Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:110 - ಕನ್ನಡ ಸತ್ಯವೇದವು C.L. Bible (BSI)

110 ಒಡ್ಡಿಹರು ಎನಗೆ ಆ ದುರುಳ ಜನರು ಬಲೆಯನು I ಆದರೂ ಮೀರಿಲ್ಲ ನಾನು ನಿನ್ನ ನಿಯಮಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

110 ದುಷ್ಟರು ಬಲೆಯೊಡ್ಡಿದ್ದಾರೆ, ನಾನು ನಿನ್ನ ನಿಯಮಗಳಿಂದ ತಪ್ಪಿಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

110 ದುಷ್ಟರು ಬಲೆಯೊಡ್ಡಿದ್ದಾರೆ; ನಾನು ನಿನ್ನ ನೇಮಗಳನ್ನು ತಪ್ಪಿಹೋಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

110 ದುಷ್ಟರು ನನಗೆ ಬಲೆಯೊಡ್ಡಿದ್ದಾರೆ. ನಾನಾದರೋ ನಿನ್ನ ವಿಧಿನಿಯಮಗಳಿಗೆ ಅವಿಧೇಯನಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

110 ದುಷ್ಟರು ನನಗೆ ಬಲೆಯೊಡ್ಡಿದ್ದಾರೆ; ಆದರೂ ನಾನು ನಿಮ್ಮ ಸೂತ್ರಗಳನ್ನು ಬಿಟ್ಟು ತಪ್ಪಿಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:110
16 ತಿಳಿವುಗಳ ಹೋಲಿಕೆ  

ಕಾಪಾಡು ಕೆಡುಕರೊಡ್ಡಿದ ಉರುಲಿನಿಂದ I ತಪ್ಪಿಸೆನ್ನನು ಅವರಿಟ್ಟ ಬೋನಿನಿಂದ II


ಒಡ್ಡಿದರು ಗರ್ವಿಗಳು ಗುಪ್ತವಾಗಿ I ಉರುಲನು, ಪಾಶಗಳನು ನನಗಾಗಿ I ಬಲೆಹಾಸಿದರು ದಾರಿಗೆ ಅಡ್ಡವಾಗಿ II


ಹೊಂಚುಹಾಕುತಿಹರು ದುರುಳರು ಸಂಹರಿಸಲೆನ್ನನು I ನಾನೋ ನಿನ್ನ ಕಟ್ಟಳೆಗಳನು ಲಕ್ಷಿಸುತ್ತಿರುವೆನು II


ಗುಂಡಿ ಅಗೆದಿಹರು ಎನಗೆ ಗರ್ವಿಷ್ಠರು I ಧರ್ಮಶಾಸ್ತ್ರ ಪಾಲಿಸದ ಆ ದುರುಳರು II


ತುಂಬುಹೃದಯದಿಂದ ಹಂಬಲಿಸುತ್ತಿರುವೆನಯ್ಯಾ I ನಿನ್ನಾಜ್ಞೆಯಿಂದ ನಾ ತಪ್ಪದಂತೆ ಕಾಯಯ್ಯಾ II


ಕಳ್ಳಕಾಕರ ಗುಂಪು ಫಕ್ಕನೆ ಅವರ ಮೇಲೆ ಬೀಳಲಿ. ಅವರ ಮನೆಮಠಗಳಿಂದ ಕಿರಿಚಾಟ ಕೇಳಿಬರಲಿ. ಅವರು ನನ್ನನ್ನು ಕೆಡವಲು ಗುಂಡಿಯನ್ನು ತೋಡಿದ್ದಾರೆ. ನನ್ನ ಕಾಲುಗಳಿಗೆ ಉರುಲನ್ನು ಗುಟ್ಟಾಗಿ ಒಡ್ಡಿದ್ದಾರೆ.


ಶಾಸನಕ್ಕೆ ರುಜುವಾದ ವಿಷಯ ದಾನಿಯೇಲನಿಗೆ ತಿಳಿಯಿತು. ಆತ ತನ್ನ ಮನೆಗೆ ಹೊರಟುಹೋದನು. ಅಲ್ಲಿ ತನ್ನ ಮಹಡಿಯ ಕೊಠಡಿಯಲ್ಲಿನ ಕಿಟಕಿಗಳು ಜೆರುಸಲೇಮಿನ ಕಡೆಗೆ ತೆರೆದಿದ್ದವು. ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಅಲ್ಲಿ ತನ್ನ ದೇವರಿಗೆ ಮೊಣಕಾಲೂರಿ ಪ್ರಾರ್ಥಿಸಿ ಸ್ತೋತ್ರ ಸಲ್ಲಿಸುತ್ತಿದ್ದನು.


ಅಳಿಸಿಹಾಕಲು ನೋಡಿದರು ಇಳೆಯಿಂದೆನ್ನನು I ಆದರು ಉಳಿಸಿಕೊಂಡೆನು ನಿನ್ನ ನಿಯಮಗಳನು II


ಹಾಸ್ಯ ಅಪಹಾಸ್ಯ ಮಾಡಿದರು ಗರ್ವಿಷ್ಠರೆನ್ನನು I ಆದರೂ ನಾ ಬಿಡಲಿಲ್ಲ ನಿನ್ನ ಧರ್ಮಶಾಸ್ತ್ರವನು II


ಶಾಪಗ್ರಸ್ತರು ನಿನ್ನ ಆಜ್ಞೆಗಳನು ಮೀರಿದವರು I ನಿನ್ನ ಧಿಕ್ಕಾರಕ್ಕೆ ಗುರಿಯಾಗುವರು ಆ ಗರ್ವಿಷ್ಠರು II


ನಾನಂತು ಕೇಳದಿದ್ದೆ ಕಿವುಡನಂತೆ I ಮರು ಉತ್ತರಿಸದೆ ಮೌನವಿದ್ದೆ ಮೂಕನಂತೆ II


ಸ್ಥಿರವಿದೆ ದೇವಾ, ಸುಸ್ಥಿರವಿದೆ ನನ್ನ ಮನ I ಹಾಡುತ ಪಾಡುತ ನಾ ರಚಿಸುವೆ ಗಾಯನ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು