Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:114 - ಕನ್ನಡ ಸತ್ಯವೇದವು C.L. Bible (BSI)

114 ನನ್ನಾಶ್ರಯವೂ ಕವಚವೂ ನೀನೇ I ನಿರೀಕ್ಷಿಸುತಿರುವೆ ನಿನ್ನ ವಾಕ್ಯವನೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

114 ನನ್ನ ಆಶ್ರಯವೂ, ಗುರಾಣಿಯೂ ನೀನೇ, ನಿನ್ನ ವಾಕ್ಯವನ್ನೇ ನಿರೀಕ್ಷಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

114 ನನ್ನ ಆಶ್ರಯವೂ ಗುರಾಣಿಯೂ ನೀನೇ; ನಿನ್ನ ವಾಕ್ಯವನ್ನೇ ನಿರೀಕ್ಷಿಸಿಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

114 ನನ್ನ ಆಶ್ರಯವೂ ಗುರಾಣಿಯೂ ನೀನೇ. ಯೆಹೋವನೇ, ನಿನ್ನ ವಾಕ್ಯದಲ್ಲಿ ಭರವಸವಿಟ್ಟಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

114 ನೀವೇ ನನ್ನ ಆಶ್ರಯವೂ, ಗುರಾಣಿಯೂ ಆಗಿದ್ದೀರಿ; ನಾನು ನನ್ನ ನಿರೀಕ್ಷೆಯನ್ನು ನಿಮ್ಮ ವಾಕ್ಯದಲ್ಲಿ ಇಟ್ಟುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:114
10 ತಿಳಿವುಗಳ ಹೋಲಿಕೆ  

ನೀನೆ ನನಗೆ ಮರೆಯು, ಆಪತ್ತಿನಲಾಸರೆಯು I ನನ್ನನು ಆವರಿಸುವ ಉದ್ಧಾರಕ ನಾದವು II


ನೀನಾದರೋ ಪ್ರಭು, ನನಗೆ ರಕ್ಷೆ, ವಿಜಯದಾತ I ನಾನು ತಲೆಯೆತ್ತಿ ನಡೆಯುವಂತೆ ಮಾಡುವಾತ II


ಪ್ರತಿಯೊಬ್ಬನೂ ಬಿರುಗಾಳಿಗೆ ತಡೆಯಂತೆ, ಬಿರುಮಳೆಗೆ ಬಿಡಾರದಂತೆ, ಮರುಭೂಮಿಯಲ್ಲಿ ಜಲಧಾರೆಯಂತೆ, ಬೆಂಗಾಡಿನಲ್ಲಿ ಭಾರಿಬಂಡೆಯ ನೆರಳಿನಂತೆ ಇರುವನು.


ಮನಗುಂದಿರುವೆ ನಾ ಮುಕ್ತಿಯ ಬಯಕೆಯಲೆ I ನಂಬಿಕೆಯನು ಇಟ್ಟಿರುವೆ ನಿನ್ನ ವಾಕ್ಯದಲೆ II


ನಿನ್ನಾ ವಾಕ್ಯದಲಿ ನಾನಿತ್ತ ನಿರೀಕ್ಷೆಯಿಂದ I ಭಯಭಕ್ತಿಯುಳ್ಳವನು ನೋಡಿ ಪಡೆದನು ಆನಂದ II


ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II


ಸ್ವರವೆತ್ತಿ ಎನ್ನ ಪ್ರಭುವಿಗೆ ನಾ ಮೊರೆಯಿಡುವೆನು I ಸಿರಿಶಿಖರದಿಂದಾತನು ಸದುತ್ತರ ನೀಡುವನು II


ತೆಗೆಯಬೇಡ ನನ್ನ ಬಾಯಿಂದ ಸತ್ಯವನು I ನಂಬಿಕೊಂಡಿರುವೆ ನಿನ್ನ ನ್ಯಾಯವಿಧಿಯನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು