಾನು ದೃಢಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:106
12 ತಿಳಿವುಗಳ ಹೋಲಿಕೆ  

ಮುಖಂಡರಾದ ತಮ್ಮ ಸಹೋದರರನ್ನು ಸೇರಿಕೊಂಡು, ದೇವರ ದಾಸ ಮೋಶೆಯ ಮುಖಾಂತರ ಕೊಡಲಾದ ದೇವರ ಧರ್ಮೋಪದೇಶವನ್ನು ತಾವು ಅನುಸರಿಸಿ, ತಮ್ಮ ಸರ್ವೇಶ್ವರನಾದ ದೇವರ ಎಲ್ಲ ಆಜ್ಞಾನಿಯಮವಿಧಿಗಳನ್ನು ಕೈಗೊಂಡು ನಡೆಯುವುದಾಗಿ, ಆಣೆ ಇಟ್ಟು ಹೀಗೆ ಪ್ರಮಾಣ ಮಾಡಿದರು:


ನಿನ್ನ ಮುಂದೆ ಜೀವನ್ ಜ್ಯೋತಿಯಲಿ ನಾ ನಡೆಯಮಾಡಿರುವೆ I ಮೃತ್ಯುವಿನಿಂದೆನ್ನ ಪ್ರಾಣವನು ನೀ ಮುಕ್ತಗೊಳಿಸಿರುವೆ I ಜಾರಿ ಬೀಳದಂತೆನ್ನ ಪಾದಗಳನು ಕಾದಿರಿಸಿರುವೆ II ಎಂದೇ ನಿನಗೆ ಹೊತ್ತ ಹರಕೆಗಳನು ಸಲ್ಲಿಸುವೆ I ಕೃತಜ್ಞತಾಬಲಿಗಳನು ದೇವಾ, ನಿನಗರ್ಪಿಸುವೆ II


ಇದನ್ನು, ನಾವು ನಿರೀಕ್ಷಿಸಲೇ ಇಲ್ಲ! ಮೊಟ್ಟಮೊದಲು ಅವರು ತಮ್ಮನ್ನೇ ಪ್ರಭುವಿಗೆ ಸಮರ್ಪಿಸಿದರು. ಅನಂತರ ದೈವಚಿತ್ತಕ್ಕೆ ಅನುಗುಣವಾಗಿ ನಮಗೂ ತಮ್ಮನ್ನು ಒಪ್ಪಿಸಿಕೊಟ್ಟರು.


ಕಂಬದ ಬಳಿಯಲ್ಲಿ ನಿಂತು ತಾನು ಸರ್ವೇಶ್ವರನ ಮಾರ್ಗದಲ್ಲಿ ನಡೆಯುವುದಾಗಿಯೂ ಆತನ ಆಜ್ಞಾನಿಯಮವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವುದಾಗಿಯೂ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲ ವಾಕ್ಯಗಳನ್ನು ನೆರವೇರಿಸುವುದಾಗಿಯೂ ಸರ್ವೇಶ್ವರನಿಗೆ ಪ್ರಮಾಣ ಮಾಡಿದನು. ಎಲ್ಲಾ ಜನರೂ ಹಾಗೆಯೇ ಪ್ರಮಾಣ ಮಾಡಿದರು.


ತೊಲಗು ನನ್ನಿಂದ ದುರುಳ ಜನಾಂಗವೆ I ದೈವಾಜ್ಞೆಗಳನು ನಾನು ಪಾಲಿಸುವೆ II


“ಸುಳ್ಳಾಣೆಯಿಡಬೇಡ; ದೇವರಿಗೆ ಆಣೆಯಿಟ್ಟು ವಾಗ್ದಾನಮಾಡಿದಂತೆ ನಡೆದುಕೊಳ್ಳಲೇಬೇಕು’ ಎಂದು ಪೂರ್ವಿಕರಿಗೆ ಹೇಳಿದ್ದು ನಿಮಗೆ ತಿಳಿದೇ ಇದೆ.


ಅದಕ್ಕೆ ಜನರು, “ಸರ್ವೇಶ್ವರನನ್ನು ಬಿಟ್ಟು ಅನ್ಯದೇವತೆಗಳಿಗೆ ಸೇವೆಸಲ್ಲಿಸುವುದು ನಮ್ಮಿಂದ ದೂರವಿರಲಿ.


ತನ್ನ ಸ್ಥಳದಲ್ಲೇ ನಿಂತು, ತಾನು ಸರ್ವೇಶ್ವರನ ಮಾರ್ಗದಲ್ಲಿ ನಡೆಯುವುದಾಗಿ ಆತನ ಆಜ್ಞಾನಿಯಮ ವಿಧಿಗಳನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಪ್ರಾಣದಿಂದಲೂ ಕೈಕೊಳ್ಳುವುದಾಗಿ ಮತ್ತು ನಿಬಂಧನ ಗ್ರಂಥದಲ್ಲಿ ಬರೆದಿರುವ ಎಲ್ಲ ವಾಕ್ಯಗಳನ್ನು ನೆರವೇರಿಸುವುದಾಗಿ ಸರ್ವೇಶ್ವರನಿಗೆ ಪ್ರಮಾಣಮಾಡಿದನು.


‘ದೇಶನಿವಾಸಿಗಳಿಗೆ ನಮ್ಮ ಹೆಣ್ಣುಗಳನ್ನು ಕೊಡುವುದಿಲ್ಲ; ನಮ್ಮ ಮಕ್ಕಳಿಗೆ ಅವರಿಂದ ಹೆಣ್ಣು ತೆಗೆದುಕೊಳ್ಳುವುದಿಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು