Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:108 - ಕನ್ನಡ ಸತ್ಯವೇದವು C.L. Bible (BSI)

108 ಸ್ವೀಕರಿಸು ನಾನು ಉಸುರುವ ಸ್ತುತಿಯರ್ಪಣೆಯನು I ಪ್ರಭೂ, ನನಗೆ ಕಲಿಸು ನಿನ್ನ ವಿಧಿನಿಯಮಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

108 ಯೆಹೋವನೇ, ನನ್ನ ಮನಃಪೂರ್ವಕವಾದ ಸ್ತುತಿ ಸಮರ್ಪಣೆಗಳನ್ನು, ದಯವಿಟ್ಟು ಅಂಗೀಕರಿಸು, ನಿನ್ನ ವಿಧಿಗಳನ್ನು ನನಗೆ ಕಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

108 ಯೆಹೋವನೇ, ನನ್ನ ಮನಃಪೂರ್ವಕವಾದ ಸ್ತುತಿ ಸಮರ್ಪಣೆಗಳನ್ನು ದಯವಿಟ್ಟು ಅಂಗೀಕರಿಸು; ನಿನ್ನ ವಿಧಿಗಳನ್ನು ನನಗೆ ಕಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

108 ಯೆಹೋವನೇ, ನನ್ನ ಸ್ತೋತ್ರವನ್ನು ಸ್ವೀಕರಿಸು. ನಿನ್ನ ವಿಧಿನಿಯಮಗಳನ್ನು ನನಗೆ ಉಪದೇಶಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

108 ಯೆಹೋವ ದೇವರೇ, ನನ್ನ ಬಾಯಿಂದ ಸಿದ್ಧಮನಸ್ಸಿನ ಸ್ತೋತ್ರಗಳನ್ನು ಸ್ವೀಕರಿಸಿರಿ, ನಿಮ್ಮ ನಿಯಮಗಳನ್ನು ನನಗೆ ಬೋಧಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:108
9 ತಿಳಿವುಗಳ ಹೋಲಿಕೆ  

ಆದ್ದರಿಂದ, ಪ್ರಭುವಾದ ಯೇಸುಕ್ರಿಸ್ತರನ್ನು ಮುಕ್ತಕಂಠದಿಂದ ಗುಣಗಾನಮಾಡುತ್ತಾ ಅವರ ಮುಖಾಂತರ ಸ್ತುತಿಯೆಂಬ ಬಲಿಯನ್ನು ದೇವರಿಗೆ ಸತತವಾಗಿ ಸಮರ್ಪಿಸೋಣ.


ಆದುದರಿಂದ ಪಶ್ಚಾತ್ತಾಪದ ಮಾತುಗಳೊಂದಿಗೆ ದೇವರಿಗೆ ಅಭಿಮುಖವಾಗಿ, “ಪ್ರಭುವೇ, ನಮ್ಮ ಅಪರಾಧವನ್ನು ತೊಡೆದುಹಾಕು. ನಮ್ಮಲ್ಲಿ ಒಳಿತಾದುದನ್ನೇ ಅಂಗೀಕರಿಸು. ನಿನಗೆ ಸ್ತುತಿಬಲಿಯನ್ನು ಸಮರ್ಪಿಸುವೆವು.


ಸ್ತುತಿ ಸಲ್ಲಲಿ ಪ್ರಭು ನಿನಗೆ I ನಿನ್ನ ಆಜ್ಞೆಗಳನು ಕಲಿಸು ಎನಗೆ II


ನನ್ನ ಮೊರೆ ಸೇರಲಿ ಪ್ರಭು, ನಿನ್ನ ಸನ್ನಿಧಿಯ I ನಿನ್ನ ವಾಕ್ಯಾನುಸಾರ ನೀಡು ಜ್ಞಾನೋದಯ II


‘ನೀವು ಕಾಣಿಕೆಯಾಗಿ ಆಗಲಿ, ಹರಕೆಯನ್ನು ತೀರಿಸುವುದಕ್ಕಾಗಿ ಆಗಲಿ ಮಾಡುವ ದಹನಬಲಿ, ಧಾನ್ಯನೈವೇದ್ಯ, ಪಾನಾರ್ಪಣೆ, ಸಮಾಧಾನಬಲಿ ಇವುಗಳನ್ನು ಮಾತ್ರವಲ್ಲದೆ ಹಬ್ಬದ ದಿನಗಳಲ್ಲಿ ಮೇಲೆ ಸೂಚಿಸಿರುವ ಬಲಿಗಳನ್ನು ಹೆಚ್ಚಾಗಿ ಮಾಡಬೇಕು’.”


ತರುವುದು ನಿನ್ನ ವಾಕ್ಯೋಪದೇಶ I ಸರಳ ಜನರಿಗೆ ಜ್ಞಾನ ಪ್ರಕಾಶ II


ನನ್ನ ಗತನಡತೆಯನು ಕೇಳಿ ಸದುತ್ತರಿಸಿದೆಯಯ್ಯಾ I ನಿನ್ನ ನಿಬಂಧನೆಗಳನೀಗ ನನಗೆ ಉಪದೇಶಿಸಯ್ಯಾ II


ಪೂರ್ವದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ಲನ ಮಗ ಕೋರೆ ಎಂಬ ಲೇವಿಯನು, ಜನರು ಸ್ವಂತ ಇಚ್ಛೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನಾಗಿದ್ದನು. ಅದು ಮಾತ್ರವಲ್ಲ, ಸರ್ವೇಶ್ವರನಿಗೆ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧ ವಸ್ತು, ಇವುಗಳನ್ನು ಹಂಚಿಕೊಡುವವನೂ ಆಗಿದ್ದನು.


ಸುತ್ತಲು ನೆರೆದಿಹ ಶತ್ರುಗಳ ನಡುವೆ ತಲೆಯೆತ್ತಿ ನಡೆವೆನು I ದೇವಾಲಯದೊಳು ಜಯಜಯ ಘೋಷದೊಡನೆ ಬಲಿಗಳನರ್ಪಿಸುವೆನು I ಪ್ರಭುವಿಗೆ ಹಾಡುವೆನು, ವಾದ್ಯ ನುಡಿಸುತ ಕೊಂಡಾಡುವೆನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು