Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:112 - ಕನ್ನಡ ಸತ್ಯವೇದವು C.L. Bible (BSI)

112 ಮನಸ್ಸುಮಾಡಿರುವೆ ಸದಾ ಕೈಗೊಂಡು ನಡೆಯಲು I ಜೀವಮಾನವೆಲ್ಲ ನಿನ್ನ ನಿಬಂಧನೆಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

112 ಕಡೆಯವರೆಗು ಯಾವಾಗಲೂ ನಿನ್ನ ನಿಬಂಧನೆಗಳನ್ನು ಕೈಗೊಳ್ಳುವುದಕ್ಕೆ ಮನಸ್ಸುಮಾಡಿದ್ದೇನೆ. ಸಾಮೆಕ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

112 ಕಡೇವರೆಗೂ ಯಾವಾಗಲೂ ನಿನ್ನ ನಿಬಂಧನೆಗಳನ್ನು ಕೈಕೊಳ್ಳುವದಕ್ಕೆ ಮನಸ್ಸುಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

112 ನಿನ್ನ ಕಟ್ಟಳೆಗಳಿಗೆಲ್ಲಾ ಯಾವಾಗಲೂ ವಿಧೇಯನಾಗಿರಲು ಮನಸ್ಸುಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

112 ನಿಮ್ಮ ತೀರ್ಪುಗಳನ್ನು ಕಡೆವರೆಗೂ ಪಾಲಿಸುವುದಕ್ಕೆ ನಾನು ನನ್ನ ಹೃದಯದಲ್ಲಿ ದೃಢಮಾಡಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:112
13 ತಿಳಿವುಗಳ ಹೋಲಿಕೆ  

ನಿನ್ನ ನಿಬಂಧನೆಯನು, ಪ್ರಭು, ಕಲಿಸೆನಗೆ I ಅದರಂತೆಯೇ ನಡೆಯುವೆನು ಕಡೆಯವರೆಗೆ II


ತಿರುಗಿಸೆನ್ನ ಮನವ ನಿನ್ನ ಕಟ್ಟಳೆಯ ಕಡೆ I ಲಾಭಲೋಭದತ್ತ ಅದು ಸರಿಯದಂತೆ ತಡೆ II


ಮಾಡು ನನ್ನ ಹೃದಯ ದುರಾಚಾರವನು ಮೆಚ್ಚದಂತೆ I ಕಾಪಾಡು ದುರ್ಜನರೊಡಗೂಡಿ ಕೇಡನು ಮಾಡದಂತೆ I ನೋಡು ದುರುಳರೌತಣಗಳಲಿ ನಾ ಪಾಲ್ಗೊಳ್ಳದಂತೆ II


ಸತತ ನಿನ್ನ ಧರ್ಮಶಾಸ್ತ್ರವನು ಕೈಗೊಳ್ಳುವೆ I ಯುಗಯುಗಾಂತರಕು ಅದನು ಪರಿಪಾಲಿಸುವೆ II


ನಮ್ಮ ಪೂರ್ವಜರಿಗೆ ಕೊಡಲಾದ ಆಜ್ಞಾನಿಯಮ ವಿಧಿಗಳನ್ನು ನಾವು ಕೈಗೊಂಡು, ದೈವಮಾರ್ಗದಲ್ಲಿ ನಡೆಯುವಂತೆ ನಮ್ಮ ಮನಸ್ಸನ್ನು ತಮ್ಮ ಕಡೆಗೆ ತಿರುಗಿಸಿಕೊಳ್ಳಲಿ.


ಆಗ ಯೆಹೋಶುವ, “ಹಾಗಾದರೆ ನಿಮ್ಮಲ್ಲಿರುವ ಅನ್ಯದೇವತೆಗಳನ್ನು ತೊರೆದುಬಿಟ್ಟು ಇಸ್ರಯೇಲಿನ ದೇವರಾದ ಸರ್ವೇಶ್ವರನ ಕಡೆಗೆ ನಿಮ್ಮ ಹೃನ್ಮನಗಳನ್ನು ತಿರುಗಿಸಿಕೊಳ್ಳಿ,” ಎಂದನು.


ಆದ್ದರಿಂದ ನೀವು ಸ್ವಸ್ಥಚಿತ್ತರಾಗಿರಿ. ನಿಮ್ಮ ಮನಸ್ಸು ಕಾರ್ಯೋನ್ಮುಖವಾಗಿರಲಿ. ಯೇಸುಕ್ರಿಸ್ತರು ಪ್ರತ್ಯಕ್ಷವಾಗುವಾಗ ನಿಮಗೆ ಲಭಿಸಲಿರುವ ಸೌಭಾಗ್ಯದಲ್ಲಿ ಪೂರ್ಣ ನಿರೀಕ್ಷೆ ಉಳ್ಳವರಾಗಿರಿ.


ಏಕೆಂದರೆ ದೈವಚಿತ್ತವನ್ನು ನೀವು ನೆರವೇರಿಸುವಂತೆ ಅವರೇ ನಿಮ್ಮಲ್ಲಿ ಸತ್ಪ್ರೇರಣೆಯನ್ನೂ ಸತ್ಫಲವನ್ನೂ ನೀಡುತ್ತಾರೆ.


ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.


ಆದರೂ ನೀವು ನಾಡಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದುಹಾಕಿದ್ದೀರಿ. ಸರ್ವೇಶ್ವರನ ಭಕ್ತಿ ನಿಮ್ಮಲ್ಲಿ ಬೇರೂರಿದೆ, ನಿಮ್ಮಲ್ಲಿ ಸುಶೀಲತೆ ಉಂಟೆಂದು ತಿಳಿದುಬಂದಿದೆ,” ಎಂಬುದಾಗಿ ಹೇಳಿದನು.


ಸರ್ವೇಶ್ವರನ ಧರ್ಮಶಾಸ್ತ್ರವನ್ನು ಅಭ್ಯಸಿಸಿ ಅನುಸರಿಸಲೂ ಇಸ್ರಯೇಲರಿಗೆ ಅದರ ವಿಧಿನಿಯಮಗಳನ್ನು ಕಲಿಸಲೂ ಅವನು ದೃಢಮನಸ್ಸು ಮಾಡಿಕೊಂಡಿದ್ದನು.


ಆತನ ವಿಧಿನಿಯಮಗಳನು ಅಲಕ್ಷ್ಯಮಾಡದೆ I ಆತನಾಜ್ಞೆಗಳನ್ನಿಟ್ಟೆ ಸದಾ ನನ್ನ ಕಣ್ಗಳ ಮುಂದೆ II


ಜ್ಞಾನದ ಕಡೆಗೆ ಕಿವಿಗೊಡು, ವಿವೇಕದ ಕಡೆಗೆ ಮನತಿರುಗಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು