Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 119:116 - ಕನ್ನಡ ಸತ್ಯವೇದವು C.L. Bible (BSI)

116 ನಿನ್ನ ನುಡಿಗನುಸಾರ ಉದ್ಧರಿಸು, ನಾ ಬದುಕುವೆ I ನಿರಾಶೆಗೊಳಿಸಬೇಡ ನಾ ನಿರೀಕ್ಷಿಸುತ್ತಿರುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

116 ನಿನ್ನ ನುಡಿಯ ಪ್ರಕಾರ ನನ್ನನ್ನು ಉದ್ಧಾರಮಾಡು, ಆಗ ಬದುಕುವೆನು. ನಾನು ನಿರೀಕ್ಷೆಯುಳ್ಳವನಾಗಿದ್ದೇನೆ, ನನ್ನನ್ನು ನಿರಾಶೆಪಡಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

116 ನಿನ್ನ ನುಡಿಯ ಪ್ರಕಾರ ನನ್ನನ್ನು ಉದ್ಧಾರಮಾಡು; ಆಗ ಬದುಕುವೆನು. ನಾನು ನಿರೀಕ್ಷೆಯುಳ್ಳವನಾಗಿದ್ದೇನೆ, ನನ್ನನ್ನು ನಿರಾಶೆಪಡಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

116 ನಿನ್ನ ವಾಗ್ದಾನಕ್ಕನುಸಾರವಾಗಿ ನನಗೆ ಸಹಾಯಮಾಡು, ಆಗ ನಾನು ಬದುಕಿಕೊಳ್ಳುವೆ. ನಾನು ನಿನ್ನಲ್ಲಿ ಭರವಸವಿಟ್ಟಿರುವೆ, ನನ್ನನ್ನು ನಿರಾಶೆಗೊಳಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

116 ನನ್ನ ದೇವರೇ, ನಿಮ್ಮ ವಾಕ್ಯದ ಪ್ರಕಾರ ನನ್ನನ್ನು ನೆಲೆಗೊಳಿಸಿರಿ, ಆಗ ನಾನು ಬದುಕುವೆನು; ನನ್ನ ನಿರೀಕ್ಷೆ ಮುರಿದುಹೋಗದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 119:116
16 ತಿಳಿವುಗಳ ಹೋಲಿಕೆ  

ಈ ನಂಬಿಕೆ ನಿರೀಕ್ಷೆಯು ನಮಗಿರುವುದರಿಂದ ನಮಗೆ ಆಶಾಭಂಗವಾಗುವುದಿಲ್ಲ. ಏಕೆಂದರೆ, ನಮಗೆ ದಾನವಾಗಿ ದಯಪಾಲಿಸಿರುವ ಪವಿತ್ರಾತ್ಮ ಅವರ ಮುಖಾಂತರ ದೇವರು ತಮ್ಮ ಪ್ರೀತಿಯನ್ನು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿಸಿದ್ದಾರೆ.


ಶತ್ರುಗಾಗದಿರಲಿ ಸಡಗರ I ನನಗೊದಗದಿರಲಿ ಮುಜುಗರ II


ಈ ಕಾರಣದಿಂದಲೇ ಪವಿತ್ರಗ್ರಂಥ ಇಂತೆನ್ನುತ್ತದೆ : “ಅಮೂಲ್ಯ ಶಿಲೆಯೊಂದನ್ನು ನಾನಾರಿಸಿಕೊಂಡೆ. ಸಿಯೋನಿನಲ್ಲಿ ಅದನ್ನೇ ಮುಖ್ಯ ಮೂಲೆಗಲ್ಲನ್ನಾಗಿರಿಸಿದೆ. ಎಂದಿಗೂ ಆಶಾಭಂಗವಾಗದು ಅದರ ಮೇಲೆ ವಿಶ್ವಾಸವಿಡುವವರಿಗೆ.”


ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ನನಗಿದೋ ದೇವನೆ ಸಹಾಯಕನು I ಆತನೆನಗೆ ಜೀವಪೋಷಕನು II


ಬಿದ್ದರೂ ಅವನೆದ್ದೇ ತೀರುವನು I ಪ್ರಭು ಅವನಿಗೆ ಊರುಗೋಲಾಗಿಹನು II


ಬತ್ತಿಹೋಗುವುದು ದುರ್ಜನರ ಭುಜಬಲ I ಸತ್ಯವಂತರಿಗೆ ಪ್ರಭುವೇ ಉನ್ನತಬಲ II


ಏಕೆಂದರೆ, “ಅವರಲ್ಲಿ ವಿಶ್ವಾಸ ಇಡುವ ಯಾರಿಗೂ ಆಶಾಭಂಗವಾಗುವುದಿಲ್ಲ,” ಎಂದು ಪವಿತ್ರಗ್ರಂಥದಲ್ಲೇ ಹೇಳಲಾಗಿದೆ.


ನನ್ನಾತ್ಮ ನಿನಗಾತುಕೊಂಡಿದೆ I ನಿನ್ನ ಬಲಗೈ ನನಗಿಂಬಾಗಿದೆ II


ಇಸ್ರಯೇಲಿಗಾದರೋ, ದೊರೆವುದು ಶಾಶ್ವತ ರಕ್ಷಣೆ ಸರ್ವೇಶ್ವರನಿಂದ; ಯುಗಯುಗಾಂತರಕ್ಕೂ ಅದಕ್ಕಾಗದು ಲಜ್ಜೆ, ಮಾನಭಂಗ.”


ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.


ನನ್ನ ಕಾಲು ಜಾರಿಹೋಯಿತು ಎನ್ನುವುದರೊಳಗೆ I ನಿನ್ನ ಅಚಲ ಪ್ರೀತಿ, ಪ್ರಭು ನೆರವಾಯಿತೆನಗೆ II


ನಿರ್ದೋಷಿಯಾದೆನ್ನನು ನೀನುದ್ಧರಿಸುವೆ I ಚಿರಕಾಲ ನಿನ್ನ ಸನ್ನಿಧಿಯಲ್ಲೆನ್ನನು ಇರಿಸುವೆ II


ಲಕ್ಷ್ಯ ಕೊಟ್ಟೆನಾದರೆ ನಿನ್ನೆಲ್ಲ ಆಜ್ಞೆಗಳಿಗೆ I ಆಸ್ಪದವಿರದು ಎನಗೆ ಪ್ರಭು, ಆಶಾಭಂಗಕೆ II


ನಿನ್ನ ನುಡಿಯ ಕೇಳಿ ಬಾಳುವಂತೆ I ತೋರು ದಾಸನೆನಗೆ ಪ್ರಸನ್ನತೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು