Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:109 - ಕನ್ನಡ ಸತ್ಯವೇದವು C.L. Bible (BSI)

109 ಕೈಯಲಿ ಜೀವ ಹಿಡಿದು ಕಳೆಯುತಿರುವೆ ಕಾಲವೆಲ್ಲ I ಆದರೂ ಪ್ರಭು, ನಾ ಧರ್ಮಶಾಸ್ತ್ರವನು ಮರೆತಿಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

109 ನನ್ನ ಜೀವವು ಅಪಾಯದಲ್ಲಿದ್ದೆ, ಆದರೂ ನಿನ್ನ ಧರ್ಮಶಾಸ್ತ್ರವನ್ನು ಮರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

109 ನಾನು ಯಾವಾಗಲೂ ಕೈಯಲ್ಲಿ ಜೀವ ಹಿಡಿದಿದ್ದೇನೆ; ಆದರೂ ನಿನ್ನ ಧರ್ಮಶಾಸ್ತ್ರವನ್ನು ಮರೆಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

109 ನನ್ನ ಪ್ರಾಣವು ಯಾವಾಗಲೂ ಅಪಾಯದಲ್ಲಿದೆ. ಆದರೂ ನಾನು ನಿನ್ನ ಉಪದೇಶಗಳನ್ನು ಮರೆತುಬಿಟ್ಟಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

109 ನನ್ನ ಜೀವನ ಆಗಾಗ ಅಪಾಯದಲ್ಲಿದೆ, ಆದಾಗ್ಯೂ ನಾನು ನಿಮ್ಮ ನಿಯಮವನ್ನು ಮರೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:109
11 ತಿಳಿವುಗಳ ಹೋಲಿಕೆ  

ನೀವು ಸಹಾಯ ಮಾಡುವುದಿಲ್ಲ ಎಂದು ತಿಳಿದು ಪ್ರಾಣವನ್ನು ಕೈಯಲ್ಲಿ ಹಿಡಿದು ಅಮ್ಮೋನಿಯರೊಡನೆ ಯುದ್ಧಕ್ಕೆ ಹೋದೆ; ಸರ್ವೇಶ್ವರ ಅವರನ್ನು ನನ್ನ ಕೈಗೆ ಒಪ್ಪಿಸಿದರು. ಹೀಗಿರಲು, ನೀವು ಈಗ ಬಂದು ನನ್ನೊಡನೆ ಕಲಹಮಾಡುವುದೇಕೆ?” ಎಂದು ಉತ್ತರಕೊಟ್ಟನು.


ಹೌದು ಸಹೋದರರೇ, ಪ್ರತಿದಿನವೂ ನಾನು ಸಾವಿನ ದವಡೆಯಲ್ಲಿದ್ದೇನೆ, ನಮ್ಮ ಪ್ರಭು ಯೇಸುಕ್ರಿಸ್ತರಲ್ಲಿ ನಿಮ್ಮ ಬಗ್ಗೆ ನನಗಿರುವ ಹೆಮ್ಮೆಯಿಂದ ಇದನ್ನು ಪ್ರಮಾಣವಾಗಿ ಹೇಳುತ್ತಿದ್ದೇನೆ.


ಪ್ರಾಣವನ್ನು ನಾನು ಕಚ್ಚಿಕೊಂಡಿದ್ದೇನೆ ಬಾಯಲಿ ಜೀವವನ್ನು ನಾನು ಹಿಡಿದುಕೊಂಡಿದ್ದೇನೆ ಕೈಯಲಿ.


ಅವರು ಕ್ರಿಸ್ತಯೇಸುವಿನ ದಾಸರೋ? (ನಾನು ಬುದ್ಧಿ ಕೆಟ್ಟವನಂತೆಯೇ ಮಾತನಾಡುತ್ತಿದ್ದೇನೆ) ಅವರಿಗಿಂತ ನಾನು ದಾಸಾನುದಾಸನು. ಅವರಿಗಿಂತ ಹೆಚ್ಚಾಗಿ ಸೇವೆಮಾಡಿದ್ದೇನೆ; ಅವರಿಗಿಂತ ಹೆಚ್ಚಾಗಿ ಸೆರೆಮನೆಗಳ ವಾಸವನ್ನು ಅನುಭವಿಸಿದ್ದೇನೆ; ಮಿತಿಮೀರಿ ಏಟುಪೆಟ್ಟುಗಳನ್ನು ತಿಂದಿದ್ದೇನೆ; ಅನೇಕ ಸಲ ಸಾವಿನ ದವಡೆಗೆ ಸಿಲುಕಿಕೊಂಡಿದ್ದೇನೆ.


ಪವಿತ್ರಗ್ರಂಥದಲ್ಲಿ ಹೀಗೆ ಬರೆಯಲಾಗಿದೆ: ದಿನವಿಡೀ ನಿಮಗೋಸ್ಕರವೇ ಸಾವಿಗೀಡಾಗುತಿಹೆವು ನಾವು ವಧ್ಯಸ್ಥಾನಕ್ಕೆ ಒಯ್ದ ಕುರಿಗಳಂತೆ ಪರಿಗಣಿತರಾಗುತಿಹೆವು ನಾವು.”


ಸ್ಥಾಪಿಸಿರುವೆ ನಿನ್ನ ಕಟ್ಟಳೆಗಳನು ಶಾಶ್ವತವಾಗಿ I ಮೊದಲಿಂದಲೇ ಇದನರಿತೆ ನಾನವುಗಳ ಮೂಲಕವಾಗಿ II


ನನಗಾಧಾರವಾಗಿರು ಸುರಕ್ಷಿತನಾಗಿರುವೆ I ನಿನ್ನಾ ನಿಬಂಧನೆಗಳಿಗೆ ಸದಾ ಗಮನ ಕೊಡುವೆ II


ಬೆಂಕಿಗೆ ಬಿಸಾಡಿದ ಒಣ ಬುದ್ಧಲಿಯಂತಾದೆ I ಆದರೂ ನಿನ್ನ ನಿಬಂಧನೆಗಳನ್ನು ಮರೆಯದಿದ್ದೆ II


ಅದಕ್ಕೆ ದಾವೀದನು, “ನಿನಗೆ ನಾನು ಪ್ರೀತಿಪಾತ್ರನೆಂದು ನಿನ್ನ ತಂದೆಗೆ ಗೊತ್ತಿದೆ. ಆದುದರಿಂದ ಇದನ್ನು ಯೋನಾತಾನನಿಗೆ ತಿಳಿಸಿದರೆ ಅವನಿಗೆ ದುಃಖವಾಗುವುದೆಂದು ಮರೆಮಾಡುತ್ತಾರೆ. ನಿನ್ನ ಜೀವದಾಣೆ, ಸರ್ವೇಶ್ವರನ ಆಣೆ, ನನಗೂ ಮರಣಕ್ಕೂ ಒಂದು ಗೇಣು ಮಾತ್ರ ಅಂತರ,” ಎಂದು ಖಂಡಿತವಾಗಿ ಹೇಳಿದನು.


ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಆ ಫಿಲಿಷ್ಟಿಯರನ್ನು ಕೊಂದನು; ಸರ್ವೇಶ್ವರ ಇಸ್ರಯೇಲರಿಗೆ ಮಹಾ ಜಯವನ್ನುಂಟುಮಾಡಿದರು. ನೀವೂ ಅದನ್ನು ನೋಡಿ ಸಂತೋಷಪಟ್ಟಿರಿ; ದಾವೀದನನ್ನು ನಿಷ್ಕಾರಣವಾಗಿ ಕೊಂದು ನಿರ್ದೋಷಿಯ ರಕ್ತವನ್ನು ಸುರಿಸಿ ಅಪರಾಧಕ್ಕೆ ನೀವೇಕೆ ಗುರಿ ಆಗುತ್ತೀರಿ?” ಎಂದನು.


ನಿನ್ನ ನಿಯಮಗಳ ನೆನೆದು ನಲಿವೆನಯ್ಯಾ I ನಿನ್ನ ವಾಕ್ಯವನು ಮರೆಯಲಾರೆನಯ್ಯಾ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು